Pensioners Life Certificate: ಪಿಂಚಣಿದಾರರ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸುವ ಗಡುವು ಡಿಸೆಂಬರ್​ 31ಕ್ಕೆ ವಿಸ್ತರಣೆ

ಪಿಂಚಣಿದಾರರು ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವುದಕ್ಕೆ ಈ ಹಿಂದೆ ಇದ್ದ ಗಡುವನ್ನು ನವೆಂಬರ್ 30ರಿಂದ ಡಿಸೆಂಬರ್ 31ಕ್ಕೆ ವಿಸ್ತರಿಸಲಾಗಿದೆ.

Pensioners Life Certificate: ಪಿಂಚಣಿದಾರರ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸುವ ಗಡುವು ಡಿಸೆಂಬರ್​ 31ಕ್ಕೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 02, 2021 | 4:56 PM

ಲಕ್ಷಾಂತರ ಸಂಖ್ಯೆಯಲ್ಲಿ ಇರುವ ಪಿಂಚಣಿದಾರರಿಗೆ ನಿರಾಳ ತರುವಂಥ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸುವ ಗಡುವನ್ನು ನವೆಂಬರ್ 30, 2021ರಿಂದ ಡಿಸೆಂಬರ್ 31, 2021ರ ವರೆಗೆ ವಿಸ್ತರಿಸಿದೆ. ಪ್ರತಿಯೊಬ್ಬ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿಯು ತನ್ನ ಪಿಂಚಣಿಯನ್ನು ಮುಂದುವರೆಸಲು ನವೆಂಬರ್ ತಿಂಗಳಿನಲ್ಲಿ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಸಿಬ್ಬಂದಿ ಸಚಿವಾಲಯ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಕಚೇರಿ ಸುತ್ತೋಲೆಯ ಪ್ರಕಾರ, ಈ ಉದ್ದೇಶಕ್ಕಾಗಿ ಹೆಚ್ಚಿನ ಸಂಖ್ಯೆಯ ಕೇಂದ್ರ ಸರ್ಕಾರದ ಪಿಂಚಣಿದಾರರು ದೈಹಿಕವಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡುತ್ತಾರೆ.

ಆದ್ದರಿಂದ, ವಿವಿಧ ರಾಜ್ಯಗಳಲ್ಲಿನ ಕೊವಿಡ್ -19 ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ಮತ್ತು ಕೊರೊನಾ ವೈರಸ್‌ಗೆ ವಯಸ್ಸಾದವರಲ್ಲಿ ದುರ್ಬಲತೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಎಲ್ಲ ವಯೋಮಾನದ ಪಿಂಚಣಿದಾರರಿಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಲು ಅಸ್ತಿತ್ವದಲ್ಲಿರುವ ಸಮಯವನ್ನು 30/11/2021ರಿಂದ ವಿಸ್ತರಿಸಲು ಸಚಿವಾಲಯವು ನಿರ್ಧರಿಸಿದೆ. ಈಗ ಕೇಂದ್ರ ಸರ್ಕಾರದ ಎಲ್ಲ ಪಿಂಚಣಿದಾರರು 31ನೇ ಡಿಸೆಂಬರ್, 2021ರ ವರೆಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದು.

ಈ ವಿಸ್ತೃತ ಅವಧಿಯಲ್ಲಿ, ಪಿಂಚಣಿ ವಿತರಿಸುವ ಅಧಿಕಾರಿಗಳು (ಪಿಡಿಎ) ತಡೆರಹಿತವಾಗಿ ಪಿಂಚಣಿ ಪಾವತಿಸುವುದನ್ನು ಮುಂದುವರಿಸಲಾಗುತ್ತದೆ. ಜೀವಿತ ಪ್ರಮಾಣಪತ್ರಗಳನ್ನು ಪಡೆಯುವಾಗ ಅಗತ್ಯ ಮೇಲಿನ ಕ್ರಮಗಳು ಶಾಖೆಗಳಲ್ಲಿ ನೂಕುನುಗ್ಗಲನ್ನು ತಪ್ಪಿಸಲು ಮತ್ತು ಕೊವಿಡ್-19 ಸೂಕ್ತವಾದ ನಡವಳಿಕೆಯನ್ನು ಕಾಪಾಡಿಕೊಳ್ಳಲು ನಿರೀಕ್ಷಿಸಲಾಗಿದೆ ಎಂದು ಕಚೇರಿ ಸುತ್ತೋಲೆ ಹೇಳಿದೆ. ಶಾಖೆಗಳಲ್ಲಿ ಸರಿಯಾದ ವ್ಯವಸ್ಥೆಗಳು ಮತ್ತು ಸಾಮಾಜಿಕ ಅಂತರದ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಜನಸಂದಣಿಯನ್ನು ತಡೆಯಲು ಪಿಡಿಎಗಳನ್ನು ಸುತ್ತೋಲೆ ಕೇಳಿದೆ.

ಇದನ್ನೂ ಓದಿ: Financial changes: ಡಿಸೆಂಬರ್ 1ರಿಂದ ಜಾರಿ ಆಗಬಹುದಾದ ಪ್ರಮುಖ ಹಣಕಾಸು ವಿಚಾರದ ಬದಲಾವಣೆಗಳಿವು

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು