ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ್ರೆ ದುಬಾರಿ ಇನ್ಷೂರೆನ್ಸ್; ಹೀಗೊಂದು ದಂಡ ಮಾದರಿ ಪ್ರಸ್ತಾಪ

Traffic violations and insurance premium: ರಾಂಗ್ ಸೈಡ್​ನಲ್ಲಿ ಹೋಗುವುದು, ಮೊಬೈಲ್ ಬಳಸಿಕೊಂಡು ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡುವುದು, ಸೀಟ್ ಬೆಲ್ಟ್ ಹಾಕದೇ ಕಾರು ಚಲಾಯಿಸುವುದು ಇತ್ಯಾದಿ ಟ್ರಾಫಿಕ್ ನಿಯಮ ಉಲ್ಲಂಘನೆ ಸಾಕಷ್ಟು ಆಗುತ್ತಿದೆ. ಇದನ್ನು ತಪ್ಪಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೊಸ ಐಡಿಯಾ ಮಾಡಿದ್ದಾರೆ. ಟ್ರಾಫಿಕ್ ನಿಯಮ ಬ್ರೇಕ್ ಮಾಡಿದವರಿಗೆ ವೆಹಿಕಲ್ ಇನ್ಷೂರೆನ್ಸ್ ಪ್ರೀಮಿಯಮ್ ಅನ್ನು ಹೆಚ್ಚಿಸುವಂತಹ ವ್ಯವಸ್ಥೆ ಆಗಬೇಕು ಎಂದು ಅವರು ಪ್ರಸ್ತಾಪಿಸಿದ್ದಾರೆ.

ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ್ರೆ ದುಬಾರಿ ಇನ್ಷೂರೆನ್ಸ್; ಹೀಗೊಂದು ದಂಡ ಮಾದರಿ ಪ್ರಸ್ತಾಪ
ಟ್ರಾಫಿಕ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2024 | 12:46 PM

ನವದೆಹಲಿ, ಸೆಪ್ಟೆಂಬರ್ 26: ಪ್ರಮುಖ ನಗರಗಳಲ್ಲಿ ರಸ್ತೆಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿ ಟ್ರಾಫಿಕ್ ಕಿರಿಕಿರಿ ಬಹಳ ಇದೆ. ಇದರ ಜೊತೆಗೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರು, ಯದ್ವಾತದ್ವಾ ವಾಹನ ಚಲಾಯಿಸುವವರು, ಮೊಬೈಲ್ ಬಳಸಿಕೊಂಡು ವಾಹನ ಚಲಾಯಿಸುವವರು ಹೀಗೆ ನಾನಾ ರೀತಿಯಲ್ಲಿ ಕಿರಿಕಿರಿ ತರುತ್ತಾರೆ. ಕೆಲಸ ಮಾಡಿ ಸುಸ್ತಾಗಿರುವ ಜನರು ಟ್ರಾಫಿಕ್ ಮೂಲಕ ಮನೆ ತಲುಪುವಷ್ಟರಲ್ಲಿ ಹೈರಾಣಾಗಿರುತ್ತಾರೆ. ಈ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಕಡಿವಾಣ ಹಾಕಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೊಸ ಐಡಿಯಾ ಪ್ರಸ್ತಾಪಿಸಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ವಾಹನ ವಿಮೆಯ ಪ್ರೀಮಿಯಮ್ ಹಣ ಹೆಚ್ಚಿಸಬೇಕು ಎನ್ನುವ ಸಲಹೆಯನ್ನು ಅವರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವುದು ತಿಳಿದುಬಂದಿದೆ.

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರರಿಗೆ ಆ ಕಾರ್ಯಕ್ಕೆ ದಂಡ ವಿಧಿಸುವ ಟ್ರಾಫಿಕ್ ಚಲನ್ ನೀಡುವುದರ ಜೊತೆಗೆ ಅಧಿಕ ಇನ್ಷೂರೆನ್ಸ್ ಪ್ರೀಮಿಯಮ್ ದಾಖಲು ಮಾಡಬೇಕು. ಟ್ರಾಫಿಕ್ ನಿಯಮ ಉಲ್ಲಂಘನೆಗಳ ಸಂಖ್ಯೆಗೆ ಅನುಗುಣವಾಗಿ ಇನ್ಷೂರೆನ್ಸ್ ಪ್ರೀಮಿಯಮ್ ಹಣ ಹೆಚ್ಚಿಸಬೇಕು. ಆ ರೀತಿಯಲ್ಲಿ ಲಿಂಕ್ ಮಾಡಲು ಸಾಧ್ಯವಾ ಎಂದು ಪರಿಶೀಲಿಸಿ ಎಂದು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Bank Holidays Oct 2024: ಹಬ್ಬ ಹರಿದಿನಗಳೇ ಇರುವ ಅಕ್ಟೋಬರ್​ನಲ್ಲಿ ಬ್ಯಾಂಕ್​ ರಜಾದಿನಗಳ ಪಟ್ಟಿ

ವಿ.ಕೆ. ಸಕ್ಸೇನಾ ಪ್ರಕಾರ, ಇನ್ಷೂರೆನ್ಸ್ ಪ್ರೀಮಿಯಮ್ ಹಣ ಹೆಚ್ಚಿಸುವ ಈ ಕ್ರಮವು ವಾಹನ ಸವಾರರಿಗೆ ಪಾಠವಾಗಬಹುದು. ಜವಾಬ್ದಾರಿಯುತವಾಗಿ ವಾಹನ ಚಲಾಯಿಸುವಂತೆ ಮಾಡಬಹುದು. ಇದರಿಂದ ವಾಹನ ಸವಾರರೂ ಸುರಕ್ಷಿತವಾಗಿರಬಹುದು, ಇತರ ಸವಾರರೂ ಸುರಕ್ಷಿತವಾಗಿರಬಹುದು.

ದೆಹಲಿಯಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಆಗುತ್ತಿರುವ ಸಂಖ್ಯೆ ವಿಪರೀತವಾಗಿ ಹೆಚ್ಚಿದೆ. 2023ರ ವರ್ಷದಲ್ಲಿ ರಾಂಗ್ ಸೈಡ್​ನಲ್ಲಿ ಡ್ರೈವ್ ಮಾಡಿ ಸಿಕ್ಕಿಬಿದ್ದವರ ಸಂಖ್ಯೆ ಸೇ. 21ರಷ್ಟು ಹೆಚ್ಚಿದೆ. 2023ರಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ನೀಡಲಾದ ನೋಟೀಸ್ ಸಂಖ್ಯೆ, ಅಂದರೆ ಚಲನ್ ನೀಡಲಾದವರ ಸಂಖ್ಯೆ 1,24,593. ಈ ವರ್ಷ ಆ ಸಂಖ್ಯೆ ಅದಾಗಲೇ ಒಂದು ಲಕ್ಷ ಗಡಿ ದಾಟಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ

ದೆಹಲಿಯಲ್ಲಿ ವಾಹನ ಸವಾರರು ಮೊಬೈಲ್ ಬಳಸಿ ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ವರ್ಷದ ಎಂಟು ತಿಂಗಳಲ್ಲಿ ಇಂಥ ಪ್ರಕರಣಗಳಲ್ಲಿ ವಾಹನ ಸವಾರರಿಗೆ ಪೊಲೀಸರು 19,422 ಚಲನ್ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ