AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ

ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಇಳಿಕೆ: ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್ ಬೆಲೆಯಲ್ಲಿ ದೆಹಲಿ ಮತ್ತು ಕೋಲ್ಕತ್ತಾದಲ್ಲಿ 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಗೃಹ ಬಳಕೆಯ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on:Aug 01, 2026 | 8:11 AM

Share

ಮುಖ್ಯಾಂಶಗಳು

  • ಕಮರ್ಷಿಯಲ್ LPG ಸಿಲಿಂಡರ್ ದರ ಇಳಿಕೆ
  • ದೆಹಲಿಯಲ್ಲಿ ₹202, ಕೋಲ್ಕತ್ತಾದಲ್ಲಿ ₹209 ಕಡಿತ
  • ಗೃಹಬಳಕೆಯ LPG ದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ, ಆಗಸ್ಟ್ 1: ವಾಣಿಜ್ಯ ಬಳಕೆಯ ಅಡುಗೆ ಅನಿಲ ಬಳಸುವವರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ (LPG Cylinder) ಬೆಲೆಯನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್​​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸದ್ಯ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ದರ202 ರೂ. ಕಡಿತಗೊಳಿಸಲಾಗಿದೆ. ಕೋಲ್ಕತ್ತಾದಲ್ಲಿ 209 ರೂ. ಬೆಲೆ ಇಳಿಕೆಯಾಗಿದೆ. ಬೆಲೆ ಪರಿಷ್ಕರಣೆಯ ಬಳಿಕ ಕೋಲ್ಕತ್ತಾದಲ್ಲಿ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ 2,872.50 ರೂ. ಆಗಿದೆ.

ಸತತ ಎರಡನೇ ತಿಂಗಳು ವಾಣಿಜ್ಯ ಎಲ್‌ಪಿಜಿ ದರ ಇಳಿಕೆ

ಈಗಿನ ದರ ಇಳಿಕೆಯೊಂದಿಗೆ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಸತತ ಎರಡನೇ ತಿಂಗಳು ಇಳಿಕೆಯಾದಂತಾಗಿದೆ. ಜುಲೈ 1ರಂದು ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್‌ ಬೆಲೆ ₹183.50ರಷ್ಟು ಕಡಿಮೆಯಾಗಿತ್ತು. ಆಗ ಸಿಲಿಂಡರ್‌ ಬೆಲೆ ₹2,930ಕ್ಕೆ ಇಳಿಕೆಯಾಗಿತ್ತು. ಇದೇ ವೇಳೆ 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ ಬೆಲೆಯನ್ನೂ ₹13ರಷ್ಟು ಕಡಿತಗೊಳಿಸಲಾಗಿತ್ತು. ದೆಹಲಿಯಲ್ಲಿ ಇದರ ಬೆಲೆ ₹808.50ಕ್ಕೆ ಇಳಿಕೆಯಾಗಿತ್ತು.

ಕಮರ್ಷಿಯಲ್ ಸಿಲಿಂಡರ್ ದರ ಇಳಿಕೆ ಬಗ್ಗೆ ಎಎನ್​ಐ ಎಕ್ಸ್ ಸಂದೇಶ

ಗೃಹ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಇತ್ತೀಚಿನ ದರ ಇಳಿಕೆಯಿಂದ ರೆಸ್ಟೋರೆಂಟ್‌, ಹೋಟೆಲ್‌, ಕ್ಯಾಟರಿಂಗ್‌ ಸೇರಿದಂತೆ ವಾಣಿಜ್ಯ ಬಳಕೆದಾರರಿಗೆ ಕೊಂಚ ಮಟ್ಟಿಗೆ ಪರಿಹಾರ ಸಿಗುವ ನಿರೀಕ್ಷೆಯಿದೆ. ಅಡುಗೆ ಅನಿಲವು ಇಂತಹ ಉದ್ಯಮಗಳ ಪ್ರಮುಖ ನಿರ್ವಹಣಾ ವೆಚ್ಚವಾಗಿರುವುದರಿಂದ, ಬೆಲೆ ಇಳಿಕೆ ಒಟ್ಟಾರೆ ಆಹಾರ ಮತ್ತು ಆತಿಥ್ಯ ಕ್ಷೇತ್ರದ ಮೇಲಿನ ವೆಚ್ಚದ ಒತ್ತಡವನ್ನು ತಗ್ಗಿಸಬಹುದು. ಕಳೆದ ಕೆಲವು ತಿಂಗಳುಗಳಲ್ಲಿ ಜಾಗತಿಕ ಎಲ್‌ಪಿಜಿ ಮಾರುಕಟ್ಟೆಯಲ್ಲಿನ ಪೂರೈಕೆ ಆತಂಕ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮ ವಾಣಿಜ್ಯ ಬಳಕೆದಾರರು ಹೆಚ್ಚಿನ ಇಂಧನ ವೆಚ್ಚ ಎದುರಿಸಿದ್ದರು. ಇದೀಗ ಸತತ ಎರಡನೇ ತಿಂಗಳ ದರ ಇಳಿಕೆ, ಇತ್ತೀಚಿನ ಏರಿಕೆಯಿಂದ ಭಾಗಶಃ ರಿಲಾಕ್ಸ್ ನೀಡಿದಂತಾಗಿದೆ.

ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆಯ ಬೆನ್ನಲ್ಲೇ ಎಲ್​ಪಿಜಿ ದರ ಇಳಿಕೆ

ಇನ್ನು ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ದೇಶದ ಇಂಧನ ಸನ್ನದ್ಧತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಎರಡು ದಿನಗಳ ಬಳಿಕ ಈ ದರ ಪರಿಷ್ಕರಣೆ ನಡೆದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:50 am, Sat, 1 August 26

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್