DA Hike: ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ತುಟ್ಟಿಭತ್ಯೆ ನೀಡಲು ಸಚಿವ ಸಂಪುಟ ಒಪ್ಪಿಗೆ

Dearness Allowance Hike: ಈ ಹೊಸ ಪ್ರಸ್ತಾವವೂ ಅನುಷ್ಠಾನಕ್ಕೆ ಬಂದ ನಂತರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ 31ಕ್ಕೆ ಏರಿಕೆಯಾಗಲಿದೆ.

DA Hike: ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ತುಟ್ಟಿಭತ್ಯೆ ನೀಡಲು ಸಚಿವ ಸಂಪುಟ ಒಪ್ಪಿಗೆ
ಪ್ರಾತಿನಿಧಿಕ ಚಿತ್ರ

ದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3ರಷ್ಟು ತುಟ್ಟಿಭತ್ಯೆ (Dearness Allowance – DA) ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ಹೊಸ ಪ್ರಸ್ತಾವವೂ ಅನುಷ್ಠಾನಕ್ಕೆ ಬಂದ ನಂತರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ 31ಕ್ಕೆ ಏರಿಕೆಯಾಗಲಿದೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಹಣಕಾಸು ಇಲಾಖೆಯು ಜ್ಞಾಪನಾ ಪತ್ರವೊಂದನ್ನು ಹೊರಡಿಸಿ ನಿವೃತ್ತ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ನಗದು ಪಾವತಿಯ ವಿವರ ನೀಡಿತ್ತು. ಶೇ 17ರಿಂದ ಶೇ 28ಕ್ಕೆ ತುಟ್ಟಿಭತ್ಯೆ ಹಾಗೂ ಬೆಲೆಏರಿಕೆ ಪರಿಹಾರ ಒದಗಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರವು ಕಳೆದ ಜುಲೈ 1, 2021ರಿಂದಲೇ ಪೂರ್ವಾನ್ವಯವಾಗಲಿದೆ. 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ಸರ್ಕಾರದ ಈ ನಿರ್ಧಾರದಿಂದ ಅನುಕೂಲವಾಗಲಿದೆ. ಜನವರಿ 1, 2020ರಿಂದ ಜೂನ್ 30, 2021ರ ಅವಧಿಯ ತುಟ್ಟಿಭತ್ಯೆ ನೀಡಿಕೆ ಬಗ್ಗೆಯೂ ಕೇಂದ್ರ ಸರ್ಕಾರದ ಜ್ಞಾಪನಾ ಪತ್ರ ಮಾಹಿತಿ ನೀಡಿದೆ. ಈ ಅವಧಿಯ ತುಟ್ಟಿಭತ್ಯೆಯು ಮೂಲ ವೇತನದ ಶೇ 17ಕ್ಕೆ ಸೀಮಿತವಾಗಿರುತ್ತದೆ. ನಂತರದ ದಿನಗಳಲ್ಲಿ ಈ ಪ್ರಮಾಣವು ಶೇ 28ಕ್ಕೆ ಏರಿಕೆಯಾಗಿದೆ.

ಈ ಅವಧಿಯಲ್ಲಿ ನಿವೃತ್ತರಾಗಿರುವ ಉದ್ಯೋಗಿಗಳಿಗೆ ನೀಡುವ ತುಟ್ಟಿಭತ್ಯೆಯ ವಿವರವನ್ನೂ ಕೇಂದ್ರ ಸರ್ಕಾರ ಒದಗಿಸಿದೆ. ಜನವರಿ 1, 2020ರಿಂದ ಜೂನ್ 30, 2020ರ ಅವಧಿಗೆ ಮೂಲ ವೇತನದ ಶೇ 21, ಜುಲೈ 1, 2020ರಿಂದ ಡಿಸೆಂಬರ್ 31, 2020ರ ಅವಧಿಗೆ ಶೇ 24, ಜನವರಿ 1, 2021ರಿಂದ ಮೇ 30, 2021ರ ಅವಧಿಗೆ ಶೇ 28 ಎಂದು ನಿಗದಿಪಡಿಸಲಾಗಿದೆ.

ಕೊವಿಡ್-19 ಪಿಡುಗಿನ ಅವಧಿಯಲ್ಲಿ ಸರ್ಕಾರವು ತುಟ್ಟಿಭತ್ಯೆ ಮತ್ತು ಬೆಲೆ ಏರಿಕೆ ಪರಿಹಾರವನ್ನು ತಡೆಹಿಡಿದಿತ್ತು. ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021ರ ತುಟ್ಟಿಭತ್ಯೆಗಳನ್ನು ಸರ್ಕಾರ ನೌಕರರಿಗೆ ನೀಡಿರಲಿಲ್ಲ.

ಕೇಂದ್ರದ ಕ್ಯಾಬಿನೆಟ್ ಸಭೆ ಮುಕ್ತಾಯ
ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲ್ಯಾನ್ ಯೋಜನೆಯನ್ನು ಮೂರು ಹಂತದಲ್ಲಿ ಗಮನಿಸಲಾಗುತ್ತದೆ. ಕ್ಯಾಬಿನೆಟ್ ಕಾರ್ಯದರ್ಶಿ ಅಧ್ಯಕ್ಷತೆಯ ಕಾರ್ಯದರ್ಶಿಗಳ ತಂಡ ಉನ್ನತ ಹಂತದಲ್ಲಿ ಯೋಜನೆಯ ಅನುಷ್ಠಾನವನ್ನು ಗಮನಿಸುತ್ತದೆ. ಈ ತಂಡದಲ್ಲಿ 18 ಇಲಾಖೆಗಳ ಕಾರ್ಯದರ್ಶಿಗಳಿರುತ್ತಾರೆ. ಲಾಜಿಸ್ಟಿಕ್ ವಿಭಾಗದ ಕಾರ್ಯದರ್ಶಿ ಸಂಚಾಲಕರಾಗಿರುತ್ತಾರೆ ಎಂದು ಅನುರಾಗ್ ಠಾಕೂರ್ ತಿಳಿಸಿದರು.

ಕೇಂದ್ರ ಸರ್ಕಾರದ ಉದ್ಯೋಗಿಗಳ ತುಟ್ಟಿಭತ್ಯೆಯನ್ನು ಶೇ 28ರಿಂದ 31ಕ್ಕೆ ಹೆಚ್ಚಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ತುಟ್ಟಿಭತ್ಯೆ ಏರಿಕೆಗೆ ಪ್ರತಿ ವರ್ಷ ಸರ್ಕಾರ ₹ 9 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. 47.40 ಲಕ್ಷ ಮಂದಿ ಕೇಂದ್ರ ಸರ್ಕಾರಿ ನೌಕರರು ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ಡಿಎ ಏರಿಕೆಯ ಲಾಭ ಸಿಗಲಿದೆ.

ಇದನ್ನೂ ಓದಿ: Dearness Allowance: ಜುಲೈ 1ರಿಂದಲೇ ಕೇಂದ್ರ ಸರ್ಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ ಪಾವತಿ
ಇದನ್ನೂ ಓದಿ: ಕೇಂದ್ರ ನೌಕರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಬ್ರೇಕ್

Click on your DTH Provider to Add TV9 Kannada