AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸಾರ್ವಕಾಲಿನ ಎತ್ತರದಲ್ಲಿ ದಿನಾಂತ್ಯದ ವಹಿವಾಟು ಮುಗಿಸಿದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ದಾಖಲೆ ಪ್ರಮಾಣದ ಎತ್ತರದಲ್ಲಿ ಅಕ್ಟೋಬರ್ 18, 2021ರಂದು ವಹಿವಾಟು ಚುಕ್ತಾ ಮಾಡಿದೆ. ನಿಫ್ಟಿಯಲ್ಲಿ ಹೆಚ್ಚಿನ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: ಸಾರ್ವಕಾಲಿನ ಎತ್ತರದಲ್ಲಿ ದಿನಾಂತ್ಯದ ವಹಿವಾಟು ಮುಗಿಸಿದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ
ಷೇರು ಮಾರುಕಟ್ಟೆ ಏರಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 18, 2021 | 4:08 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಅಕ್ಟೋಬರ್ 18ನೇ ತಾರೀಕಿನ ಸೋಮವಾರ ಏರಿಕೆಯನ್ನು ದಾಖಲಿಸಿವೆ. ಸೆನ್ಸೆಕ್ಸ್ 459.64 ಅಥವಾ ಶೇ 0.75ರಷ್ಟ ಹೆಚ್ಚಳವಾಗಿ 61,765.59 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 138.50 ಪಾಯಿಂಟ್ಸ್ ಅಥವಾ ಶೇ 0.76ರಷ್ಟು ಹೆಚ್ಚಳವಾಗಿ 18,477 ಪಾಯಿಂಟ್ಸ್​​ನೊಂದಿಗೆ ವ್ಯವಹಾರವನ್ನು ಚುಕ್ತಾಗೊಳಿಸಿದೆ. ಇಂದಿನ ವಹಿವಾಟಿನಲ್ಲಿ 1677 ಕಂಪೆನಿಯ ಷೇರುಗಳು ಮೇಲೇರಿದರೆ, 1563 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದವು. ಇನ್ನು 127 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

ಫಾರ್ಮಾಸ್ಯುಟಿಕಲ್ಸ್ ಹೊರತುಪಡಿಸಿದಂತೆ ಇತರ ಎಲ್ಲ ವಲಯಗಳು ಏರಿಕೆಯಲ್ಲೇ ದಿನಾಂತ್ಯದ ವ್ಯವಹಾರವನ್ನು ಮುಕ್ತಾಯಗೊಳಿಸಿದವು. ಲೋಹ, ವಿದ್ಯುತ್, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಸೂಚ್ಯಂಕಗಳು ಶೇ 2ರಿಂದ ಶೇ 4ರಷ್ಟು ಏರಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ಕ್ಯಾಪ್​ ತಲಾ ಶೇ 1ರಷ್ಟು ಸೇರ್ಪಡೆಗೊಳಿಸಿದವು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಹಿಂಡಾಲ್ಕೋ ಶೇ 5.17 ಇನ್ಫೋಸಿಸ್​ ಶೇ 4.45 ಟೆಕ್​ ಮಹೀಂದ್ರಾ ಶೇ 3.41 ಜೆಎಸ್​ಡಬ್ಲ್ಯು ಸ್ಟೀಲ್ ಶೇ 3.31 ಟಾಟಾ ಸ್ಟೀಲ್ ಶೇ 2.62

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಎಚ್​ಸಿಎಲ್​ ಟೆಕ್ನಾಲಜೀಸ್ ಶೇ -2.38 ಮಹೀಂದ್ರಾ ಅಂಡ್ ಮಹೀಂದ್ರಾ ಶೇ -2.20‘ ಏಷ್ಯನ್ ಪೇಂಟ್ಸ್ ಶೇ -1.71 ಡಾ. ರೆಡ್ಡೀಸ್ ಲ್ಯಾಬ್ಸ್ ಶೇ -1.64 ಬ್ರಿಟಾನಿಯಾ ಶೇ -1.48

ಇದನ್ನೂ ಓದಿ: Do’s And Don’ts In Share Market: ಷೇರು ಮಾರ್ಕೆಟ್​ನಲ್ಲಿ ಮಾಡುವ ಹಾಗೂ ಮಾಡಬಾರದು ಕೆಲಸಗಳಿವು

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್