AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

Gas Cylinder Price in Bengaluru: 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯು ₹ 8.50 ಹೆಚ್ಚಾಗಿದೆ.

LPG Gas Cylinder Price: ಗೃಹಬಳಕೆ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 06, 2022 | 9:47 AM

Share

ಬೆಂಗಳೂರು: ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯನ್ನು ಬುಧವಾರದಿಂದ (ಜುಲೈ 6) ಹೆಚ್ಚಿಸಲಾಗಿದೆ. ಗೃಹಬಳಕೆ ಸಿಲಿಂಡರ್​ ದರ ₹ 50 ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಲಿಂಡರ್ ಬೆಲೆಯು ಈವರೆಗೆ ₹ 1,003 ಇತ್ತು. ಇನ್ನು ಮುಂದೆ ₹ 1,053 ಆಗಲಿದೆ. ಬೆಂಗಳೂರಿನಲ್ಲಿ ಈವರೆಗೆ ₹ 1,005.50 ಇತ್ತು. ಇನ್ನು ಮುಂದೆ ಇದು ₹ 1,055.50 ಆಗಲಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಸಿಲಿಂಡರ್ ಬೆಲೆಯನ್ನು ₹ 53.5ರಷ್ಟು ಹೆಚ್ಚಿಸಿತ್ತು.

ಭಾರತದ ವಿವಿಧ ಪ್ರಮುಖ ನಗರಗಳಲ್ಲಿ 14.2 ಕೆಜಿ ತೂಕದ, ಸಬ್ಸಿಡಿ ರಹಿತ, ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆಯು ಹೀಗಿದೆ. ದೆಹಲಿ; ₹ 1,053, ಮುಂಬೈ; ₹ 1,052, ಕೊಲ್ಕತ್ತಾ; ₹ 1,079, ಚೆನ್ನೈ; ₹ 1068.50.

5 ಕೆಜಿ ತೂಕದ ಗೃಹಬಳಕೆ ಸಿಲಿಂಡರ್​ ದರವನ್ನೂ ಪೆಟ್ರೋಲಿಯಂ ಕಂಪನಿಗಳು (Oil Marketing Companies – OMCs) ಹೆಚ್ಚಿಸಿವೆ. ಪ್ರತಿ 5 ಕೆಜಿ ತೂಕದ ಸಿಲಿಂಡರ್ ಬೆಲೆಯು ₹ 18 ಹೆಚ್ಚಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯು ₹ 8.50 ಹೆಚ್ಚಾಗಿದೆ. ಈ ಹಿಂದೆ ಮೇ 19ರಂದು ವಾಣಿಜ್ಯ ಬಳಕೆ ಸಿಲಿಂಡರ್​ಗಳ ಬೆಲೆ ₹ 3ರಷ್ಟು ಹೆಚ್ಚಾಗಿತ್ತು. ಅದಕ್ಕೂ ಮೊದಲು ಮೇ 7ರಂದು ₹ 50 ಹೆಚ್ಚಾಗಿತ್ತು.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ಜುಲೈ 1ರಂದು ₹ 198 ಇಳಿಕೆ ಕಂಡಿತ್ತು. ಈ ಇಳಿಕೆಯ ನಂತರ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ₹ 2021 ಆಗಿತ್ತು. ಪ್ರಸ್ತುತ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯು ₹ 2029.50 ಇದೆ.

Published On - 9:15 am, Wed, 6 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್