AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದಲ್ಲಿ ಜಿಡಿಪಿ ದರ ನಿರೀಕ್ಷೆಗಿಂತ ಕಡಿಮೆ; ನಿರುದ್ಯೋಗ ದಾಖಲೆ ಮಟ್ಟಕ್ಕೆ ಏರಿಕೆ

China GDP and Youth Unemployment Rate: ವಿಶ್ವದ ಅತಿದೊಡ್ಡ ಆರ್ಥಿಕತೆಯಲ್ಲಿ ಒಂದಾದ ಚೀನಾ 2023ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ನಲ್ಲಿ ಶೇ. 6.3ರಷ್ಟು ಜಿಡಿಪಿ ವೃದ್ಧಿ ಕಂಡಿದೆ. ನಿರುದ್ಯೋಗ ಪ್ರಮಾಣ ಶೇ. 21.3ರಷ್ಟಿರುವುದು ಕಂಡುಬಂದಿದೆ.

China: ಚೀನಾದಲ್ಲಿ ಜಿಡಿಪಿ ದರ ನಿರೀಕ್ಷೆಗಿಂತ ಕಡಿಮೆ; ನಿರುದ್ಯೋಗ ದಾಖಲೆ ಮಟ್ಟಕ್ಕೆ ಏರಿಕೆ
ಚೀನಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2023 | 10:48 AM

Share

ನವದೆಹಲಿ: ಚೀನಾದ ಆರ್ಥಿಕತೆ ಎರಡನೇ ಕ್ವಾರ್ಟರ್​ನಲ್ಲಿ (ಏಪ್ರಿಲ್​ನಿಂದ ಜೂನ್ ಅವಧಿ) ನಿರೀಕ್ಷೆಗಿಂತ ಕಡಿಮೆ ಬೆಳವಣಿಗೆ ಸಾಧಿಸಿದೆ. ಈ ಅವಧಿಯಲ್ಲಿ ಅದರ ಜಿಡಿಪಿ ದರ (GDP Rate) ಶೇ. 6.3ರಷ್ಟು ದಾಖಲಾಗಿದೆ. ಮೊದಲ ಕ್ವಾರ್ಟರ್​ಗಿಂತ ಶೇ. 0.8ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆಯಾದರೂ ಹಿಂದಿನ ವರ್ಷದ ಇದೇ ಕ್ವಾರ್ಟರ್​ನಲ್ಲಿ ದಾಖಲಾದುದಕ್ಕಿಂತ ಶೇ. 2.2ರಷ್ಟು ಕುಂಠಿತವಾಗಿದೆ. ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಚೀನಾದ ಜಿಡಿಪಿ ಬಗ್ಗೆ ಆರ್ಥಿಕ ವಿಶ್ಲೇಷಕರು ಹೆಚ್ಚು ನಿರೀಕ್ಷೆ ಇರಿಸಿದ್ದರು. ರಾಯ್ಟರ್ಸ್ ಪೋಲ್​ನಲ್ಲಿ ಭಾಗವಹಿಸಿದ್ದ ವಿವಿಧ ಆರ್ಥಿಕ ತಜ್ಞರು ಚೀನಾದ ಜಿಡಿಪಿ ಈ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.3ರಷ್ಟು ಏರಿಕೆ ಕಾಣಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ 2023ರಲ್ಲಿ ಜಿಡಿಪಿ ವಿಚಾರದಲ್ಲಿ ಚೀನಾದ ಎಣಿಕೆ ಕೈಗೂಡುವ ಸಾಧ್ಯತೆ ದಟ್ಟವಾಗಿದೆ. 2023ರಲ್ಲಿ ಶೇ. 5ರಷ್ಟು ಬೆಳವಣಿಗೆ ಸಾಧಿಸುವ ಗುರಿಯನ್ನು ಚೀನಾ ಮಾರ್ಚ್ ತಿಂಗಳಲ್ಲಿ ಇಟ್ಟಿತ್ತು. ಮೊದಲ ಎರಡೂ ಕ್ವಾರ್ಟರ್​ನಲ್ಲಿ ಜಿಡಿಪಿ ದರ ಗುರಿಗಿಂತ ಮೇಲ್ಮಟ್ಟದಲ್ಲೇ ಇದೆ.

ಇದನ್ನೂ ಓದಿ: Indian Economy: ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಆದ ಸುಧಾರಣೆಗಳು; ಮುಂದಿನ ಆರ್ಥಿಕ ವೇಗಕ್ಕೆ ಕಾರಣವಾಗುವ ಸಂಗತಿಗಳು: ಕ್ಯಾಪಿಟಲ್ ಗ್ರೂಪ್ ವಿಶ್ಲೇಷಣೆ

ಚೀನಾ ಜೊತೆ ಆರ್ಥಿಕ ಬೆಳವಣಿಗೆಯಲ್ಲಿ ಪೈಪೋಟಿ ನಡೆಸಿರುವ ಭಾರತ 2023ರ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಶೇ. 6.1ರಷ್ಟು ಜಿಡಿಪಿ ವೃದ್ಧಿಸಿತ್ತು. ಒಟ್ಟಾರೆ 2022-23ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7.2ರಷ್ಟು ಬೆಳವಣಿಗೆ ದಾಖಲಿಸಿದೆ.

ಚೀನಾ ನಿರುದ್ಯೋಗ ಶೇ. 21.3; ಹೊಸ ದಾಖಲೆ

ಚೀನಾದ ಯುವ ಸಮುದಾಯದಲ್ಲಿ ನಿರುದ್ಯೋಗ ಪ್ರಮಾಣ ದಾಖಲೆ ಮಟ್ಟಕ್ಕೆ ಏರಿದೆ. ಚೀನಾದ 15ರಿಂದ 24 ವರ್ಷ ವಯೋಮಾನದ ಯುವಜನರ ಪೈಕಿ ಶೇ. 21.3ಎಷ್ಟು ಮಂದಿ ನಿರುದ್ಯೋಗಿಗಳಿದ್ದಾರೆ ಎಂದು ನ್ಯಾಷನಲ್ ಬ್ಯೂರೋ ಆಫ್ ಸ್ಟಾಟಿಸ್ಟಿಕ್ಸ್ ಜುಲೈ 17, ಸೋಮವಾರದಂದು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಇಲ್ಲಿಯ ನಗರವಾಸಿಗಳ ನಿರುದ್ಯೋಗ ಪ್ರಮಾಣ ಶೇ. 5.2ರ ಮಟ್ಟದಲ್ಲೇ ಮುಂದುವರಿದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Inspirational Story: ಆರಂಭಿಕ ಬಂಡವಾಳ ಕೇವಲ 810 ರೂ, ಇವತ್ತು ಗೋವಿಂದ್ ಧೋಲಾಕಿಯಾ ಉದ್ದಿಮೆ ಮೌಲ್ಯ 4,800 ಕೋಟಿ ರೂ

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನ್ಯಾಷನಲ್ ಬ್ಯೂರೋ ಆಫ್ ಸ್ಟಾಟಿಸ್ಟಿಕ್ಸ್ ಸಂಸ್ಥೆಯ ವಕ್ತಾರ ಫು ಲಿಂಗುಯ್ ಅವರು, ಚೀನಾದಲ್ಲಿ ನಿರುದ್ಯೋಗ ಇನ್ನೂ ಮೇಲ್ಮಟ್ಟಕ್ಕೆ ಹೋಗಬಹುದು. ಆದರೆ, ಆಗಸ್ಟ್ ತಿಂಗಳ ಬಳಿಕ ನಿರುದ್ಯೋಗ ಪ್ರಮಾಣ ಕಡಿಮೆಯಾಗಬಹುದು ಎಂದು ಅಂದಾಜು ಮಾಡಿದ್ದಾರೆ.

ಇನ್ನು, ಭಾರತದಲ್ಲಿ ಇದೇ ವಯೋಮಾನದ ಯುವಜನರ ಪೈಕಿ 2020ರಲ್ಲಿ ನಿರುದ್ಯೋಗ ಪ್ರಮಾಣ ಶೇ. 23.22ರಷ್ಟು ಇರುವುದು ಕಂಡುಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು