Petrol Diesel Price on September 16: ಅಂಡಮಾನ್ ನಿಕೋಬಾರ್ನಲ್ಲಿ ಪೆಟ್ರೋಲ್ ಬೆಲೆ ಅಗ್ಗ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 16, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆಯು ಇಳಿಮುಖ ಕಾಣೂತ್ತಿದೆ. ಅಂಡಮಾನ್ ನಿಕೋಬಾರ್ನಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್ನ್ನು ಮಾರಾಟ ಮಾಡಲಾಗುತ್ತಿದೆ.
ತೈಲ ಮಾರುಕಟ್ಟೆ ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಮತ್ತೊಂದೆಡೆ, ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 70ಡಾಲರ್ ಆಗಿದೆ. ದೀರ್ಘಕಾಲದವರೆಗೆ 90 ಡಾಲರ್ನ ಆಸುಪಾಸಿನಲ್ಲಿ ಉಳಿದಿರುವ ಕಚ್ಚಾ ತೈಲವು ಈಗ ಅಗ್ಗವಾಗುತ್ತಿದೆ.
ಬ್ರೆಂಟ್ ಕ್ರೂಡ್ ನವೆಂಬರ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ 71.61 ಡಾಲರ್ ಆಗಿದ್ದರೆ, WTI ಕಚ್ಚಾ ಅಕ್ಟೋಬರ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ 68.65 ಡಾಲರ್ ಆಗಿದೆ. ಭಾರತದಲ್ಲಿ ಅಗ್ಗದ ಇಂಧನ ಮಾರಾಟ ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್.
ಅಂಡಮಾನ್ ನಿಕೋಬಾರ್ ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಕೇವಲ 82.42 ರೂ. ಆದರೆ, ಡೀಸೆಲ್ ಪ್ರತಿ ಲೀಟರ್‌ಗೆ 78.01 ರೂ. ಲೈವ್ ಮಿಂಟ್ ಪ್ರಕಾರ, ಭಾರತದಲ್ಲಿನ ಅತ್ಯಂತ ದುಬಾರಿ ಪೆಟ್ರೋಲ್ ಅದಿಲಾಬಾದ್‌ನಲ್ಲಿ ಪ್ರತಿ ಲೀಟರ್‌ಗೆ 109.41 ರೂ.ಗೆ ಮಾರಾಟವಾಗುತ್ತಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.72 ರೂ ಮತ್ತು ಡೀಸೆಲ್ 87.62 ರೂ. ಪೋರ್ಟ್ ಬ್ಲೇರ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ 82.42 ರೂ.ಗೆ ಮತ್ತು ಡೀಸೆಲ್ 78.01 ರೂ.ಗೆ ಲಭ್ಯವಿದೆ. ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 94.65 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.76 ರೂ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.98 ರೂ.
ಮತ್ತಷ್ಟು ಓದಿ: Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.56 ರೂ. ಇದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.14 ರೂ. ಇಂದು ಗಯಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.24 ರೂ. ಇಂದು ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.53 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.24 ರೂ. ಇಂದು ಬಿಲಾಸ್ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.84 ರೂ. ಇಂದು ಕುಲುವಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.37 ರೂ. ಇಂದು ರಾಜ್‌ಕೋಟ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.54 ರೂ. ಇದೆ.ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.84 ಮತ್ತು ಡೀಸೆಲ್ ಲೀಟರ್‌ಗೆ 88.92 ರೂ. ಇದೆ.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ