Petrol Diesel Price on December 05: ಜಾರ್ಖಂಡ್​, ಹರ್ಯಾಣ, ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

|

Updated on: Dec 05, 2024 | 7:12 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 05, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ.ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.63 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.96 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on December 05: ಜಾರ್ಖಂಡ್​, ಹರ್ಯಾಣ, ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ
ಪೆಟ್ರೋಲ್
Image Credit source: Indian Express
Follow us on

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.63 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.96 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 101.23 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.81 ರೂ. ಇದೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಉತ್ತರ ಪ್ರದೇಶದಲ್ಲಿ ಇಳಿಕೆ

ಇಂದು ಆಂಧ್ರಪ್ರದೇಶ, ಹರ್ಯಾಣ, ಜಾರ್ಖಂಡ್, ಕರ್ನಾಟಕ, ಒಡಿಶಾ, ತಮಿಳುನಾಡು, ತ್ರಿಪುರ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಅದೇ ಸಮಯದಲ್ಲಿ, ಗೋವಾ, ಹಿಮಾಚಲ ಪ್ರದೇಶ, ಕೇರಳ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಡಾಲರ್ ಎದುರು ರೂಪಾಯಿ ಮೌಲ್ಯ: ರೂಪಾಯಿ ದುರ್ಬಲವಾಗಿರುವುದರಿಂದ ತೈಲ ಬೆಲೆ ದುಬಾರಿಯಾಗಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ