AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cost Of Guarantees: ಕಾಂಗ್ರೆಸ್​ನ 5 ಗ್ಯಾರಂಟಿಗಳ ಜಾರಿಯಿಂದ ಕರ್ನಾಟಕದ ಬೊಕ್ಕಸಕ್ಕೆ ಆಗುವ ಖರ್ಚೆಷ್ಟು? ಇಲ್ಲಿದೆ ಲೆಕ್ಕಾಚಾರ

Cost Of Implementing Congress Poll Guarantees: ಪ್ರತೀ ಮನೆಗೆ 200 ಯೂನಿಟ್ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಸಹಾಯಧನ, ನಿರುದ್ಯೋಗಿ ಡಿಪ್ಲೊಮಾ, ಪದವೀಧರರಿಗೆ ಸಹಾಯಧನ ಹೀಗೆ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ 62,000 ಕೋಟಿ ರೂ ವೆಚ್ಚವಾಗುವ ಸಾಧ್ಯತೆ ಇದೆ.

Cost Of Guarantees: ಕಾಂಗ್ರೆಸ್​ನ 5 ಗ್ಯಾರಂಟಿಗಳ ಜಾರಿಯಿಂದ ಕರ್ನಾಟಕದ ಬೊಕ್ಕಸಕ್ಕೆ ಆಗುವ ಖರ್ಚೆಷ್ಟು? ಇಲ್ಲಿದೆ ಲೆಕ್ಕಾಚಾರ
ಕಾಂಗ್ರೆಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 15, 2023 | 6:02 PM

Share

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಜಯಭೇರಿ ಭಾರಿಸಿ ನಿಚ್ಚಳ ಬಹುಮತದೊಂದಿಗೆ ಸರಕಾರ ರಚಿಸುತ್ತಿದೆ. ಈ ಚುನಾವಣೆಯಲ್ಲಿ ಗಮನ ಸೆಳೆದ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ (Congress Poll Promises) ಕೊಡಲಾದ ಭರವಸೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳ ಸಹಿತ ಹಲವು ಆಶ್ವಾಸನೆಗಳನ್ನು ಕೊಟ್ಟಿದೆ. ಅದರಲ್ಲಿ ಪ್ರಮುಖವಾದುದು ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನ ಭಾಗ್ಯ, ಯುವ ನಿಧಿ, ಶಕ್ತಿ ಎಂಬ ಐದು ಗ್ಯಾರಂಟಿಗಳು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಕೊಡಲಾದ 5 ಗ್ಯಾರಂಟಿಗಳು:

  1. ಗೃಹ ಜ್ಯೋತಿ: ಪ್ರತೀ ಮನೆಗೂ 200 ಯೂನಿಟ್ ಉಚಿತ ವಿದ್ಯುತ್
  2. ಗೃಹ ಲಕ್ಷ್ಮೀ: ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಸಹಾಯಧನ
  3. ಅನ್ನ ಭಾಗ್ಯ: ಬಿಪಿಎಲ್ ಕುಟುಂಬಗಳಿಗೆ ಉಚಿತ 10 ಕಿಲೋ ಆಹಾರಧಾನ್ಯ
  4. ಯುವ ನಿಧಿ: ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ರೂ, ಡಿಪ್ಲೊಮಾ ನಿರುದ್ಯೋಗಿಗಳಿಗೆ ತಿಂಗಳಿಗೆ 1,500 ರೂ ಸಹಾಯಧನ
  5. ಶಕ್ತಿ: ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಇದನ್ನೂ ಓದಿCongress Guarantees: ಸುಭದ್ರ ಸರ್ಕಾರ ಬಂತು; ಕಾಂಗ್ರೆಸ್ ಕೊಟ್ಟ 5 ಗ್ಯಾರಂಟಿಗಳೇನು? ಭರವಸೆಗಳ ಪಟ್ಟಿ ಇಲ್ಲಿದೆ; ಕೈ ಆಶ್ವಾಸನೆಗಳು ಈಡೇರುತ್ತವಾ?

ಈ ಐದು ಪ್ರಮುಖ ಗ್ಯಾರಂಟಿ ಜೊತೆಗೆ, ರೈತರಿಂದ ದನಗಳ ಸೆಗಣಿಯನ್ನು ಕಿಲೋಗೆ 3 ರೂನಂತೆ ಖರೀದಿ, ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ಗೆ ವರ್ಷಕ್ಕೆ 500 ಲೀಟರ್ ತೆರಿಗೆ ರಹಿತ ಡೀಸೆಲ್, ಅಂಗನವಾಡಿ ಕಾರ್ಯಕರ್ತರ ವೇತನ ಹೆಚ್ಚಳ, ಗುತ್ತಿಗೆ ನೌಕರರ ಕೆಲಸ ಖಾಯಂ, ಸರ್ಕಾರಿ ಹುದ್ದೆಗಳ ಭರ್ತಿ ಹೀಗೆ ಹಲವಾರು ಆಶ್ವಾಸನೆಗಳನ್ನು ಕೊಡಲಾಗಿದೆ.

ಈ ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರಕ್ಕೆ ವರ್ಷಕ್ಕೆ 62,000 ರೂ ಖರ್ಚು?

ಎಕನಾಮಿಕ್ ಟೈಮ್ಸ್ ವರದಿಯಲ್ಲಿ ಮಾಡಲಾಗಿರುವ ಒಂದು ಅಂದಾಜು ಪ್ರಕಾರ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ವೇಳೆ ಕೊಟ್ಟ ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತರಬೇಕಾದರೆ ವರ್ಷಕ್ಕೆ 62,000 ರೂ ಖರ್ಚಾಗುತ್ತದಂತೆ. ಈಗಾಗಲೇ ರಾಜ್ಯದಲ್ಲಿ ವಿತ್ತೀಯ ಕೊರತೆ ಕಾಡುತ್ತಿದೆ. 2023-24ರ ವರ್ಷದಲ್ಲಿ ವಿತ್ತೀಯ ಕೊರತೆ 60,581 ಕೋಟಿಯಷ್ಟಿರಬಹುದು ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ ಈಗ ಗ್ಯಾರಂಟಿಗಳ ಅನುಷ್ಠಾನದಿಂದ ವರ್ಷಕ್ಕೆ 62,000 ರೂನಷ್ಟು ಹೆಚ್ಚುವರಿ ಕೊರತೆ ಸೃಷ್ಟಿಯಾಗಬಹುದು. ಹೀಗಿದ್ದಾಗ ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದ್ದೀತು?

ಇದನ್ನೂ ಓದಿWarren Buffett: ಹಣ ಬೇಕು ಎಂದಾಗ ಏನು ಮಾಡಬೇಕು? ಶ್ರೀಮಂತ ವಾರನ್ ಬಫೆಟ್ ಅಷ್ಟ ಸೂತ್ರಗಳಿವು…

ಕರ್ನಾಟಕ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಸಾಧ್ಯವಾಗುತ್ತಾ?

ಆಗಲೇ ಹೇಳಿದಂತೆ ರಾಜ್ಯಕ್ಕೆ ಗ್ಯಾರಂಟಿ ಜಾರಿಯಿಂದ 1.2 ಲಕ್ಷ ಕೋಟಿ ರೂನಷ್ಟು ವಿತ್ತೀಯ ಕೊರತೆ ಎದುರಾಗಬಹುದು. ಆದರೆ, ಕರ್ನಾಟಕದಲ್ಲಿ ಜಿಎಸ್​ಟಿ ತೆರಿಗೆ ಸಂಗ್ರಹ ಉತ್ತಮವಾಗಿದೆ. ಇಡೀ ದೇಶದಲ್ಲಿ ಅತಿಹೆಚ್ಚು ಜಿಎಸ್​ಟಿ ಸಂಗ್ರಹವಾದ ರಾಜ್ಯಗಳಲ್ಲಿ ಕರ್ನಾಟಕದ್ದು ಎರಡನೇ ಸ್ಥಾನ. ಇದು ಬಜೆಟ್ ವೇಳೆ ಮಾಡಿದ್ದ ಅಂದಾಜಿಗಿಂತ ಶೇ. 15ರಷ್ಟು ಹೆಚ್ಚೇ ತೆರಿಗೆ ಸಂಗ್ರಹವಾಗಿದೆ.

ಹೀಗಾಗಿ, ಗ್ಯಾರಂಟಿಗಳನ್ನು ಹಾಗೂ ಹೀಗೂ ಜಾರಿ ಮಾಡಲು ಸಾಧ್ಯ. ಆದರೆ, 10 ಲಕ್ಷ ಉದ್ಯೋಗ ಒದಗಿಸುವುದು, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡುವುದು, ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು ಇವೇ ಭರವಸೆಗಳನ್ನು ಜಾರಿಗೆ ತಂದರೆ ಸರ್ಕಾರ ಸಂಬಳಕ್ಕಾಗಿ ಹೆಚ್ಚು ಹಣ ವಿನಿಯೋಗಿಸಬೇಕಾಗುತ್ತದೆ. ಆ ಪರಿಸ್ಥಿತಿಯನ್ನು ಸರ್ಕಾರ ಹೇಗೆ ನಿರ್ವಹಿಸುತ್ತದೆ ಎಂಬುದು ಪ್ರಶ್ನೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ