AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಮ್ರಕ್ಕೆ ಸಿಕ್ಕಾಪಟ್ಟೆ ಬೇಡಿಕೆ; ಕಾಪರ್ ದರ ಈಗ ಸಾರ್ವಕಾಲಿಕ ಗರಿಷ್ಠ; ಈ ಲೋಹಕ್ಕೆ ಇಷ್ಟು ಬೆಲೆ ಏರಲು ಏನು ಕಾರಣ?

ಕಾಪರ್ ಲೋಹದ ಬೆಲೆ ಕಳೆದ ಒಂದು ವರ್ಷದಲ್ಲಿ ಶೇ. 47ರಷ್ಟು ಹೆಚ್ಚಳವಾಗಿದೆ. ಲಂಡನ್ ಮಾರುಕಟ್ಟೆಯಲ್ಲಿ ಒಂದು ಮೆಟ್ರಿಕ್ ಟನ್​ ತಾಮ್ರದ ಬೆಲೆ 14,533 ಡಾಲರ್ ಆಗಿದೆ. ಒಂದು ವರ್ಷದಲ್ಲಿ ತಾಮ್ರದ ದರ ಇಷ್ಟು ಏರಿಕೆ ಆಗಲು ಅದಕ್ಕಿರುವ ಬೇಡಿಕೆ ಒಂದು ಕಾರಣವಾಗಿದೆ. ಹಾಗೆಯೇ, ಅಮೆರಿಕ ಸರ್ಕಾರ ರೀಫೈನ್ಡ್ ಕಾಪರ್​ಗೆ ಟ್ಯಾರಿಫ್ ವಿಧಿಸುವ ಪ್ಲಾನ್ ಇರುವುದರಿಂದ ಈಗಲೇ ಸಾಕಷ್ಟು ಲೋಹವನ್ನು ಅಮೆರಿಕಕ್ಕೆ ಸಾಗಿಸಲಾಗುತ್ತಿರುವುದು ಮತ್ತೊಂದು ಕಾರಣ.

ತಾಮ್ರಕ್ಕೆ ಸಿಕ್ಕಾಪಟ್ಟೆ ಬೇಡಿಕೆ; ಕಾಪರ್ ದರ ಈಗ ಸಾರ್ವಕಾಲಿಕ ಗರಿಷ್ಠ; ಈ ಲೋಹಕ್ಕೆ ಇಷ್ಟು ಬೆಲೆ ಏರಲು ಏನು ಕಾರಣ?
ತಾಮ್ರImage Credit source: Abhishek Mehta/Moment/Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2026 | 7:39 PM

Share

ಲಂಡನ್, ಸೆಪ್ಟೆಂಬರ್ 8: ತಾಮ್ರವು ಮುಂದಿನ ಚಿನ್ನ ಎಂದು ತಜ್ಞರು ಹೇಳುತ್ತಿದ್ದ ಮಾತು ನಿಜವಾಗುತ್ತಿದೆ. ಜಾಗತಿಕ ಲೋಹ ಮಾರುಕಟ್ಟೆಯಲ್ಲಿ ತಾಮ್ರದ (Copper) ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಲಂಡನ್ ಮೆಟಲ್ ಎಕ್ಸ್‌ಚೇಂಜ್‌ನಲ್ಲಿ (LME) ಪ್ರತಿ ಮೆಟ್ರಿಕ್ ಟನ್‌ಗೆ $14,533 ತಲುಪುವ ಮೂಲಕ ಈವರೆಗಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

ಕಳೆದ 12 ತಿಂಗಳುಗಳಲ್ಲಿ ತಾಮ್ರದ ದರವು ಜಾಗತಿಕವಾಗಿ ಸುಮಾರು ಶೇಕಡಾ 47ರಷ್ಟು ಭಾರಿ ಏರಿಕೆ ಕಂಡಿದೆ.

ತಾಮ್ರದ ದರ ಏರಿಕೆಗೆ ಪ್ರಮುಖ ಕಾರಣಗಳು

  • ಅಮೆರಿಕದ ಆಮದು ಸುಂಕದ ಭೀತಿ: ರೀಫೈನ್ಡ್ ಕಾಪರ್​ನ ಆಮದಿನ ಮೇಲೆ ಅಮೆರಿಕ ಸರ್ಕಾರ ಹೆಚ್ಚುವರಿ ಸುಂಕ (Tariff) ವಿಧಿಸುವ ಸಾಧ್ಯತೆಯಿರುವುದರಿಂದ, ಜಾಗತಿಕ ಪೂರೈಕೆದಾರರು ದಾಸ್ತಾನನ್ನು ಅಮೆರಿಕಕ್ಕೆ ರವಾನಿಸುತ್ತಿದ್ದಾರೆ. ಇದರಿಂದ ಇತರ ಮಾರುಕಟ್ಟೆಗಳಲ್ಲಿ ತಾಮ್ರದ ತೀವ್ರ ಅಭಾವ ಸೃಷ್ಟಿಯಾಗಿದೆ.
  • ಎಐ ಮತ್ತು ಡೇಟಾ ಸೆಂಟರ್‌ಗಳ ಬೇಡಿಕೆ: ಎಐ ಡೇಟಾ ಸೆಂಟರ್‌ಗಳ ಸ್ಥಾಪನೆ, ವಿದ್ಯುತ್ ಗ್ರಿಡ್‌ಗಳ ವಿಸ್ತರಣೆ, ಇವಿ (ಮೋಟಾರು ವಾಹನ) ಮತ್ತು ಮರುಬಳಕೆ ಇಂಧನ (Renewable Energy) ಯೋಜನೆಗಳಲ್ಲಿ ತಾಮ್ರದ ಬಳಕೆ ವಿಪರೀತ ಹೆಚ್ಚಾಗಿದೆ.
  • ಗಣಿ ಪೂರೈಕೆಯಲ್ಲಿ ಕುಸಿತ: ಹೊಸ ತಾಮ್ರದ ಗಣಿಗಾರಿಕೆ ಯೋಜನೆಗಳ ವಿಳಂಬ ಹಾಗೂ ಪ್ರಮುಖ ಗಣಿಗಳಲ್ಲಿ ಉತ್ಪಾದನೆ ಕುಸಿದಿರುವುದು ಪೂರೈಕೆ ಮತ್ತು ಬೇಡಿಕೆಯ ನಡುವೆ ಭಾರಿ ಅಂತರವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಸೆಪ್ಟೆಂಬರ್ 11, ಶುಕ್ರವಾರಕ್ಕೆ ಬ್ಯಾಂಕ್ ಉದ್ಯೋಗಿಗಳ ಮುಷ್ಕರ ಫಿಕ್ಸ್; ಸರ್ಕಾರ ಬಗ್ಗದಿದ್ದರೆ 3 ದಿನಗಳ ಬಂದ್

ಭಾರತೀಯ ಮಾರುಕಟ್ಟೆಯ ಮೇಲಿನ ಪರಿಣಾಮ

  • ಷೇರು ಮಾರುಕಟ್ಟೆಯಲ್ಲಿ ಏರಿಕೆ: ಜಾಗತಿಕ ದರ ಏರಿಕೆಯ ಬೆನ್ನಲ್ಲೇ ಭಾರತ ಸರ್ಕಾರಿ ಸ್ವಾಮ್ಯದ ‘ಹಿಂದುಸ್ತಾನ್ ಕಾಪರ್’ (Hindustan Copper) ಷೇರು ಮೌಲ್ಯ ಮಾರುಕಟ್ಟೆಯಲ್ಲಿ ಶೇ. 5ಕ್ಕಿಂತ ಹೆಚ್ಚು ಜಿಗಿತ ಕಂಡಿದೆ.
  • ಎಂಸಿಎಕ್ಸ್ ತಾಮ್ರದ ಬೆಲೆ: ಭಾರತದ ಎಂಸಿಎಕ್ಸ್ ಮಾರುಕಟ್ಟೆಯಲ್ಲೂ ತಾಮ್ರದ ಫ್ಯೂಚರ್ಸ್ ಬೆಲೆ ಕೆಜಿಗೆ ₹1,400ರ ಸನಿಹದಲ್ಲಿದೆ. ಆದರೆ, ಕಳೆದ ಕೆಲವು ದಿನಗಳಿಂದ ರೂಪಾಯಿ ಮೌಲ್ಯ ಸ್ಥಿರವಾಗಿರುವುದರಿಂದ ಜಾಗತಿಕ ಮಾರುಕಟ್ಟೆಗೆ ಹೋಲಿಸಿದರೆ ದೇಶೀಯ ದರ ಏರಿಕೆಯ ಪ್ರಮಾಣ ಕೊಂಚ ನಿಯಂತ್ರಣದಲ್ಲಿದೆ.

ಇದನ್ನೂ ಓದಿ: ಭಾರತದ ಕಾರ್ಬನ್ ಕ್ರೆಡಿಟ್ ಟ್ರೇಡಿಂಗ್ ಸ್ಕೀಮ್​ಗೆ ಬ್ರಿಟನ್ ಮಾನ್ಯತೆ; ಭಾರತೀಯ ರಫ್ತುದಾರರಿಗೆ ಅನುಕೂಲ

ವಿದ್ಯುತ್ ಉಪಕರಣಗಳು, ಸೆಮಿಕಂಡಕ್ಟರ್, ವಾಹನ ತಯಾರಿಕೆ ಹಾಗೂ ಇಲೆಕ್ಟ್ರಾನಿಕ್ಸ್ ಉದ್ಯಮಕ್ಕೆ ತಾಮ್ರವೇ ಪ್ರಮುಖ ಕಚ್ಚಾವಸ್ತುವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಇವುಗಳ ತಯಾರಿಕಾ ವೆಚ್ಚ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ