AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್

Donald Trump's State of the Union address: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ಯಾರಿಫ್ ಕ್ರಮವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕವನ್ನು ಇಷ್ಟು ವರ್ಷ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರಿಗೆ ಖುಷಿಯಾಗಿದೆ, ನಮಗೂ ಖುಷಿಯಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಮಾತನಾಡುತ್ತಿದ್ದ ಅವರು ಟ್ಯಾರಿಫ್ ಕ್ರಮ ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಟೀಕಿಸಿದ್ದಾರೆ.

ನಮ್ಮನ್ನು ಕಿತ್ತು ತಿನ್ನುತ್ತಿದ್ದವರು ಇವತ್ತು ಟ್ಯಾರಿಫ್ ಕಟ್ತಿದಾರೆ, ಅವರೂ ಖುಷ್, ನಾವೂ ಖುಷ್: ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 25, 2026 | 11:04 AM

Share

ವಾಷಿಂಗ್ಟನ್, ಫೆಬ್ರುವರಿ 25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ಯಾರಿಫ್ ಕ್ರಮವನ್ನು ಅಮಾನ್ಯಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಅಲ್ಲಗಳೆಯುವುದನ್ನು ಮುಂದುವರಿಸಿದ್ದಾರೆ. ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅವರು, ಕೋರ್ಟ್ ತೀರ್ಪು ಬಹಳ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಅಮೆರಿಕವನ್ನು ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅಮೆರಿಕದ ಜೊತೆ ಮಾಡಿಕೊಂಡಿರುವ ಒಪ್ಪಂದಗಳಿಂದ ಸಂತುಷ್ಟಗೊಂಡಿವೆ ಎಂದು ಟ್ರಂಪ್ ಹಂಗಿಸಿದ್ದಾರೆ.

‘ನಮ್ಮನ್ನು ಹೀನಾಯವಾಗಿ ಕಿತ್ತು ತಿನ್ನುತ್ತಿದ್ದ ದೇಶಗಳು ಈಗ ಟ್ಯಾರಿಫ್ ಪಾವತಿಸುತ್ತಿವೆ. ಅವರು ಖುಷಿಯಾಗಿದ್ದಾರೆ. ನಾವೂ ಖುಷಿಯಾಗಿದ್ದೇವೆ. ಡೆಮಾಕ್ರಾಟ್​ನವರು ಇದಕ್ಕೆ ಒಪ್ಪದಿದ್ದರೂ ಅವರಿಗೆ ಗೊತ್ತಿದೆ. ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ. ಖುಷಿ ಸುದ್ದಿ ಏನೆಂದರೆ, ಅಮೆರಿಕದ ಜೊತೆ ಒಪ್ಪಂದ ಮಾಡಿಕೊಂಡಿರುವ ದೇಶಗಳೆಲ್ಲವೂ ಅದನ್ನು ಮುಂದುವರಿಸಲು ಬಯಸುತ್ತಿವೆ,’ ಎಂದು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

ಟ್ಯಾರಿಫ್​ಗಳಿಂದ ಇನ್ಕಮ್ ಟ್ಯಾಕ್ಸ್ ಹೊರೆ ಇಳಿಯುತ್ತೆ ಎಂದ ಟ್ರಂಪ್

ಟ್ಯಾರಿಫ್ ವಿಧಿಸುವ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ಇದರಿಂದ ಅಮೆರಿಕನ್ ಪ್ರಜೆಗಳಿಗೆ ಆದಾಯ ತೆರಿಗೆ ಹೊರೆ ಕಡಿಮೆ ಆಗುತ್ತೆ ಎಂದಿದ್ದಾರೆ.

‘ಕಾಲ ಕಳೆದಂತೆ ವಿದೇಶಗಳಿಂದ ಪಾವತಿಸಲಾಗುವ ಟ್ಯಾರಿಫ್​ಗಳು ಆಧುನಿಕ ಆದಾಯ ತೆರಿಗೆ ಸಿಸ್ಟಂ ಅನ್ನು ಭರಿಸಬಲ್ಲುವು. ನಾನು ಪ್ರೀತಿಸುವ ಜನರಿಗೆ ಹಣದ ಹೊರೆಯನ್ನು ಇಳಿಸಬಲ್ಲುವು’ ಎಂದು ತಿಳಿಸಿದ ಡೊನಾಲ್ಡ್ ಟ್ರಂಪ್, ವಿದೇಶಗಳು ಅಮೆರಿಕನ್ನರ ಆದಾಯ ತೆರಿಗೆ ಪಾವತಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ?

ಡೆಮಾಕ್ರಾಟ್​ಗಳ ವಿರುದ್ಧ ಟ್ರಂಪ್ ಟೀಕೆ

‘ಡೆಮಾಕ್ರಾಟ್​ಗಳು ಕೊಲೆಗಡುಕರನ್ನು ನಮ್ಮ ದೇಶದೊಳಗೆ ಬಿಟ್ಟುಕೊಂಡರು. ಅವರ ನೀತಿಗಳು ಬೆಲೆ ಏರಿಕೆಗೆ ಕಾರಣವಾದರೆ, ನಮ್ಮ ನೀತಿಗಳು ಬೆಲೆ ತಗ್ಗಿಸುತ್ತಿವೆ. ಮೊಟ್ಟೆ ಬೆಲೆ ಶೇ. 60 ಇಳಿಕೆ ಆಗಿದೆ. ಹೋಟೆಲ್, ಬಾಡಿಗೆ, ಆಟೊಮೊಬೈಲ್, ಬೀಫ್ ಬೆಲೆಗಳು ಸಾಕಷ್ಟು ಕಡಿಮೆ ಆಗಿವೆ. ವಿದ್ಯುತ್ ಬೆಲೆ ತಗ್ಗುತ್ತಿದೆ. ಮತ್ತೊಂದು ದೊಡ್ಡ ಟ್ಯಾಕ್ಸ್ ಕಡಿತದಂತಾಗಿದೆ’ ಎಂದು ಟ್ರಂಪ್ ತಿಳಿಸಿದ್ದಾರೆ.

‘ನನಗೆ ಮೊದಲು ಅಮೆರಿಕ. ನಾವು ಪ್ರೀತಿಸೋದು ಅಮೆರಿಕವನ್ನು. ಬೈಡನ್ ಹಾಗೂ ಅವರ ಭ್ರಷ್ಟ ಜೊತೆಗಾರರ ಅಡಿಯಲ್ಲಿ ಅಮೆರಿಕ ಮುರಿದುಬೀಳುವ ಹಂತಕ್ಕೆ ಹೋಗಿತ್ತು’ ಎಂದು ಟ್ರಂಪ್ ಸಿಡಿಗುಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ