AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CNG Price Hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗ ಬೆನ್ನಲ್ಲೇ ಈಗ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆಯಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೆಹಲಿ ಮತ್ತು ಮುಂಬೈನಲ್ಲಿ ಬೆಲೆ ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯು ಈಗಾಗಲೇ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಸಾರಿಗೆ ವೆಚ್ಚ ಹೆಚ್ಚಾಗುವ ಭೀತಿ ಎದುರಾಗಿದೆ.

CNG Price Hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ
ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ
ಭಾವನಾ ಹೆಗಡೆ
|

Updated on:May 15, 2026 | 8:16 AM

Share

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ.

ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ?

ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿನ ಬೆಲೆ ಈಗ ಪ್ರತಿ ಕೆಜಿಗೆ 84 ರೂ. ತಲುಪಿದೆ.

ಬೆಂಗಳೂರಿನಲ್ಲೂ ಈ ಏರಿಕೆಯ ಪರಿಣಾಮ ಶೀಘ್ರದಲ್ಲೇ ಕಂಡುಬರುವ ಸಾಧ್ಯತೆಯಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯ ಕುಸಿತವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ಕಂಪನಿಗಳು ತಿಳಿಸಿವೆ.

ಆಟೋ ಚಾಲಕರಿಗೆ ಸಂಕಷ್ಟ

ಸಿಎನ್‌ಜಿ ದರ ಏರಿಕೆಯು ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದೆ. ಈ ಹಿಂದೆಯೂ ಇಂಧನ ಬೆಲೆ ಏರಿಕೆಯಾದಾಗ ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸಿದ್ದರು. ದಿನವಿಡೀ ದುಡಿದರೂ ಅನಿಲದ ದರ ಹೆಚ್ಚಳದಿಂದಾಗಿ ಕೈಗೆ ಸಿಗುವ ಲಾಭ ಶೂನ್ಯವಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಬಾಡಿಗೆ ದರ ಹೆಚ್ಚಿಸಿದರೆ ಜನ ಆಟೋ ಹತ್ತಲ್ಲ, ಹೆಚ್ಚಿಸದಿದ್ದರೆ ನಮಗೆ ಹೊಟ್ಟೆ ತುಂಬಲ್ಲ ಎಂಬುದು ಅವರ ಸಮಸ್ಯೆ. ಬೆಂಗಳೂರಿನಂತಹ ನಗರಗಳಲ್ಲಿ ಈಗಾಗಲೇ ಸಿಎನ್‌ಜಿ ಕೊರತೆಯಿಂದಾಗಿ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು, ಈಗ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:02 am, Fri, 15 May 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ