ಬೆಂಗಳೂರು: ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್ ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಇಂದು ಹೋಟೆಲ್ ಮಾಲೀಕರ ಸಂಘ ಸಭೆ ಕರೆದಿದೆ. ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಹೋಟೆಲ್ ಊಟ-ತಿಂಡಿ ಬೆಲೆ ಏರಿಸುವ ಕುರಿತು ಚರ್ಚೆ ನಡೆಯಲಿದೆ. ಪ್ರತಿ ತಿಂಡಿ ಬೆಲೆಯಲ್ಲಿ 5 ರಿಂದ 10 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಭಾರತದ ತಿಂಡಿಗಳ ಬೆಲೆ 10 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ಸಭೆಯಲ್ಲಿ ನಗರದ ಎಲ್ಲಾ ಹೋಟೆಲ್ ಮಾಲೀಕರು ಭಾಗಿಯಾಗಲಿದ್ದಾರೆ. ಇನ್ನು ಸಿಲಿಂಡರ್ ಬೆಲೆ ಹೆಚ್ಚಳದ ಜೊತೆಗೆ ಹಾಲು – ತುಪ್ಪ, ಮೈದಾ ಸೇರಿ ಇತರೆ ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಸರಕು ಸಾಕಾಣೆ ಹಾಗೂ ಕಟ್ಟಡಗಳ ಬಾಡಿಗೆ ಹೆಚ್ಚಾಗಿದೆ. ಹಾಲು, ಮೊಸರು ಹಾಗೂ ತುಪ್ಪದ ಕೊರತೆಯಿಂದಾಗಿ ಸಿಹಿ ಪದಾರ್ಥಗಳನ್ನ ಮಾಡುವುದನ್ನೆ ಕಡಿಮೆ ಮಾಡಲಾಗಿದೆ. ಇವೆಲ್ಲವನ್ನ ಗಮನದಲ್ಲಿಟ್ಟುಕೊಂಡು ಇಂದು ಸಭೆ ನಡೆಯುತ್ತಿದ್ದು, ಗ್ರಾಹಕರಿಗೆ ಇಂದಿನಿಂದ ಮತ್ತೊಂದು ಶಾಕ್ ಎದುರಾಗಲಿದೆ.
ಇದನ್ನೂ ಓದಿ: Puducherry: 300 ರೂ. ಮಾಸಿಕ ಎಲ್‌ಪಿಜಿ ಸಬ್ಸಿಡಿ ಘೋಷಿಸಿದ ಪುದುಚೇರಿ ಸರ್ಕಾರ
ನಿರಂತರವಾಗಿ ಸಿಲಿಂಡರ್ ದರ ಹೆಚ್ಚಳದಿಂದ ಹೋಟೆಲ್ ಊಟ-ತಿಂಡಿಗಳ ಮೇಲೆ ದರ ಹೆಚ್ಚಿಸುವ ಬಗ್ಗೆ ಸಭೆ ಕರೆದಿದ್ದೇವೆ. ಸಭೆಯಲ್ಲಿ ಎಲ್ಲ ಹೋಟೆಲ್‌ಗಳ ಮಾಲೀಕರು ಸೇರಿ ದರ ಏರಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ನಿರ್ಧಾರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.
ಎಲ್‌ಪಿಜಿ ದರ 50 ರೂ ಹೆಚ್ಚಳವಾಗಿದೆ. ಇದರ ಪರಿಣಾಮ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ 1,105 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗೆ 350 ರೂಪಾಯಿ ಏರಿಕೆ ಮಾಡಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:27 am, Mon, 3 April 23