AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 660 ಪಾಯಿಂಟ್, ನಿಫ್ಟಿ 194 ಪಾಯಿಂಟ್ ಏರಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 13ನೇ ತಾರೀಕಿನ ಮಂಗಳವಾರದಂದು ಭರ್ಜರಿ ಏರಿಕೆ ಕಂಡಿವೆ. ಸೋಮವಾರದಂದು ಭಾರೀ ಇಳಿಕೆ ಕಂಡಿದ್ದ ಮಾರುಕಟ್ಟೆಯಲ್ಲಿ ಮತ್ತೆ ಮೇಲ್ಮುಖದ ಪಯಣ ಆತ್ಮವಿಶ್ವಾಸ ಮೂಡಿಸಿದೆ.

Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 660 ಪಾಯಿಂಟ್, ನಿಫ್ಟಿ 194 ಪಾಯಿಂಟ್ ಏರಿಕೆ
ಸಾಂದರ್ಭಿಕ ಚಿತ್ರ
Srinivas Mata
|

Updated on: Apr 13, 2021 | 7:32 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಂಗಳವಾರದಂದು (ಏಪ್ರಿಲ್ 13, 2021) ಭರ್ಜರಿ ಏರಿಕೆ ದಾಖಲಿಸಿವೆ. ಎನ್​​ಎಸ್​ಇ ನಿಫ್ಟಿ 50 ಸೂಚ್ಯಂಕವು 194 ಪಾಯಿಂಟ್ ಮೇಲೇರಿ, 14,504 ಪಾಯಿಂಟ್​ನೊಂದಿಗೆ ದಿನದ ವಹಿವಾಟು ಕೊನೆಗೊಳಿಸಿತು. ಇನ್ನು ಬಿಎಸ್​ಇ ಸೆನ್ಸೆಕ್ಸ್ ಸೂಚ್ಯಂಕವು 660.68 ಪಾಯಿಂಟ್ ಹೆಚ್ಚಳವಾಗಿ, 48,544.06ರಲ್ಲಿ ದಿನದ ಕೊನೆಗೆ ವ್ಯವಹಾರ ಮುಗಿಸಿತು. ನಿಫ್ಟಿ ಬ್ಯಾಂಕ್ ಸೂಚ್ಯಂಕವು 979.60 ಪಾಯಿಂಟ್​ಗಳ ಗಳಿಕೆ ಕಂಡು, 31,771.60 ಪಾಯಿಂಟ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿತು. ಈ ದಿನದ ವಹಿವಾಟಿನಲ್ಲಿ 1938 ಕಂಪೆನಿಯ ಷೇರುಗಳ ಬೆಲೆ ಹೆಚ್ಚಳವಾದರೆ, 926 ಕಂಪೆನಿಯ ಷೇರುಗಳ ಬೆಲೆಯಲ್ಲಿ ಇಳಿಕೆ ಆಯಿತು. ಇನ್ನು 182 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 1.46ರಷ್ಟು ಮೇಲೇರಿತು. ಇನ್ನು ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 1.21ರಷ್ಟು ಹೆಚ್ಚಳವಾಯಿತು. ಸೋಮವಾರದಂದು ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದ್ದ ಷೇರು ಮಾರುಕಟ್ಟೆಯಲ್ಲಿ ಶೇಕಡಾ 40ರಷ್ಟು ಚೇತರಿಕೆ ಕಾಣಿಸಿಕೊಳ್ಳಲು ಇಂದಿನ ಏರಿಕೆಯು ಕಾರಣ ಆಯಿತು. ಕೊರೊನಾ ಬಿಕ್ಕಟ್ಟು ನಿಯಂತ್ರಣಕ್ಕಾಗಿ ಸರ್ಕಾರದಿಂದ ವೇಗವಾಗಿ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರಲ್ಲಿ ಭರವಸೆ ಮೂಡಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಟಾಪ್ 5 ಕಂಪೆನಿಯ ಷೇರುಗಳು ಮಹೀಂದ್ರಾ ಅಂಡ್ ಮಹೀಂದ್ರಾ- ಶೇ 7.95 ಬಜಾಜ್ ಫಿನ್​ಸರ್ವ್- ಶೇ 7.02 ಟಾಟಾ ಮೋಟಾರ್ಸ್- ಶೇ 5.69 ಬಜಾಜ್ ಫೈನಾನ್ಸ್- ಶೇ 4.83 ಮಾರುತಿ ಸುಜುಕಿ- ಶೇ 4.53

ನಿಫ್ಟಿಯಲ್ಲಿ ಇಳಿಕೆ ಕಂಡ ಟಾಪ್ 5 ಕಂಪೆನಿಯ ಷೇರುಗಳು ಡಾ ರೆಡ್ಡೀಸ್ ಲ್ಯಾಬ್ಸ್- ಶೇ 4.40 ಟಿಸಿಎಸ್- ಶೇ 4.39 ಟೆಕ್ ಮಹೀಂದ್ರಾ- ಶೇ 3.65 ವಿಪ್ರೋ- ಶೇ 3.16 ಎಚ್​ಸಿಎಲ್ ಟೆಕ್- ಶೇ 2.58

ಇದನ್ನೂ ಓದಿ: Penny Stocks: ಕೊರೊನಾ ಆತಂಕವಿದ್ದರೂ ಬಂಗಾರದ ಫಸಲು ನೀಡಿದ ಚಿಲ್ಲರೆ ಬೆಲೆಯ ಷೇರುಗಳು ಇವು..

(Closing Bell: On April 13, 2021, Indian stock market index Sensex, nifty gains. Here are the top gainers and losers of nifty.)

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!