Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunzo Layoffs: ಬೆಂಗಳೂರು ಮೂಲದ ಡುಂಜೋದಲ್ಲಿ ಶೇ 3ರಷ್ಟು ಉದ್ಯೋಗಿಗಳ ವಜಾ

ಎಷ್ಟು ಸಂಖ್ಯೆಯ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂಬ ಲೆಕ್ಕಾಚಾರವನ್ನು ಡುಂಜೋ ಬಹಿರಂಗಪಡಿಸಿಲ್ಲ. 2022ರಲ್ಲಿ ಡುಂಜೋ 464 ಕೋಟಿ ರೂ. ನಿವ್ವಳ ನಷ್ಟ ಅನುಭವಿಸಿತ್ತು.

Dunzo Layoffs: ಬೆಂಗಳೂರು ಮೂಲದ ಡುಂಜೋದಲ್ಲಿ ಶೇ 3ರಷ್ಟು ಉದ್ಯೋಗಿಗಳ ವಜಾ
ಡುಂಜೋ (ಚಿತ್ರ ಕೃಪೆ; ಡುಂಜೋ ವೆಬ್​ಸೈಟ್)
Follow us
TV9 Web
| Updated By: Ganapathi Sharma

Updated on: Jan 17, 2023 | 12:33 PM

ಬೆಂಗಳೂರು: ವಿತರಣಾ ಉದ್ಯಮ ಸಂಸ್ಥೆ, ಬೆಂಗಳೂರು ಮೂಲದ ಡುಂಜೋ (Dunzo) ಶೇ 3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ (Layoffs) ವರದಿಯಾಗಿದೆ. ಮೆಟಾ, ಟ್ವಿಟರ್, ಅಮೆಜಾನ್ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಅನೇಕ ಟೆಕ್​​ ಕಂಪನಿಗಳು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಇದೀಗ ಡುಂಜೋ ಸಹ ಇವುಗಳ ಸಾಲಿಗೆ ಸೇರಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಗೂಗಲ್ ಬೆಂಬಲಿತ ಉದ್ಯಮ ಸಂಸ್ಥೆಯಾಗಿರುವ ಡುಂಜೋ, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಸ್ತುಗಳನ್ನು ಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ವೆಚ್ಚ ಕಡಿತದ ಕ್ರಮವಾಗಿ ಉದ್ಯೋಗಿಗಳ ವಜಾ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತುತ ಕಠಿಣ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಸಾಧ್ಯವಾದಷ್ಟೂ ನೆರವಾಗಬೇಕು ಎಂಬುದು ಕಂಪನಿಯ ಉದ್ದೇಶವಾಗಿದೆ. ಜನರ ಮೇಲೆ ನೇರವಾಗಿ ಕೆಟ್ಟ ಪರಿಣಾಮ ಬೀರುವ ನಿರ್ಧಾರಗಳಿಗೆ ಯಾವತ್ತೂ ನಮ್ಮದು ಕೊನೆಯ ಆದ್ಯತೆಯಾಗಿದೆ ಎಂದು ಡುಂಜೋ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಹ ಸಂಸ್ಥಾಪಕ ಕಬೀರ್ ವಿಶ್ವಾಸ್ ತಿಳಿಸಿದ್ದಾರೆ ಎಂದು ‘ಸಿಎನ್​ಬಿಸಿ-ಟಿವಿ 18’ ವರದಿ ಮಾಡಿದೆ.

ಸಂಖ್ಯೆಗಳು ಎಷ್ಟೇ ಇರಲಿ, ಅವರೆಲ್ಲ ಡುಂಜೋ ಜತೆ ತಮ್ಮ ವೃತ್ತಿಜೀವನ ಕಟ್ಟಿಕೊಂಡಿದ್ದರು. ಪ್ರತಿಭಾವಂತ ಸಹೋದ್ಯೋಗಿಗಳು ನಮ್ಮನ್ನು ತೊರೆಯಬೇಕಾಗಿ ಬಂದಿರುವುದು ಬಹಳ ಬೇಸರ ತರಿಸಿದೆ ಎಂದು ಅವರು ಹೇಳಿದ್ದಾರೆ. ಎಷ್ಟು ಸಂಖ್ಯೆಯ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂಬ ಲೆಕ್ಕಾಚಾರವನ್ನು ಡುಂಜೋ ಬಹಿರಂಗಪಡಿಸಿಲ್ಲ. 2022ರಲ್ಲಿ ಡುಂಜೋ 464 ಕೋಟಿ ರೂ. ನಿವ್ವಳ ನಷ್ಟ ಅನುಭವಿಸಿತ್ತು.

ಇದನ್ನು ಓದಿ: ShareChat Announces Layoffs: ಮಹತ್ವದ ನಿರ್ಧಾರ ತೆಗೆದುಕೊಂಡು ಶೇರ್‌ಚಾಟ್: 20% ಉದ್ಯೋಗಿಗಳ ವಜಾ

ವೆಚ್ಚವನ್ನು ಕಡಿತಗೊಳಿಸುವುದಕ್ಕಾಗಿ ಶೇ 20ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಶೇರ್‌ಚಾಟ್ ಇತ್ತೀಚೆಗೆ ತಿಳಿಸಿತ್ತು. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಪ್ರೆವೇಟ್ ಲಿಮಿಟೆಡ್ ಮಾಲೀಕತ್ವದ ಶೇರ್‌ಚಾಟ್ ಮತ್ತು ಅದರ ಕಿರು ವೀಡಿಯೊ ಆಪ್ಲಿಕೇಷನ್ ಮೋಜ್ ಸುಮಾರು 500 ಜನರನ್ನು ಕೆಲಸದಿಂದ ವಜಾಗೊಳಿಸಿವೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿದ್ದವು.

ಈ ಮಧ್ಯೆ, ಕ್ಯಾಬ್ ಸೇವೆ ಒದಗಿಸುವ ಮತ್ತು ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿ ಓಲಾ ಕೂಡ ವಿವಿಧ ಘಟಕಗಳಿಂದ 200 ಮಂದಿ ಉದ್ಯೋಗಿಗಳನ್ನು ಕೆಲವು ದಿನಗಳ ಹಿಂದಷ್ಟೇ ವಜಾಗೊಳಿಸಿದೆ. ಉದ್ಯೋಗ ಕಡಿತವನ್ನು ತಂಡಗಳ ಪುನರ್​​ರಚನಾ ಪ್ರಕ್ರಿಯೆ ಎಂದು ಓಲಾ ಬಣ್ಣಿಸಿತ್ತು. ನಿರ್ವಹಣೆ ವೆಚ್ಚ ಕಡಿಮೆ ಮಾಡುವುದಕ್ಕಾಗಿ ಅಮೆರಿಕ ಹಲವೆಡೆ ಮೆಟಾ, ಮೈಕ್ರೋಸಾಫ್ಟ್ ಕಂಪನಿಗಳು ಕಚೇರಿಗಳನ್ನು ಮುಚ್ಚುತ್ತಿದ್ದು, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡುತ್ತಿರುವ ಬಗ್ಗೆಯೂ ಸೋಮವಾರ ವರದಿಯಾಗಿತ್ತು.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!