Closing Bell: 58 ಸಾವಿರ ಪಾಯಿಂಟ್ಸ್​ಗಿಂತ ಕೆಳಗಿಳಿದ ಸೆನ್ಸೆಕ್ಸ್; ಪವರ್​ಗ್ರಿಡ್ ಕಾರ್ಪೊರೇಷನ್ ಶೇ 4ರಷ್ಟು ಇಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 3ನೇ ತಾರೀಕಿನ ಶುಕ್ರವಾರ ಭಾರೀ ಇಳಿಕೆ ಆಗಿದೆ. ಕುಸಿತ ಹಾಗೂ ಏರಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: 58 ಸಾವಿರ ಪಾಯಿಂಟ್ಸ್​ಗಿಂತ ಕೆಳಗಿಳಿದ ಸೆನ್ಸೆಕ್ಸ್; ಪವರ್​ಗ್ರಿಡ್ ಕಾರ್ಪೊರೇಷನ್ ಶೇ 4ರಷ್ಟು ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 03, 2021 | 5:45 PM

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್​ 3ನೇ ತಾರೀಕಿನ ಶುಕ್ರವಾರ ಭಾರೀ ಇಳಿಕೆ ಆಗಿದೆ. ಅಂದಹಾಗೆ ಸೆನ್ಸೆಕ್ಸ್ 58 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಇಳಿದಿದೆ. ಷೇರುಪೇಟೆಗೆ ವಾರಾಂತ್ಯದ ದಿನವಾದ ಶುಕ್ರವಾರದ ಕೊನೆ ಸೆನ್ಸೆಕ್ಸ್ 764.83 ಪಾಯಿಂಟ್ಸ್ ಅಥವಾ ಶೇ 1.31 ಇಳಿಕೆ ಕಂಡು 57,696.46 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಮುಗಿದಿದೆ. ಇನ್ನು ನಿಫ್ಟಿ ಸೂಚ್ಯಂಕವು 205 ಪಾಯಿಂಟ್ಸ್​ ಅಥವಾ ಶೇ 1.18ರಷ್ಟು ಕುಸಿತ ಕಂಡು, 17,196.70 ಪಾಯಿಂಟ್ಸ್​​ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ. 1722 ಕಂಪೆನಿಯ ಷೇರುಗಳು ಏರಿಕೆ ದಾಖಲಿಸಿದರೆ, 1453 ಕಂಪೆನಿಯ ಷೇರುಗಳು ಇಳಿಕೆ ಕಂಡಿವೆ. ಇನ್ನು 137 ಕಂಪೆನಿಗಳ ಷೇರಿನ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಕ್ಯಾಪಿಟಲ್ ಗೂಡ್ಸ್​ ಹೊರತುಪಡಿಸಿ ಎಲ್ಲ ವಲಯದ ಸೂಚ್ಯಂಕಗಳು ಇಳಿಕೆಯಲ್ಲೇ ದಿನಾಂತ್ಯ ಮುಗಿಸಿದೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಮಹತ್ವದ ಬದಲಾವಣೆಗಳೇನೂ ಆಗಿಲ್ಲ. ವಿಶ್ಲೇಷಕರ ಅಭಿಪ್ರಾಯ ಪ್ರಕಾರ, ಮುಂದಿನ ವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯ ಬಗ್ಗೆ ಹೂಡಿಕೆದಾರರು ಎಚ್ಚರಿಕೆ ವಹಿಸಿದ್ದಾರೆ. ಜತೆಗೆ ಭಾರತದಲ್ಲಿ ಒಮಿಕ್ರಾನ್ ಪ್ರಕರಣ ವರದಿ ಆದ ಮೇಲೆ ಆತಂಕ ಮತ್ತೂ ಹೆಚ್ಚಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಯುಪಿಎಲ್ ಶೇ 2.08 ಬಿಪಿಸಿಎಲ್ ಶೇ 1.86 ಒಎನ್​ಜಿಸಿ ಶೇ 1.32 ಐಒಸಿ ಶೇ 1.28 ಲಾರ್ಸನ್ ಶೇ 0.67

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಪವರ್​ಗ್ರಿಡ್ ಕಾರ್ಪೊರೇಷನ್ ಶೇ -3.92 ರಿಲಯನ್ಸ್ ಶೇ -3.00 ಕೊಟಕ್ ಮಹೀಂದ್ರಾ ಶೇ -2.55 ಟೆಕ್​ ಮಹೀಂದ್ರಾ ಶೇ -2.23 ಏಷ್ಯನ್ ಪೇಂಟ್ಸ್ ಶೇ -2.21

ಇದನ್ನೂ ಓದಿ: Multibagger: ಈ ಷೇರಿನ ಮೇಲೆ ಹೂಡಿಕೆ ಮಾಡಿದ್ದ 1 ಲಕ್ಷ ರೂಪಾಯಿ 8 ತಿಂಗಳಲ್ಲಿ 71 ಲಕ್ಷ ರೂಪಾಯಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ