2023 ಡಿಸೆಂಬರ್ 22ರ ಪೆಟ್ರೋಲ್-ಡೀಸೆಲ್ ದರ: ಡಿಸೆಂಬರ್ 22ನೇ ಶುಕ್ರವಾರದಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ (Petrol Diesel Price). ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬಹುತೇಕ ಸ್ಥಿರವಾಗಿದೆ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.ಯಾವ ನಗರದಲ್ಲಿ ಇಂಧನದ ಬೆಲೆ ಎಷ್ಟಿದೆ ಇಲ್ಲಿ ತಿಳಿಯಿರಿ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ 61 ಪೈಸೆ ಮತ್ತು ಡೀಸೆಲ್ 59 ಪೈಸೆ ಕಡಿಮೆಯಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳ ಮತ್ತು ಉತ್ತರಾಖಂಡದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಆದರೆ ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 56 ಪೈಸೆ ಏರಿಕೆಯಾಗಿದೆ. ಚಂಡೀಗಢ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ