Commercial LPG Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆ
LPG Cylinder Price in Bangalore; 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ದೇಶೀಯ ತೈಲ ಕಂಪನಿಗಳು 51.50 ರೂ. ಕಡಿಮೆ ಮಾಡಿವೆ. ಈ ದರ ಇಳಿಕೆಯು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ನೆರವಾಗಲಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ. ಪ್ರಸ್ತುತ ಬೆಂಗಳೂರಿನಲ್ಲಿ ಯಾವ ಸಿಲಿಂಡರ್ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ.

ನವದೆಹಲಿ, ಸೆಪ್ಟೆಂಬರ್ 1: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು (Oil Marketing Companies) ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (Commercial LPG Cylinder Price) 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ (LPG Cylinder) 51.50 ರೂ.ಗಳ ಕಡಿತ ಆಗಿದೆ. ಜಾಗತಿಕ ಇಂಧನ ಬೆಲೆ ಮತ್ತು ಇನ್‌ಪುಟ್ ವೆಚ್ಚಗಳಿಗೆ ಸಂಬಂಧಿಸಿದ ನಿಯಮಿತ ಮಾಸಿಕ ಪರಿಷ್ಕರಣೆಗಳ ಭಾಗವಾಗಿ ಈ ದರ ಇಳಿಕೆ ಕಡಿತ ಮಾಡಲಾಗಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಎಷ್ಟು?
ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈ 51.50 ರೂ. ಇಳಿಕೆಯೊಂದಿಗೆ 1,653 ರೂ. ಆಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ. ಆಗಿದೆ. ವಾಣಿಜ್ಯ ಬಕೆಯ ಎಲ್‌ಪಿಜಿ ಸಿಲಿಂಡರ್ 47.5 ಕೆಜಿದಕ್ಕೆ 4,129 ರೂ. ಆಗಿದೆ. ಅಂದರೆ, ಇದರ ಬೆಲೆ 127 ರೂ. ಇಳಿಕೆಯಾಗಿದೆ.
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ ಇಲ್ಲ
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮನೆಗಳಲ್ಲಿ ಅಡುಗೆಗೆ ಬಳಸುವ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯಾಸ್ಥಿತಿ ಕಾಯ್ದಕೊಳ್ಳಲಾಗಿದೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯು ದೈನಂದಿನ ಕಾರ್ಯಾಚರಣೆಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಹೆಚ್ಚು ಅವಲಂಬಿಸಿರುವ ತಿಂಡಿ ತಿನಿಸು ಮಾರಾಟ ಉದ್ಯಮ, ಹೋಟೆಲ್‌ಗಳು, ಢಾಬಾಗಳು ಮತ್ತು ಸಣ್ಣ ಪ್ರಮಾಣದ ಆಹಾರ ವ್ಯವಹಾರಗಳಿಗೆ ತುಸು ರಿಲೀಫ್ ನೀಡುವ ನಿರೀಕ್ಷೆಯಿದೆ. ಸಣ್ಣ ಮಟ್ಟಿನ ದರ ಇಳಿಕೆ ಇದಾಗಿದ್ದರೂ, ವಿಶೇಷವಾಗಿ ಬೇಡಿಕೆ ಹೆಚ್ಚಿರುವ ನಗರ ಕೇಂದ್ರಗಳಲ್ಲಿ ಕಾರ್ಯಾಚರಣೆಯ ವೆಚ್ಚವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಇನ್ಷೂರೆನ್ಸ್ ಕ್ಷೇತ್ರಕ್ಕೆ ಜಿಎಸ್ಟಿ ವಿನಾಯಿತಿಯ ಧಮಾಕ; ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾಪ
ಅಂತರರಾಷ್ಟ್ರೀಯ ಇಂಧನ ಬೆಲೆ ಏರಿಳಿತ ಮತ್ತು ವಿದೇಶಿ ವಿನಿಮಯ ದರಗಳಲ್ಲಿನ ಏರಿಳಿತಗಳನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ದರಗಳನ್ನು ಪ್ರತಿ ತಿಂಗಳು ಪರಿಷ್ಕರಿಸುತ್ತವೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 7:11 am, Mon, 1 September 25




