ಬೈಜುಸ್ 1,80,000 ಕೋಟಿ ರೂನಿಂದ ಸೊನ್ನೆಗೆ: ಆದರೆ ಮೋಸ ಮಾಡೋನಲ್ಲ: ಬೈಜು ರವೀಂದ್ರನ್

Byju's founder Byju Raveendran speaks from Dubai: ತಾನು ಯಾವ ವಂಚನೆ ಮಾಡಿಲ್ಲ. ಮಾಡುವುದೂ ಇಲ್ಲ. ವಂಚನೆ ಮಾಡುವ ಉದ್ದೇಶ ಇದ್ದರೆ ಮಾಲೀಕರು ಹಣವನ್ನು ಹೊರತೆಗೆಯುತ್ತಿದ್ದರು. ತಾವು ಹಣವನ್ನು ವಾಪಸ್ ಕಂಪನಿಗೆ ಹಾಕಿದ್ದೇವೆ ಎಂದು ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್ ಹೇಳಿದ್ದಾರೆ. ತಮ್ಮ ಸಂಸ್ಥೆ ಸಂಕಷ್ಟದಲ್ಲಿದೆ. ಕಂಪನಿ ಮೌಲ್ಯ ಸೊನ್ನೆಗೆ ಇಳಿದಿದೆ. ಹೂಡಿಕೆದಾರರ ವಿಶ್ವಾಸ ಕಳೆದುಕೊಂಡಿದ್ದೇವೆ ಎಂದವರು ತಿಳಿಸಿದ್ದಾರೆ.

ಬೈಜುಸ್ 1,80,000 ಕೋಟಿ ರೂನಿಂದ ಸೊನ್ನೆಗೆ: ಆದರೆ ಮೋಸ ಮಾಡೋನಲ್ಲ: ಬೈಜು ರವೀಂದ್ರನ್
ಬೈಜು ರವೀಂದ್ರನ್
Follow us
|

Updated on: Oct 18, 2024 | 4:39 PM

ಬೆಂಗಳೂರು, ಅಕ್ಟೋಬರ್ 18: ಒಂದು ಕಾಲದಲ್ಲಿ ಭಾರತದ ಸ್ಟಾರ್ಟಪ್ ಲೋಕಕ್ಕೆ ಮಿನುಗುತಾರೆಯಂತಾಗಿದ್ದ ಬೈಜುಸ್ ಸಂಸ್ಥೆ ಇವತ್ತು ಅಸ್ತಿತ್ವ ಉಳಿಸಿಕೊಳ್ಳಲು ಹೆಣಗುತ್ತಿದೆ. ಸಾಲು ಸಾಲು ವಿವಾದ, ಸಂಕಷ್ಟಗಳಿಗೆ ಸಿಲುಕಿ ಒದ್ದಾಡುತ್ತಿದೆ. ಕೋರ್ಟ್ ಕಟಕಟೆಯಲ್ಲಿ ವಿಚಾರಣೆಗಳು ನಡೆಯುತ್ತಿವೆ. ಹೂಡಿಕೆದಾರರು ತಮ್ಮ ಹಣ ಮರಳಿ ಪಡೆಯಲು ಹರಸಾಹಸ ನಡೆಸುತ್ತಿದ್ದಾರೆ. ಇದೇ ವೇಳೆ ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ ತಾವು ಯಾವುದೇ ವಂಚನೆ ಎಸಗಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ದುಬೈನ ತಮ್ಮ ನಿವಾಸದಿಂದ ಪತ್ರಕರ್ತರ ಜೊತೆ ಆನ್​ಲೈನ್​ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಬೈಜು, ‘ಬೈಜೂಸ್​ನಿಂದ ಯಾವ ವಂಚನೆ ನಡೆದಿಲ್ಲ. ಒಂದು ವೇಳೆ ವಂಚನೆ ಆಗಿದ್ದಿದ್ದರೆ ಸಂಸ್ಥಾಪಕರು ಹಣ ಲಪಟಾಯಿಸುತ್ತಿದ್ದರು. ನಾವು ನಮ್ಮ ಹಣವನ್ನು ಕಂಪನಿಗೆ ವಾಪಸ್ ಹಾಕಿದ್ದೇವೆ. 2022ರಿಂದ ಬೈಜುಸ್ ಸಂಸ್ಥೆಗೆ ಹಣ ತುಂಬುತ್ತಾ ಬರುತ್ತಿರುವುದು ತಾವು (ಮಾಲೀಕರು) ಮಾತ್ರವೇ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರತನ್ ಟಾಟಾ ವೈಯಕ್ತಿಕ ಆಸ್ತಿ ಯಾರಿಗೆ? ಅವರ ಕೊನೆಯಾಸೆ ಈಡೇರಿಸುವ ಜವಾಬ್ದಾರಿ ನಾಲ್ವರಿಗೆ ವಹಿಸಿದ್ದ ಟಾಟಾ

ಬೈಜುಸ್ ಮೌಲ್ಯ ಇವತ್ತು ಸೊನ್ನೆ…

ಬೈಜು ರವೀಂದ್ರನ್, ತಮ್ಮ ಸಂಸ್ಥಾಪಿತ ಕಂಪನಿ ಸಂಕಷ್ಟದ ಪರಿಸ್ಥಿತಿಯಲ್ಲಿರುವುದನ್ನು ಒಪ್ಪಿಕೊಂಡಿದ್ದಾರೆ. ‘ಇವತ್ತು ಬೈಜುಸ್ ಮೌಲ್ಯ ಸೊನ್ನೆ ಇದೆ. ಹೂಡಿಕೆದಾರರ ವಿಶ್ವಾಸ ಕಳೆದುಕೊಂಡಿದ್ದೇವೆ,’ ಎಂದಿದ್ದಾರೆ.

ಬೈಜುಸ್ ಸಂಸ್ಥೆ ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ಪ್ರಜ್ವಲಿಸಿತು. ಆ ಸಂದರ್ಭದಲ್ಲಿ ಅದರ ವ್ಯಾಲ್ಯುಯೇಶನ್ 22 ಬಿಲಿಯನ್ ಡಾಲರ್ ಮಟ್ಟಕ್ಕೆ ಹೋಗಿತ್ತು. ಅಂದರೆ, 1.8 ಲಕ್ಷ ಕೋಟಿ ರೂ ಮೌಲ್ಯದ ಕಂಪನಿ ಎನಿಸಿತ್ತು. ಆದರೆ, ಒಂದೊಂದೇ ವಿವಾದಗಳು ಮೆತ್ತಿಕೊಂಡು ಬೈಜುಸ್ ಸಂಕಷ್ಟಕ್ಕೆ ಸಿಲುಕಿತು. ಇವತ್ತು ಆ ಕಂಪನಿ ಮೌಲ್ಯ ಸೊನ್ನೆಗೆ ಬಂದಿದೆ.

ಇದನ್ನೂ ಓದಿ: ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ

ತಪ್ಪಾಗಿದ್ದು ಎಲ್ಲಿ…?

ಬೈಜುಸ್ ಒಮ್ಮೆಲೇ ಗಣನೀಯವಾಗಿ ಬೆಳವಣಿಗೆ ಹೊಂದ ಬಳಿಕ ಸಂಸ್ಥಾಪಕರು ತಮ್ಮ ಕಂಪನಿ ಬಗ್ಗೆ ತೀರಾ ಹೆಚ್ಚಿನ ನಿರೀಕ್ಷೆ ಹೊಂದ ತೊಡಗಿದ್ದರು. ಒಟ್ಟೊಟ್ಟಿಗೆ ಹಲವಾರು ಮಾರುಕಟ್ಟೆಗಳಿಗೆ ಪ್ರವೇಶ ಮಾಡಲಾಯಿತು. ಇದು ತಪ್ಪು ಅಂದಾಜಾಗಿತ್ತು. ಬೈಜು ರವೀಂದ್ರನ್ ತಮ್ಮ ಈ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್