AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7th pay commission: ಡಿಎ ಹೆಚ್ಚಳವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವರ್ಷದಲ್ಲಿ ವೇತನ ಜಾಸ್ತಿಯಾಗುವ ನಿರೀಕ್ಷೆ

2022ರ ಜನವರಿಯಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಪ್ರಮುಖ ಮಾಧ್ಯಮಗಳಲ್ಲಿ ವರದಿ ಆಗಿದೆ.

7th pay commission: ಡಿಎ ಹೆಚ್ಚಳವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವರ್ಷದಲ್ಲಿ ವೇತನ ಜಾಸ್ತಿಯಾಗುವ ನಿರೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 13, 2021 | 7:08 PM

Share

ಮಾಧ್ಯಮ ವರದಿಗಳ ಪ್ರಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಮ್ಮೆ ಶುಭ ಸುದ್ದಿ ಇದೆ. ಅದೇನೆಂದರೆ ಉದ್ಯೋಗಿಗಳ ಸಂಬಳವು 2022ನೇ ಇಸವಿಯ ಆರಂಭದಲ್ಲಿ 20,000 ರೂಪಾಯಿ ತನಕ ಹೆಚ್ಚಾಗುವ ನಿರೀಕ್ಷೆಯಿದೆ. ಪ್ರಮುಖ ಸುದ್ದಿ ದೈನಿಕದ ವರದಿಯ ಪ್ರಕಾರ, ಕೇಂದ್ರ ಸರ್ಕಾರವು 7ನೇ ವೇತನ ಆಯೋಗದ ಅಡಿಯಲ್ಲಿ ಡಿಎ ಅಥವಾ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಗಮನಿಸಬೇಕಾದ ಸಂಗತಿ ಏನೆಂದರೆ, ಈ ಡಿಎ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ದೃಢೀಕರಣ ಇಲ್ಲ ಅಥವಾ ಅದರ ಸಂಭವನೀಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಹೇಳಿಕೆಗಳು ಇಲ್ಲ ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿದೆ.

ಜೀವನ ವೆಚ್ಚಕ್ಕೆ ಹೊಂದಾಣಿಕೆ ಮಾಡುವ ಸಲುವಾಗಿ ತುಟ್ಟಿಭತ್ಯೆಯನ್ನು ಸಾರ್ವಜನಿಕ ವಲಯದ ಉದ್ಯಮಗಳ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ಪಾವತಿಸುತ್ತದೆ. ಅಂದಹಾಗೆ, ತುಟ್ಟಿ ಭತ್ಯೆಯು ಸಾರ್ವಜನಿಕ ವಲಯದ ಉದ್ಯೋಗಿಗಳ ಒಟ್ಟು ಸಂಬಳದ ಹೆಚ್ಚಿನ ಭಾಗವನ್ನು ಹೊಂದಿದೆ. ಹಣದುಬ್ಬರದ ಪ್ರಭಾವವನ್ನು ಸರಿದೂಗಿಸಲು ನೀಡಲಾಗುವ ಈ ಭತ್ಯೆಯನ್ನು ಸಾಮಾನ್ಯವಾಗಿ ವರ್ಷದಲ್ಲಿ ಎರಡು ಬಾರಿ ಹೆಚ್ಚಿಸಲಾಗುತ್ತದೆ- ಅದು ಜನವರಿ ಮತ್ತು ಜುಲೈ ತಿಂಗಳಿನಲ್ಲಿ ಆಗಿರುತ್ತದೆ.

ಸದ್ಯಕ್ಕೆ, ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ನೀಡಲಾಗುತ್ತಿದೆ. ಕೊನೆಯದಾಗಿ 2021ರ ಜುಲೈ ಮತ್ತು ಅಕ್ಟೋಬರ್‌ನಲ್ಲಿ ಡಿಎ ಹೆಚ್ಚಳವನ್ನು ನೀಡಲಾಯಿತು. ಈ ಹಿಂದೆ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರವು ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021ರ ಮೂರು ಕಂತುಗಳ DA ಮತ್ತು DR ಅನ್ನು ತಡೆಹಿಡಿದಿತ್ತು. 2021ರ ಜುಲೈನಲ್ಲಿ ಸರ್ಕಾರವು ಮತ್ತೆ ನೀಡಲು ಆರಂಭಿಸಿತು ಮತ್ತು ಡಿಆರ್ ಅಥವಾ ಡಿಯರ್​ನೆ ರಿಲೀಫ್ ಅನ್ನು ಶೇ 17ರಿಂದ ಶೇ 28ಕ್ಕೆ ಹೆಚ್ಚಿಸಿತು. ಅಲ್ಲದೆ, ಫಿಟ್‌ಮೆಂಟ್ ಅಂಶವನ್ನು ಶೇ 3.68ರಷ್ಟು ಹೆಚ್ಚಿಸಲು ಸರ್ಕಾರವು ಮಾತುಕತೆ ನಡೆಸುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದು ಅವರ ಸಂಬಳವನ್ನು ಮತ್ತಷ್ಟು ಹೆಚ್ಚಿಸಬಹುದು. ‘

2016ರಲ್ಲಿ ಕೊನೆಯ ಹೆಚ್ಚಳವನ್ನು ಮಾಡಲಾಗಿತ್ತು. ಆಗ ಮೂಲ ವೇತನವನ್ನು ರೂ. 6000ದಿಂದ ರೂ. 18,000ಕ್ಕೆ ಹೆಚ್ಚಿಸಲಾಯಿತು. ಮತ್ತು ಈಗ ಅದೇ ಚರ್ಚೆಗೆ ಹೋದರೆ ನಂತರ ವೇತನಗಳು ಇನ್ನೂ ರೂ. 8000 ಹೆಚ್ಚಳವನ್ನು ಮಾಡಬಹುದು ಎಂದು ಎದುರು ನೋಡಲಾಗುತ್ತಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನವನ್ನು ರೂ. 26,000ಕ್ಕೆ ಒಯ್ಯುತ್ತದೆ.

ಇದನ್ನೂ ಓದಿ: 7th Pay Commission: ಕೇಂದ್ರ ಸರ್ಕಾರಿ ನೌಕರರ ಎಕ್ಸ್​ಗ್ರೇಷಿಯಾ ಇಡಿಗಂಟು ಪಾವತಿಯಲ್ಲಿ ಭಾರೀ ಬದಲಾವಣೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ