AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಮಹಾ ಲೆಕ್ಕ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡ ದೀಪಕ್‌ ದಾಸ್‌

ದಾಸ್, ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ ತರಬೇತಿ ಅಕಾಡೆಮಿಯಾದ ‘ಇನ್‌ಸ್ಟಿಟ್ಯೂಟ್‌ ಆಫ್ ಗವರ್ನ್‌ಮೆಂಟ್‌ ಅಕೌಂಟ್ಸ್ ಅಂಡ್‌ ಫೈನಾನ್ಸ್’ನ (ಐಎನ್‌ಜಿಎಎಫ್) ನಿರ್ದೇಶಕರೂ ಆಗಿದ್ದಾರೆ.

ನೂತನ ಮಹಾ ಲೆಕ್ಕ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡ ದೀಪಕ್‌ ದಾಸ್‌
ದೀಪಕ್ ದಾಸ್
Follow us
TV9 Web
| Updated By: ganapathi bhat

Updated on: Aug 01, 2021 | 9:25 PM

ದೆಹಲಿ: ದೀಪಕ್ ದಾಸ್ ಇಂದು (ಆಗಸ್ಟ್ 1) ನೂತನ ಮಹಾ ಲೆಕ್ಕ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡರು. ದೀಪಕ್ ದಾಸ್ ಈ ಸ್ಥಾನವನ್ನು(ಸಿಜಿಎ) ಅಲಂಕರಿಸಿದ 25ನೇ ಅಧಿಕಾರಿಯಾಗಿದ್ದಾರೆ. 1986ರ ಬ್ಯಾಚ್‌ನ ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ಐಸಿಎಎಸ್) ಅಧಿಕಾರಿಯಾದ ದೀಪಕ್ ದಾಸ್ ಅವರನ್ನು ಭಾರತ ಸರಕಾರವು 2021ರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಮಹಾ ಲೆಕ್ಕ ನಿಯಂತ್ರಕರನ್ನಾಗಿ (ಸಿಜಿಎ) ಆಗಿ ನೇಮಕ ಮಾಡಿದೆ.

ದಾಸ್, ತಮ್ಮ 35 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಮತ್ತು ಅರಣ್ಯ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಹಾಗೂ ಬೃಹತ್ ಕೈಗಾರಿಕೆಗಳ ಉತ್ತೇಜನ ಇಲಾಖೆ, ವಾಣಿಜ್ಯ ಮತ್ತು ಜವಳಿ, ಕೃಷಿ ಮತ್ತು ರೈತರ ಕಲ್ಯಾಣ, ರಸ್ತೆ ಸಾರಿಗೆ, ಹೆದ್ದಾರಿಗಳು, ಹಡಗು, ಗೃಹ ವ್ಯವಹಾರಗಳು ಮತ್ತು ಪರೋಕ್ಷ ತೆರಿಗೆಗಳ ಕೇಂದ್ರ ಮಂಡಳಿ ಮತ್ತು ಕೇಂದ್ರೀಯ ತೆರಿಗೆಗಳ ಮಂಡಳಿ ಹೀಗೆ ವಿವಿಧ ಸಚಿವಾಲಯಗಳಲ್ಲಿ, ವಿವಿಧ ಹಂತಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ದಾಸ್, ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ ತರಬೇತಿ ಅಕಾಡೆಮಿಯಾದ ‘ಇನ್‌ಸ್ಟಿಟ್ಯೂಟ್‌ ಆಫ್ ಗವರ್ನ್‌ಮೆಂಟ್‌ ಅಕೌಂಟ್ಸ್ ಅಂಡ್‌ ಫೈನಾನ್ಸ್’ನ (ಐಎನ್‌ಜಿಎಎಫ್) ನಿರ್ದೇಶಕರೂ ಆಗಿದ್ದಾರೆ.

ದಾಸ್, ಭಾರತ ಸರಕಾರದಲ್ಲಿ ನಿಯೋಜನೆಯಲ್ಲಿದ್ದಾಗ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ. ಅಲ್ಲಿ ಅವರು ರಕ್ಷಣಾ ಸಚಿವಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ಮತ್ತು ಭಾರತೀಯ ಒಳನಾಡು ಜಲಮಾರ್ಗ ಪ್ರಾಧಿಕಾರ, ಬಂದರು, ಹಡಗು ಮತ್ತು ಜಲಸಾರಿಗೆ ಸಚಿವಾಲಯದಲ್ಲಿ ಸದಸ್ಯರಾಗಿ (ಹಣಕಾಸು) ಸೇವೆ ಸಲ್ಲಿಸಿದ್ದರು.

‘ಸಿಜಿಎ’ಯ ಉಸ್ತುವಾರಿ ವಹಿಸಿಕೊಳ್ಳುವ ಮೊದಲು, ದಾಸ್ ಅವರು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯಲ್ಲಿ ಲೆಕ್ಕಪತ್ರಗಳ ಪ್ರಧಾನ ಮುಖ್ಯ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ನೇರ ತೆರಿಗೆ ಸಂಗ್ರಹಣೆ, ವರದಿ ಮತ್ತು ರಸೀದಿ ಲೆಕ್ಕಪತ್ರಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ತಂತ್ರಜ್ಞಾನ ಚಾಲಿತ ಉಪಕ್ರಮಗಳಿಗೆ ನಾಂದಿ ಹಾಡಿದರು. ದಾಸ್, ದೆಹಲಿ ವಿಶ್ವವಿದ್ಯಾಲಯದ ಕಿರೋರಿ ಮಾಲ್ ಕಾಲೇಜಿನ ಹಳೆಯ ವಿದ್ಯಾರ್ಥಿ.

ಇದನ್ನೂ ಓದಿ: GST: ಜುಲೈ ತಿಂಗಳಲ್ಲಿ 1,16,393 ಕೋಟಿ ರೂಪಾಯಿ ಒಟ್ಟು ಜಿಎಸ್​ಟಿ ಸಂಗ್ರಹ

Financial Changes: ಆಗಸ್ಟ್ 1ರಿಂದ ಅನ್ವಯ ಆಗುವಂತೆ ಈ 5 ಹಣಕಾಸು ಬದಲಾವಣೆಗಳು ನಿರೀಕ್ಷಿಸಿ, ಸಿದ್ಧರಾಗಿ

(Deepak Das appointed as CGA on August 1 he is the 25th officer to appoint as CGA)

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ