LPG Price Hike: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ ಏರಿಕೆ, ಎಲ್ಲೆಲ್ಲಿ ಎಷ್ಟು ಬೆಲೆ ಇಲ್ಲಿದೆ ಮಾಹಿತಿ

ಒಂದೆಡೆ ಹೋಳಿ ಮತ್ತೊಂದೆಡೆ ರಂಜಾನ್​ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ, ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 6 ರೂ,ಗಳಷ್ಟು ಹೆಚ್ಚಿಸಲಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ ಹಿಂದೆ 1797 ರೂ. ಇದ್ದ ಪ್ರತಿ ಸಿಲಿಂಡರ್‌ಗೆ 1803 ರೂ.ಗೆ ಏರಿಕೆಯಾಗಿದೆ.

LPG Price Hike: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ ಏರಿಕೆ, ಎಲ್ಲೆಲ್ಲಿ ಎಷ್ಟು ಬೆಲೆ ಇಲ್ಲಿದೆ ಮಾಹಿತಿ
ಸಿಲಿಂಡರ್
Image Credit source: Mathrubhumi English

Updated on: Mar 01, 2025 | 11:32 AM

ದೆಹಲಿ, ಮಾರ್ಚ್​ 1: ಒಂದೆಡೆ ಹೋಳಿ ಮತ್ತೊಂದೆಡೆ ರಂಜಾನ್​ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ, ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 6 ರೂ,ಗಳಷ್ಟು ಹೆಚ್ಚಿಸಲಾಗಿದೆ.

ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ ಹಿಂದೆ 1797 ರೂ. ಇದ್ದ ಪ್ರತಿ ಸಿಲಿಂಡರ್‌ಗೆ 1803 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಪರಿಶೀಲಿಸುತ್ತವೆ. ಇಂದಿನಿಂದ ಹೊಸ ತಿಂಗಳು ಪ್ರಾರಂಭವಾಗುತ್ತಿದೆ.

ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯನ್ನು 1797 ರೂ.ಗಳಿಂದ 1803 ರೂ.ಗಳಿಗೆ ಹೆಚ್ಚಿಸಲಾಗಿದೆ. ಕೋಲ್ಕತ್ತಾದಲ್ಲಿ ಹೊಸ ಬೆಲೆ 1907 ರೂ.ಗಳಿಂದ 1913 ರೂ.ಗಳಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1749.50 ರೂ.ಗಳಿಂದ 1755.50 ರೂ.ಗಳಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಗ್ಯಾಸ್ ಈಗ 1959 ರೂ.ಗಳಿಂದ 1965 ರೂ.ಗಳಿಗೆ ಲಭ್ಯವಿರುತ್ತದೆ.

ಮತ್ತಷ್ಟು ಓದಿ: LPG Cylinder Price: ಬಜೆಟ್ ಮುಂಚಿತವಾಗಿ ಕೇಂದ್ರದಿಂದ ಗುಡ್​ನ್ಯೂಸ್​​, ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದರೂ, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳವು ರೆಸ್ಟೋರೆಂಟ್‌ಗಳಲ್ಲಿನ ಊಟದ ಮೇಲೆ ಪರಿಣಾಮ ಬೀರಬಹುದು. ರೆಸ್ಟೋರೆಂಟ್‌ಗಳು ತಮ್ಮ ಆಹಾರದ ದರಗಳನ್ನು ಹೆಚ್ಚಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us