Xiaomi Layoffs: ಉದ್ಯೋಗಿಗಳಿಗೆ ಶಾಕ್ ನೀಡಿದ ಶವೋಮಿ; ಭಾರೀ ಪ್ರಮಾಣದಲ್ಲಿ ಉದ್ಯೋಗ ಕಡಿತ

ಉದ್ಯೋಗ ಕಡಿತದಿಂದ ಇತ್ತೀಚೆಗೆ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದವರಿಗೆ ತೊಂದರೆಯಾಗಿದೆ. 2021ರ ಡಿಸೆಂಬರ್​ನಲ್ಲಿ ಶವೋಮಿ ನೇಮಕಾತಿ ಮಾಡಿಕೊಂಡಿತ್ತು. ಮೂರನೇ ತ್ರೈಮಾಸಿಕ ಆದಾಯದಲ್ಲಿ ಶೇಕಡಾ 9.7ರಷ್ಟು ಕುಸಿತ ಕಂಡ ಬೆನ್ನಲ್ಲೇ ಶವೋಮಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ.

Xiaomi Layoffs: ಉದ್ಯೋಗಿಗಳಿಗೆ ಶಾಕ್ ನೀಡಿದ ಶವೋಮಿ; ಭಾರೀ ಪ್ರಮಾಣದಲ್ಲಿ ಉದ್ಯೋಗ ಕಡಿತ
ಶವೋಮಿImage Credit source: Reuters
Follow us
TV9 Web
| Updated By: Ganapathi Sharma

Updated on: Dec 20, 2022 | 10:17 AM

ನವದೆಹಲಿ: ಚೀನಾದ ಅತಿದೊಡ್ಡ ಸ್ಮಾರ್ಟ್​ಫೋನ್ ತಯಾರಿಕಾ ಕಂಪನಿ ಶವೋಮಿ (Xiaomi) ಸಮಾರ್ಟ್​ಫೋನ್​ ತಯಾರಿಕಾ ಘಟಕ, ಇಂಟರ್​ನೆಟ್ ಸೇವಾ ಘಟಕಗಳು ಮತ್ತು ಇತರ ವಿಭಾಗಳಿಂದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ (Layoffs) ಎಂದು ‘ಸೌತ್ ಚೀನಾ ಮಾರ್ನಿಂಗ್ ಪೋಸ್ಟ್’ ವರದಿ ಮಾಡಿದೆ. ಕಂಪನಿಯ ಒಟ್ಟು ಉದ್ಯೋಗಿಗಳ ಸಂಖ್ಯೆಯ ಶೇಕಡಾ 15ರಷ್ಟು ಮಂದಿಯನ್ನು ವಜಾಗೊಳಿಸಲಾಗುತ್ತಿದೆ. ಸೆಪ್ಟೆಂಬರ್ 30ರ ವರೆಗಿನ ದತ್ತಾಂಶದ ಪ್ರಕಾರ, ಕಂಪನಿಯಲ್ಲಿ ಒಟ್ಟಾರೆಯಾಗಿ 35,314 ಉದ್ಯೋಗಿಗಳಿದ್ದಾರೆ. ಈ ಪೈಕಿ ಚೀನಾದಲ್ಲೇ ಅತಿಹೆಚ್ಚು, ಅಂದರೆ 32,000 ಉದ್ಯೋಗಿಗಳಿದ್ದಾರೆ ಎಂದು ವರದಿ ತಿಳಿಸಿದೆ.

ಉದ್ಯೋಗ ಕಡಿತದಿಂದ ಇತ್ತೀಚೆಗೆ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದವರಿಗೆ ತೊಂದರೆಯಾಗಿದೆ. 2021ರ ಡಿಸೆಂಬರ್​ನಲ್ಲಿ ಶವೋಮಿ ನೇಮಕಾತಿ ಮಾಡಿಕೊಂಡಿತ್ತು. ಮೂರನೇ ತ್ರೈಮಾಸಿಕ ಆದಾಯದಲ್ಲಿ ಶೇಕಡಾ 9.7ರಷ್ಟು ಕುಸಿತ ಕಂಡ ಬೆನ್ನಲ್ಲೇ ಶವೋಮಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಕೋವಿಡ್ ಸಾಂಕ್ರಾಮಿಕ, ಚೀನಾದಲ್ಲಿ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳಿಂದಾಗಿ ಬೇಡಿಕೆ ಕುಸಿತವಾಗಿತ್ತು. ಪರಿಣಾಮವಾಗಿ ಆದಾಯದಲ್ಲಿಯೂ ಕುಸಿತ ಕಂಡುಬಂದಿತ್ತು. ಸ್ಮಾರ್ಟ್​​ಫೋನ್ ಒಟ್ಟು ಮಾರಾಟದಿಂದ ಕಂಪನಿ ಶೇಕಡಾ 60ರಷ್ಟು ಆದಾಯ ಗಳಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 11ರಷ್ಟು ಕುಸಿತವಾಗಿತ್ತು ಎಂದು ವರದಿ ಉಲ್ಲೇಖಿಸಿದೆ.

Xiaomi 13: ಮಾರುಕಟ್ಟೆಗೆ ಅಪ್ಪಳಿಸಿತು ಶವೋಮಿ 13 ಸರಣಿ: ಇದರ ಫೀಚರ್ಸ್ ಕೇಳಿದ್ರೆ ದಂಗಾಗ್ತೀರ

ಉದ್ಯೋಗದಿಂದ ವಜಾಗೊಂಡವರು ವೆಯಿಬೊ, ಕ್ಸಿಹೋಂಗ್ಶು ಹಾಗೂ ಮಿಯಾಮಿಯಂಥ ಚೀನಾದ ಸಾಮಾಜಿಕ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡಿದ್ದಾರೆ. ಶವೋಮಿ ಉದ್ಯೋಗ ಕಡಿತಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಸಂದೇಶಗಳು ಹರಿದಾಡುತ್ತಿವೆ ಎಂದು ವರದಿ ತಿಳಿಸಿದೆ. ಶವೋಮಿ ಜಗತ್ತಿನ ಅತಿದೊಡ್ಡ ಸ್ಮಾರ್ಟ್​​ಫೋನ್ ತಯಾರಿಕಾ ಕಂಪನಿಗಳಲ್ಲೊಂದಾಗಿದ್ದು, ಚೀನಾದ ಅತಿದೊಡ್ಡ ಸ್ಮಾರ್ಟ್​​ಫೋನ್ ತಯಾರಿಕಾ ಕಂಪನಿಯಾಗಿದೆ. ಈ ಉದ್ಯೋಗ ಕಡಿತವು ಚೀನಾದ ಇತರ ಕಂಪನಿಗಳ ಮೇಲೂ ಪ್ರಭಾವ ಬೀರುತ್ತಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಶವೋಮಿ 13ನೇ ಸರಣಿಯ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡಿತ್ತು. ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್​ಫೋನ್​ಗಳು ಅನಾವರಣವಾಗಿದ್ದವು. ಇವು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಸದ್ಯಕ್ಕೆ ಈ ಎರಡೂ ಸ್ಮಾರ್ಟ್​ಫೋನ್​ಗಳು ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿವೆ. ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ. ಚೀನಾದಲ್ಲಿ ಶವೋಮಿ 13 8GM RAM ಮತ್ತು 128GB ಸ್ಟೋರೇಜ್ ಮಾಡೆಲ್‌ ಬೆಲೆ CNY 3,999, ಅಂದರೆ ಭಾರತದಲ್ಲಿ ಸುಮಾರು 47,300ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಸಂಗ್ರಹದ ಬೆಲೆ CNY 4,999 (ಸುಮಾರು 60,000ರೂ.) ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ