ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

USD vs INR, lowest level of rupee: ಡಾಲರ್ ಎದುರು ರುಪಾಯಿ ಮೌಲ್ಯ ಮೊದಲ ಬಾರಿಗೆ 94ರ ಮಟ್ಟಕ್ಕಿಂತ ಕೆಳಗಿಳಿದಿದೆ. ಇಂದು ಸೋಮವಾರ 93.83ರ ಮಟ್ಟದಲ್ಲಿ ಆರಂಭ ಕಂಡ ರುಪಾಯಿ, ಕೆಲ ಹೊತ್ತಿನಲ್ಲಿ 94ರ ಮಟ್ಟಕ್ಕೆ ಇಳಿಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ರುಪಾಯಿಯ ಅತ್ಯಂತ ನಿಕೃಷ್ಟ ಸಾಧನೆ ಇದಾಗಿದೆ. ಡಾಲರ್ ಬಲಗೊಂಡಿರುವುದು, ವಿದೇಶೀ ಹೂಡಿಕೆಗಳು ಹೊರಹೋಗುತ್ತಿರುವುದು, ತೈಲ ಬೆಲೆ ಹೆಚ್ಚುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?
ಡಾಲರ್ ವರ್ಸಸ್ ರುಪಾಯಿ

Updated on: Mar 23, 2026 | 12:47 PM

ನವದೆಹಲಿ, ಮಾರ್ಚ್ 23: ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರುಪಾಯಿಯ ದುರ್ಬಲ ಸಾಧನೆ (Dollar vs Rupee) ಮುಂದುವರಿದಿದೆ. ಡಾಲರ್​ಗೆ ರುಪಾಯಿ ಮೌಲ್ಯ 94 ರು ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರುಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಇವತ್ತು ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು.

ರುಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣಗಳು?

ಕಚ್ಛಾ ತೈಲ ಬೆಲೆಗಳು ಸತತವಾಗಿ ಹೆಚ್ಚಿನ ಮಟ್ಟದಲ್ಲಿ ಇರುವುದು ಭಾರತದ ಆಮದು ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಆಮದು ಹೆಚ್ಚಾದಾಗ ಡಾಲರ್​ಗೆ ಬೇಡಿಕೆ ಹೆಚ್ಚುತ್ತದೆ. ಪರಿಣಾಮವಾಗಿ ಡಾಲರ್ ಎದುರು ರುಪಾಯಿ ಮೌಲ್ಯ ಸಹಜವಾಗಿ ಕುಂದಿದೆ.

ಇದನ್ನೂ ಓದಿ: ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

ರುಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕನ್ ಡಾಲರ್ ಪ್ರಬಲಗೊಂಡಿರುವುದಷ್ಟೇ ಅಲ್ಲ, ಇನ್ನೂ ಕೆಲ ಕಾರಣಗಳಿವೆ. ಭಾರತೀಯ ಮಾರುಕಟ್ಟೆಗಳಿಂದ ವಿದೇಶೀ ಹಣದ ಹೊರಹರಿವು ಸತತವಾಗಿ ನಡೆಯುತ್ತಿದೆ. ಹಾಗೆಯೇ, ಬಾಂಡ್ ಯೀಲ್ಡ್​ಗಳೂ ಕೂಡ ಹೆಚ್ಚಿನ ಮಟ್ಟದಲ್ಲಿವೆ. ಈ ಅಂಶಗಳು ರುಪಾಯಿ ಮೇಲೆ ಒತ್ತಡ ಹಾಕಿವೆ ಎಂಬುದು ತಜ್ಞರ ಅನಿಸಿಕೆ.

ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಅಥವಾ ಎಫ್​ಪಿಐಗಳು ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದ ಷೇರುಗಳು, ಬಾಂಡ್​ಗಳು ಇತ್ಯಾದಿಯನ್ನು ಮಾರುತ್ತಿರುವುದು ಹೆಚ್ಚಿದೆ. ಹೀಗೆ ಮಾರುವಾಗ ರುಪಾಯಿಯನ್ನು ಡಾಲರ್​ಗಳಾಗಿ ಪರಿವರ್ತಿಸುತ್ತಾರೆ. ಹೀಗಾಗಿ, ಅಮೆರಿಕನ್ ಡಾಲರ್​ಗೆ ಬೇಡಿಕೆ ಹೆಚ್ಚಿ, ರುಪಾಯಿ ಮೌಲ್ಯ ಕುಸಿಯಲು ಕಾರಣವಾಗುತ್ತದೆ.

ಇದನ್ನೂ ಓದಿ: ಈ ಫಂಡ್​ನಲ್ಲಿ 10,000 ರೂ ಎಸ್​ಐಪಿ; 21 ವರ್ಷದಲ್ಲಿ ಬರೋಬ್ಬರಿ 2 ಕೋಟಿ ರೂ ರಿಟರ್ನ್ಸ್

ಜಾಗತಿಕವಾಗಿ ಅನಿಶ್ಚಿತ ಪರಿಸ್ಥಿತಿ ಇದ್ದಾಗ ಹೂಡಿಕೆದಾರರು ಎಚ್ಚರಿಕೆ ವಹಿಸುತ್ತಾರೆ. ಇಂಥ ಸಂದರ್ಭಗಳಲ್ಲಿ ರುಪಾಯಿಯಂತಹ ಕರೆನ್ಸಿಗಳ ಬದಲು ಡಾಲರ್ ಅನ್ನು ಇಟ್ಟುಕೊಳ್ಳುವುದುಂಟು. ಇದು ಡಾಲರ್​ಗಿರುವ ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us