AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ರಾಷ್ಟ್ರ ನಿರ್ಮಾಣ, ಸ್ವಾವಲಂಬನೆಯತ್ತ ಕಲ್ಲಿದ್ದಲು- ಗಣಿಗಾರಿಕೆ ಕ್ಷೇತ್ರದ ಪ್ರಮುಖ ಪಾತ್ರ ಎಂದ ಪ್ರಲ್ಹಾದ್ ಜೋಶಿ

ದೇಶದಲ್ಲಿ ಕಲ್ಲಿದ್ದಲು ಹಾಗೂ ಗಣಿಗಾರಿಕೆ ಕ್ಷೇತ್ರವು ರಾಷ್ಟ್ರ ನಿರ್ಮಾಣ ಮತ್ತು ಸ್ವಾವಲಂಬನೆಯತ್ತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ

Pralhad Joshi: ರಾಷ್ಟ್ರ ನಿರ್ಮಾಣ, ಸ್ವಾವಲಂಬನೆಯತ್ತ ಕಲ್ಲಿದ್ದಲು- ಗಣಿಗಾರಿಕೆ ಕ್ಷೇತ್ರದ ಪ್ರಮುಖ ಪಾತ್ರ ಎಂದ ಪ್ರಲ್ಹಾದ್ ಜೋಶಿ
ಕಾರ್ಯಕ್ರಮದಲ್ಲಿ ಪ್ರಲ್ಹಾದ್ ಜೋಶಿ ಮತ್ತು ಇತರರು
TV9 Web
| Edited By: |

Updated on:Jun 23, 2023 | 11:49 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಆತ್ಮನಿರ್ಭರ ಭಾರತದ ದೃಷ್ಟಿಕೋನವನ್ನು ಇಟ್ಟುಕೊಂಡು ದೇಶದಲ್ಲಿ ಕಲ್ಲಿದ್ದಲು ಹಾಗೂ ಗಣಿಗಾರಿಕೆ ಕ್ಷೇತ್ರವು ರಾಷ್ಟ್ರ ನಿರ್ಮಾಣ ಮತ್ತು ಸ್ವಾವಲಂಬನೆಯತ್ತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದ ಅಡಿಯಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ (ಸಿಪಿಎಸ್‌ಇ) ಅಧಿಕೃತವಲ್ಲದ ನಿರ್ದೇಶಕರ (ಎನ್‌ಒಡಿ) ಮೊದಲ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯಕ್ಷಮತೆಯನ್ನು ಇನ್ನಷ್ಟು ಸುಧಾರಿಸಲು ಎನ್‌ಒಡಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳು ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರಗಳಾಗಿವೆ. ಪ್ರಸ್ತುತ ಸರ್ಕಾರವು ರಾಷ್ಟ್ರ ನಿರ್ಮಾಣದಲ್ಲಿ ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳ ಅತ್ಯುತ್ತಮ ಬಳಕೆಯನ್ನು ಗಮನಿಸುತ್ತಿದೆ ಎಂದು ಜೋಶಿ ಹೇಳಿದ್ದಾರೆ.

ಹೆಚ್ಚಿನ ಉತ್ಪಾದನಾ ಗುರಿಗಳನ್ನು ಸಾಧಿಸಲು ಕ್ಷೇತ್ರಗಳು ಪರಿವರ್ತನೆಯ ಕ್ರಮದಲ್ಲಿವೆ ಎಂದಿದ್ದಾರೆ. ಕಲ್ಲಿದ್ದಲು, ಗಣಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ರಾವ್​ಸಾಹೇಬ್ ಪಾಟೀಲ್ ದಾನ್ವೆ, ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಡಾ. ಅನಿಲ್ ಕುಮಾರ್ ಜೈನ್, ಕಲ್ಲಿದ್ದಲು ಮತ್ತು ಗಣಿ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಮತ್ತು ಅಂಗಸಂಸ್ಥೆಗಳ ಎನ್ಒಡಿಗಳು ಅಭಿಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಲ್ಹಾದ್ ಜೋಶಿಯವರ ಬಗ್ಗೆ ಮೆಚ್ಚುಗೆಯ ಮಾತನಾಡಿದ ಅಮಿತ್ ಶಾ, ಕಲ್ಲಿದ್ದಲು ಆಮದು ಮಾಡಿಕೊಳ್ಳುವ ಪ್ರಮಾಣವು ಭಾರತದಲ್ಲಿ ಗಣನೀಯವಾಗಿ ಕಡಿಮೆ ಆಗಿದೆ. ಇದಕ್ಕೆ ಪ್ರಲ್ಹಾದ್​ ಜೋಶಿ ಅವರ ನೇತೃತ್ವದ ಶ್ರಮ ಕಾರಣ. ಇದು ದೇಶದ ಆರ್ಥಿಕತೆಗೆ ಉತ್ತಮ ಲಕ್ಷಣ ಎಂದರು.

Published On - 7:40 pm, Tue, 12 July 22