AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಸುಗ್ಗಿ..! ಅಕ್ಟೋಬರ್ ತಿಂಗಳಲ್ಲಿ 31.53 ಲಕ್ಷ ಕೋಟಿ ರೂ ಯುಪಿಐ ವಹಿವಾಟು ದಾಖಲೆ

ದೀಪಾವಳಿ ಹಬ್ಬದ ಸೀಸನ್‌ನಲ್ಲಿ ಯುಪಿಐ (UPI) ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಕಾಲಿಕ ದಾಖಲೆ ಬರೆದಿದೆ. ಭರ್ಜರಿ ವಹಿವಾಟಿನ ಮೂಲಕ ಹೊಸ ಮೈಲಿಗಲ್ಲು ತಲುಪಿದೆ ಎಂದು ವರದಿಗಳು ತಿಳಿಸಿವೆ. ಅಕ್ಟೋಬರ್ ತಿಂಗಳಲ್ಲಿ ಯುಪಿಐ ವಹಿವಾಟು 31.53 ಲಕ್ಷ ಕೋಟಿ ರೂ ಆಗಿದೆ. ಆ ತಿಂಗಳ ನಿತ್ಯದ ಸರಾಸರಿ ಯುಪಿಐ ವಹಿವಾಟು 1 ಲಕ್ಷ ಕೋಟಿ ರೂ ಆಗಿದೆ. ನವೆಂಬರ್​ನ ಮೊದಲ ನಾಲ್ಕು ದಿನಗಳಲ್ಲಿ ಸರಾಸರಿ 1.29 ಲಕ್ಷ ಕೋಟಿ ರೂ ವಹಿವಾಟು ದಾಖಲಾಗಿದೆ.

ದೀಪಾವಳಿ ಸುಗ್ಗಿ..! ಅಕ್ಟೋಬರ್ ತಿಂಗಳಲ್ಲಿ 31.53 ಲಕ್ಷ ಕೋಟಿ ರೂ ಯುಪಿಐ ವಹಿವಾಟು ದಾಖಲೆ
ಯುಪಿಐImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 17, 2026 | 12:56 PM

Share

ನವದೆಹಲಿ, ನವೆಂಬರ್ 17: ದೀಪಾವಳಿ ಹಬ್ಬದ ಅವಧಿಯಲ್ಲಿ ದೇಶಾದ್ಯಂತ ಡಿಜಿಟಲ್ ಪಾವತಿಗಳಲ್ಲಿ ಭಾರಿ ಏರಿಕೆಯಾಗಿದ್ದು, ಯುಪಿಐ ವಹಿವಾಟು ಮೌಲ್ಯವು ಗರಿಷ್ಠ 31.53 ಲಕ್ಷ ಕೋಟಿ ರೂ ತಲುಪುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಹಬ್ಬದ ಸಮಯದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಖರೀದಿಗಳು ಹೆಚ್ಚಾಗಿರುವುದೇ ಈ ದೈತ್ಯ ಜಿಗಿತಕ್ಕೆ ಪ್ರಮುಖ ಕಾರಣವಾಗಿದೆ.

ಈ ಬಾರಿ ದೀಪಾವಳಿ ಸೀಸನ್ ನವೆಂಬರ್ ಮೊದಲ ವಾರದಲ್ಲಿ ಇತ್ತು. ಇದರಿಂದಾಗಿ ಅಕ್ಟೋಬರ್ ತಿಂಗಳಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಯುಪಿಐ ಮೂಲಕ ನಡೆದ ಹಣದ ವಹಿವಾಟು ಮೌಲ್ಯ 29.37 ಲಕ್ಷ ಕೋಟಿ ರೂ. ಅಕ್ಟೋಬರ್ ತಿಂಗಳಲ್ಲಿ ಇದು 31.53 ಲಕ್ಷ ಕೋಟಿ ರೂ ಆಗಿದೆ. 2025ರ ಅಕ್ಟೋಬರ್ ತಿಂಗಳಲ್ಲಿ ಆದ 27.27 ಲಕ್ಷ ಕೋಟಿ ರೂಗೆ ಹೋಲಿಸಿದರೆ ಈ ವರ್ಷದ ಹಬ್ಬದ ಸೀಸನ್​ನಲ್ಲಿ ಯುಪಿಐ ವಹಿವಾಟು ಗಣನೀಯವಾಗಿ ಹೆಚ್ಚಿದೆ.

ಇದನ್ನೂ ಓದಿ: ಈ ಟಿಪ್ಸ್ ಪಾಲಿಸಿ ನಿವೃತ್ತಿ ಜೀವನಕ್ಕೆ ಈಗಿನಿಂದಲೇ ದುಡ್ಡು ಉಳಿಸಿ

ಈ ವರ್ಷದ ಅಕ್ಟೋಬರ್​ನಲ್ಲಿ ಯುಪಿಐ ವಹಿವಾಟು ಗಮನಿಸಿದರೆ ದಿನಕ್ಕೆ ಸರಾಸರಿ ಒಂದು ಲಕ್ಷ ಕೋಟಿ ರೂ ಹಣದ ಚಲಾವಣೆಯು ಯುಪಿಐ ಮೂಲಕ ಆಗಿರುವುದು ಕಂಡುಬರುತ್ತದೆ. ಯುಪಿಐ ಅಸ್ತಿತ್ವಕ್ಕೆ ಬಂದ ಬಳಿಕ ಯಾವುದೇ ತಿಂಗಳಲ್ಲಿ ಸರಾಸರಿ ವಹಿವಾಟು ಒಂದು ಲಕ್ಷ ಕೋಟಿ ರೂ ಗಡಿ ಮುಟ್ಟಿದ್ದು ಇದೇ ಮೊದಲು ಎನ್ನಲಾಗಿದೆ.

ಇನ್ನು, ನವೆಂಬರ್ ತಿಂಗಳಲ್ಲಿ ದೀಪಾವಳಿ ಹಬ್ಬ ಶುರುವಾಗುವವರೆಗೂ, ಅಂದರೆ, ಮೊದಲ ನಾಲ್ಕು ದಿನದಲ್ಲಿ ಸರಾಸರಿ ಯುಪಿಐ ಟ್ರಾನ್ಸಾಕ್ಷನ್ ಬರೋಬ್ಬರಿ 1.29 ಲಕ್ಷ ಕೋಟಿ ರೂ ಇತ್ತು. ಈ ಟ್ರೆಂಡ್ ಗಮನಿಸಿದರೆ ನವೆಂಬರ್​ನಲ್ಲಿ ಯುಪಿಐ ವಹಿವಾಟು ದಾಖಲೆ ಮುರಿಯುವ ಸಾಧ್ಯತೆ ಇಲ್ಲದಿಲ್ಲ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಭಾರತದ ನಿರುದ್ಯೋಗ ದರ ಶೇ. 4.9ಕ್ಕೆ ಇಳಿಕೆ; ಉದ್ಯೋಗಸ್ಥ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ

ಎಂಡಿಆರ್ ಶುಲ್ಕದ ಭಯ

ಯುಪಿಐ ವಹಿವಾಟಿಗೆ ಎಂಡಿಆರ್ ಶುಲ್ಕ ವಿಧಿಸುವ ಕ್ರಮ ಇನ್ನೂ ಜಾರಿಗೆ ಬಂದಿಲ್ಲ. ದೊಡ್ಡ ಮೌಲ್ಯದ ವಹಿವಾಟುಗಳಿಗೆ ಎಂಡಿಆರ್ ಶುಲ್ಕ ಹಾಕುವ ಪ್ರಸ್ತಾಪ ಇದೆ. ಇದು ವ್ಯಾಪಾರಿಗಳಿಗೆ ವಿಧಿಸುವ ಶುಲ್ಕ. ಗ್ರಾಹಕರಿಗೆ ಈ ಶುಲ್ಕದ ಹೊರೆ ಬೀಳದಂತೆ ಎಚ್ಚರ ವಹಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಆದರೆ, ಈ ಎಂಡಿಆರ್ ಶುಲ್ಕ ವ್ಯವಸ್ಥೆಯನ್ನು ಬಹಳಷ್ಟು ಮಂದಿ ವಿರೋಧಿಸುತ್ತಿದ್ದಾರೆ. ಇದರಿಂದ ಯುಪಿಐ ಇಕೋಸಿಸ್ಟಂ ದುರ್ಬಲಗೊಳ್ಳಬಹುದು. ಮತ್ತೆ ಕ್ಯಾಷ್ ಎಕನಾಮಿ ಬಲಿಷ್ಠಗೊಳ್ಳಬಹುದು ಎನ್ನುವ ಆತಂಕವನ್ನು ಹಲವು ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ