LPG Cylinder Price Hike: ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ

Commercial Cylinder Price: ಕೇಂದ್ರ ಹಣಕಾಸು ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುವುದಕ್ಕೂ ಕೆಲವೇ ಗಂಟೆಗಳ ಮುನ್ನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಗ್ರಾಹಕರಿಗೆ ದರ ಏರಿಕೆಯ ಶಾಕ್ ನೀಡಿವೆ. ದರ ಹೆಚ್ಚಳ ಫೆಬ್ರವರಿ 1ರಿಂದಲೇ ಜಾರಿಗೆ ಬಂದಿದೆ. ಯಾವ ನಗರದಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

LPG Cylinder Price Hike: ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 01, 2024 | 10:03 AM

ನವದೆಹಲಿ, ಫೆಬ್ರವರಿ 1: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ (LPG Commercial Cylinder ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ 14 ರೂಪಾಯಿ ಏರಿಕೆ ಮಾಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ (Gas Cylinder price Hike) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ ಇಂದಿನಿಂದ (ಫೆಬ್ರವರಿ 1) ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.

ಯಾವ ನಗರದಲ್ಲಿ ಎಷ್ಟು ದರ?

ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.

ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್ ಗಳ ದರ 17 ಬಾರಿ ಬದಲಾಗಿದ್ದು, ವಾಣಿಜ್ಯ ಸಿಲಿಂಡರ್​ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ. ಈ ಬದಲಾವಣೆಗಳಿಂದಾಗಿ, ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಐಒಸಿ ಅಂಕಿಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ.

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಎಷ್ಟಿದೆ?

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಸತತ 6ನೇ ಬಾರಿ ಯಾವುದೇ ಬದಲಾವಣೆಯಾಗಿಲ್ಲ. ಆಗಸ್ಟ್ 30 ರಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬಾರಿ ಬದಲಾವಣೆ ಮಾಡಲಾಗಿತ್ತು. ಅಂಕಿಅಂಶಗಳ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ., ಕೋಲ್ಕತ್ತಾದಲ್ಲಿ 929 ರೂ., ಮುಂಬೈಯಲ್ಲಿ 902.50 ರೂ., ಚೆನ್ನೈನಲ್ಲಿ  918.50 ರೂ. ಇದೆ.

ಇದನ್ನೂ ಓದಿ: ನೋಯ್ಡಾ, ಗುರುಗ್ರಾಮದಲ್ಲಿ ಪೆಟ್ರೋಲ್ ದುಬಾರಿ

ಪ್ರತಿ ತಿಂಗಳು ಪರಿಷ್ಕರಣೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ.

ಇತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Thu, 1 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ