AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್

LPG Commercial Cylinder Price in Bangalore: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತವಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 19 ಕೆಜಿ ಸಿಲಿಂಡರ್ ಬೆಲೆ 2,930 ರೂ.ಗೆ ಇಳಿಕೆಯಾಗಿದೆ. ಜುಲೈ 1 ರಿಂದಲೇ ಹೊಸ ದರ ಜಾರಿಗೆ ಬಂದಿದ್ದು, ನಿಮ್ಮ ನಗರದ ಇಂದಿನ ಪರಿಷ್ಕೃತ ದರಗಳು ಹಾಗೂ ಗೃಹಬಳಕೆ ಸಿಲಿಂಡರ್ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್
ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ!Image Credit source: PTI
ಭಾವನಾ ಹೆಗಡೆ
|

Updated on:Jul 01, 2026 | 7:44 AM

Share

ಮುಖ್ಯಾಂಶಗಳು

  • 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಲಾಗಿದೆ.
  • ಹೊಸ ಕಡಿತದ ಬಳಿಕ ವಾಣಿಜ್ಯ ಸಿಲಿಂಡರ್ ಬೆಲೆ 2,930 ರೂ. ಆಗಿದೆ
  • ಈ ಪರಿಷ್ಕೃತ ದರಗಳು ಇಂದು, ಜುಲೈ 1, 2026 ರಿಂದ ಜಾರಿಗೆ ಬಂದಿವೆ.

ಬೆಂಗಳೂರು, ಜುಲೈ 01: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ (Petrol), ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂಪಾಯಿಗಳಷ್ಟು ಕಡಿತಗೊಳಿಸಲಾಗಿದ್ದು, ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಹೋಟೆಲ್ ಅಸೋಸಿಯೇಷನ್ ಮಾಹಿತಿ

ಈ ವರ್ಷದ ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯು ಜಾಗತಿಕವಾಗಿ ತೀವ್ರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿತ್ತು. ಈ ದಾಳಿಯ ನಂತರ, ಇರಾನ್ ತನ್ನ ನಿಯಂತ್ರಣದಲ್ಲಿರುವ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಜಲಸಂಧಿಯ ಮೂಲಕ ಕಚ್ಚಾ ತೈಲ ಮತ್ತು ಅನಿಲವನ್ನು ಸಾಗಿಸುವ ಹಡಗುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈ ಪೂರೈಕೆ ವ್ಯತ್ಯಯದಿಂದಾಗಿ ವಿಶ್ವಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಗಗನಕ್ಕೇರಿದ್ದವು. ಇದೀಗ ಹೋಟೆಲ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, ಕಳೆದ ಜೂನ್ ತಿಂಗಳಲ್ಲಿ 3,198 ರೂಪಾಯಿ ತಲುಪಿದ್ದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ದರವು, ಸದ್ಯ 3,021 ರೂಪಾಯಿಗೆ ಇಳಿಕೆಯಾಗಿದೆ.

ಇತ್ತೀಚೆಗೆ ನಾಲ್ಕು ಬಾರಿ ಹೆಚ್ಚಾಗಿದ್ದ ವಾಣಿಜ್ಯ ಸಿಲಿಂಡರ್ ಬೆಲೆ

ಹಾರ್ಮುಜ್ ಜಲಸಂಧಿಯ ಇಂಧನ ಪೂರೈಕೆ ಅಡಚಣೆಯ ನಂತರ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಒಟ್ಟು ನಾಲ್ಕು ಬಾರಿ ಹೆಚ್ಚಿಸಲಾಗಿತ್ತು. ಭಾರಿ ನಷ್ಟದ ಹಿನ್ನೆಲೆಯನ್ನು ಉಲ್ಲೇಖಿಸಿ ತೈಲ ಕಂಪನಿಗಳು ಮಾರ್ಚ್‌ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ. ಮತ್ತು ಮೇ ತಿಂಗಳಲ್ಲಿ ಬರೋಬ್ಬರಿ 993 ರೂ.ನಷ್ಟು ಬೆಲೆ ಏರಿಕೆ ಮಾಡಿದ್ದವು. ತದನಂತರ, ಜೂನ್‌ನಲ್ಲಿ ಮತ್ತೊಮ್ಮೆ 42 ರೂ. ಹೆಚ್ಚಿಸಲಾಗಿತ್ತು. ಹೀಗೆ ಒಟ್ಟು ನಾಲ್ಕು ಕಂತುಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 1,374.50 ರೂ.ನಷ್ಟು ಹೆಚ್ಚಿಸಲಾಗಿತ್ತು.

ಅದೇ ರೀತಿ, ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕೂಡ ಎರಡು ಕಂತುಗಳಲ್ಲಿ ಒಟ್ಟು 89 ರೂ.ನಷ್ಟು ಹೆಚ್ಚಿಸಲಾಗಿತ್ತು. ತೈಲ ಕಂಪನಿಗಳು ಮೊದಲು ಮಾರ್ಚ್‌ನಲ್ಲಿ 60 ರೂ. ಮತ್ತು ನಂತರ ಜೂನ್‌ನಲ್ಲಿ 29 ರೂ.ನಷ್ಟು ಬೆಲೆಯನ್ನು ಏರಿಸಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:41 am, Wed, 1 July 26

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ