Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

| Updated By: shivaprasad.hs

Updated on: May 28, 2022 | 9:10 AM

Petrol Price and Diesel Price on 28.05.2022: ದೇಶದ ಪ್ರಮುಖ ನಗರಗಳಲ್ಲಿ ಇಂದು (ಶನಿವಾರ, ಮೇ.28) ಪೆಟ್ರೋಲ್, ಡೀಸೆಲ್​ ದರ ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Follow us on

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರದಂದು (ಮೇ.21) ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಶನಿವಾರ, ಮೇ.28) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Universal Account Number: ನಿಮ್ಮ ಇಪಿಎಫ್ ಖಾತೆಯ ಯುಎಎನ್ ಅನ್ನು ಕಂಡುಹಿಡಿಯುವುದು ಹೇಗೆ
Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ 650 ರೂ. ಹೆಚ್ಚಳ
Home Loan: ಗೃಹ ಸಾಲದಲ್ಲಿ ಸ್ಥಿರ ಹಾಗೂ ಬದಲಾಗುವ ಬಡ್ಡಿ ದರದ ಬಗ್ಗೆ ನಿಮಗೆಷ್ಟು ಗೊತ್ತಿದೆ?
Bank Holidays in June 2022: ಜೂನ್​ ತಿಂಗಳಲ್ಲಿ ಬ್ಯಾಂಕ್ ರಜಾ ದಿನಗಳು ಅದೆಷ್ಟು ಕಡಿಮೆ ಇವೆ ಗೊತ್ತೆ?

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ