Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 22: ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಹೀಗಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬಹುತೇಕ ಸ್ಥಿರವಾಗಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ 61 ಪೈಸೆ ಮತ್ತು ಡೀಸೆಲ್ 59 ಪೈಸೆ ಕಡಿಮೆಯಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

Petrol Diesel Price on December 22: ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಹೀಗಿದೆ
ಪೆಟ್ರೋಲ್
Follow us
ಆಯೇಷಾ ಬಾನು
|

Updated on: Dec 22, 2023 | 8:01 AM

2023 ಡಿಸೆಂಬರ್ 22ರ ಪೆಟ್ರೋಲ್-ಡೀಸೆಲ್ ದರ: ಡಿಸೆಂಬರ್ 22ನೇ ಶುಕ್ರವಾರದಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ (Petrol Diesel Price). ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬಹುತೇಕ ಸ್ಥಿರವಾಗಿದೆ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.ಯಾವ ನಗರದಲ್ಲಿ ಇಂಧನದ ಬೆಲೆ ಎಷ್ಟಿದೆ ಇಲ್ಲಿ ತಿಳಿಯಿರಿ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ 61 ಪೈಸೆ ಮತ್ತು ಡೀಸೆಲ್ 59 ಪೈಸೆ ಕಡಿಮೆಯಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಆದರೆ ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 56 ಪೈಸೆ ಏರಿಕೆಯಾಗಿದೆ. ಚಂಡೀಗಢ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ?

  • ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 90.08 ರೂ ಇದೆ.
  • ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ.
  • ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.
  • ಚೆನ್ನೈನಲ್ಲಿ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ ಇದೆ.
  • ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.79 ರೂ ಮತ್ತು ಡೀಸೆಲ್ 89.96 ರೂ ಆಗಿದೆ.
  • ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ.
  • ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ.
  • ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ.
  • ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.
  • ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ ಮತ್ತು ಡೀಸೆಲ್ 87.89 ರೂ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್