Petrol Diesel Price on January 14: 80 ಡಾಲರ್​ ದಾಟಿದ ಕಚ್ಚಾತೈಲ ದರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 14, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಏರಿಕೆ ಕಂಡರೂ ಅದರ ಪರಿಣಾಮ ಪೆಟ್ರೋಲ್, ಡೀಸೆಲ್ ಮೇಲಾಗಿಲ್ಲ.

Petrol Diesel Price on January 14: 80 ಡಾಲರ್​ ದಾಟಿದ ಕಚ್ಚಾತೈಲ ದರ
ಪೆಟ್ರೋಲ್
Image Credit source: ET Energy World

Updated on: Jan 14, 2025 | 7:47 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 80.88 ಡಾಲರ್​ ಆಗಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 77.77 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಮತ್ತಷ್ಟು ಓದಿ: ಕಚ್ಚಾತೈಲ ಬೆಲೆ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಜನವರಿ 14, 2025, ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us