AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ದಿನದ ಕನಿಷ್ಠ ಮಟ್ಟದಿಂದ 722 ಪಾಯಿಂಟ್ಸ್ ಚೇತರಿಸಿಕೊಂಡ ನಂತರ ಸೆನ್ಸೆಕ್ಸ್ 410 ಪಾಯಿಂಟ್ಸ್ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸೆ. 28ರ ಮಂಗಳವಾರದಂದು ದಿನದ ಕನಿಷ್ಠ ಮಟ್ಟದಿಂದ ಚೇತರಿಸಿಕೊಂಡು 410 ಪಾಯಿಂಟ್ಸ್​ ಇಳಿಕೆಯೊಂದಿಗೆ ವಹಿವಾಟು ಮುಗಿಸಿದೆ.

Closing Bell: ದಿನದ ಕನಿಷ್ಠ ಮಟ್ಟದಿಂದ 722 ಪಾಯಿಂಟ್ಸ್ ಚೇತರಿಸಿಕೊಂಡ ನಂತರ ಸೆನ್ಸೆಕ್ಸ್ 410 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 28, 2021 | 4:13 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೆಪ್ಟೆಂಬರ್ 28ನೇ ತಾರೀಕಿನ ಮಂಗಳವಾರದಂದು ಇಳಿಕೆಯಲ್ಲಿ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ. ಆದರೆ ಈ ದಿನದ ಕನಿಷ್ಠ ಮಟ್ಟದಿಂದ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ಅದಕ್ಕೆ ಕಾರಣವಾಗಿದ್ದು ಲೋಹ, ವಿದ್ಯುತ್ ಮತ್ತು ತೈಲ ಹಾಗೂ ಅನಿಲ ಕಂಪೆನಿಯ ಷೇರುಗಳಲ್ಲಿನ ಖರೀದಿ. ಈ ದಿನದ ಕೊನೆಗೆ ಸೆನ್ಸೆಕ್ಸ್ 410.28 ಪಾಯಿಂಟ್ಸ್ ಅಥವಾ ಶೇ 0.68ರಷ್ಟು ಇಳಿಕೆ ಕಂಡು, 59,667.60 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 106.50 ಅಥವಾ ಶೇ 0.60ರಷ್ಟು ಕುಸಿತ ಕಂಡು 17,748.60 ಪಾಯಿಂಟ್ಸ್​​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿ 1463ರಷ್ಟು ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1715 ಕಂಪೆನಿಯ ಷೇರುಗಳು ಇಳಿಕೆ ಕಂಡವು ಮತ್ತು 164 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್​ ಸೂಚ್ಯಂಕಗಳು ತಲಾ ಶೇ 0.5ರಷ್ಟು ಇಳಿಕೆ ಕಂಡವು. ವಲಯವಾರು ನೋಡುವುದಾದರೆ, ಮಾಹಿತಿ ತಂತ್ರಜ್ಞಾನ ಹಾಗೂ ರಿಯಾಲ್ಟಿ ಸೂಚ್ಯಂಕಗಳು ಶೇ 2ರಿಂದ ಶೇ 3ರಷ್ಟು ಕುಸಿದವು. ವಿದ್ಯುತ್, ತೈಲ ಹಾಗೂ ಅನಿಲ ಮತ್ತು ಲೋಹದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಆದವು. ಮಾರ್ಕೆಟ್​ನಲ್ಲಿ ಇಳಿಕೆ ಕಂಡುಬಂದಿದ್ದರೂ ನಿಫ್ಟಿ50 17,600 ಪಾಯಿಂಟ್​ನಲ್ಲಿ ಉಳಿಸಿಕೊಳ್ಳಲು ಯತ್ನಿಸಿದೆ. ಇದರರ್ಥ ಏನೆಂದರೆ 17,550ರಿಂದ 17,600 ಪಾಯಿಂಟ್ಸ್​ ಬಹಳ ಮುಖ್ಯವಾದ ಸಪೋರ್ಟ್​ ಝೋನ್. ಅದು ಉಳಿದುಕೊಳ್ಳುವುದು ಬಹಳ ಮುಖ್ಯ ಎನ್ನುತ್ತಾರೆ ವಿಶ್ಲೇಷಕರು. ಒಂದು ವೇಳೆ ಈ ಮಟ್ಟವನ್ನು ಉಳಿಸಿಕೊಳ್ಳಲು ಸಾಧ್ಯವಾದಲ್ಲಿ 18 ಸಾವಿರ ಪಾಯಿಂಟ್ಸ್​ ತಲುಪಬಹುದು ಎಂದು ಅಭಿಪ್ರಾಯ ಪಡುತ್ತಾರೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಪವರ್​ ಗ್ರಿಡ್​ ಕಾರ್ಪೊರೇಷನ್ ಶೇ 4.52 ಕೋಲ್ ಇಂಡಿಯಾ ಶೇ 4.49 ಎನ್​ಟಿಪಿಸಿ ಶೇ 4.02 ಐಒಸಿ ಶೇ 3.62 ಬಿಪಿಸಿಎಲ್​ ಶೇ 2.14

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಭಾರ್ತಿ ಏರ್​ಟೆಲ್ ಶೇ -3.65 ಟೆಕ್ ಮಹೀಂದ್ರಾ ಶೇ -3.44 ಬಜಾಜ್​ ಫೈನಾನ್ಸ್​ ಶೇ -3.23 ಡಿವೀಸ್​ ಲ್ಯಾಬ್ಸ್ ಶೇ -3.01 ಬಜಾಜ್​ ಫಿನ್​ಸರ್ವ್​ ಶೇ -2.67

ಇದನ್ನೂ ಓದಿ: Stock Market Tips: 60 ಸಾವಿರ ಪಾಯಿಂಟ್ಸ್​ ತಲುಪಿದ ನಂತರ ಷೇರು ಮಾರ್ಕೆಟ್​ ಮುಂದೆ ಏನಾಗಬಹುದು?

(Closing Bell Stock Market Index Sensex Recovered From Low Levels And Ends With More Than 400 Points Down)

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!