ಇ-ಕಾಮರ್ಸ್ ಕಂಪೆನಿ ಅಮೆಜಾನ್ ಇಂಡಿಯಾದಿಂದ ಸಣ್ಣ ಉದ್ಯಮಗಳಿಗೆ ಶುಭ ಸುದ್ದಿ

ಅಮೆಜಾನ್ ಇಂಡಿಯಾ ಇ ಕಾಮರ್ಸ್ ಕಂಪೆನಿಯು ತನ್ನ ಪ್ಲಾಟ್​ಫಾರ್ಮ್​ನಲ್ಲಿ ಇರುವ 8.5 ಲಕ್ಷಕ್ಕೂ ಹೆಚ್ಚು ಉದ್ಯಮಗಳಿಗೆ ನೆರವಾಗುವುದಕ್ಕೆ ಮುಂದಾಗಿದೆ. ಅದು ಹೇಗೆ ಎಂದು ತಿಳಿಯುವುದಕ್ಕೆ ಮುಂದೆ ಓದಿ.

ಇ-ಕಾಮರ್ಸ್ ಕಂಪೆನಿ ಅಮೆಜಾನ್ ಇಂಡಿಯಾದಿಂದ ಸಣ್ಣ ಉದ್ಯಮಗಳಿಗೆ ಶುಭ ಸುದ್ದಿ
ಸಾಂದರ್ಭಿಕ ಚಿತ್ರ
Follow us
Srinivas Mata
|

Updated on: May 03, 2021 | 11:24 AM

ನವದೆಹಲಿ: ಕೊರೊನಾ ಎರಡಡನೇ ಅಲೆಯ ಮಧ್ಯೆ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಮಾರಾಟಗಾರರು ಪಾವತಿಸುವ ವಿವಿಧ ಶುಲ್ಕಗಳ ಮನ್ನಾ ಸೇರಿದಂತೆ ಕೆಲವು ಕ್ರಮಗಳನ್ನು ಅಮೆಜಾನ್ ಇಂಡಿಯಾದಿಂದ ಮೇ 1ರಂದು ಘೋಷಣೆ ಮಾಡಲಾಗಿದೆ. ಮೇ 1ರಿಂದ 31ರ ತನಕ ವಿವಿಧ ವರ್ಗದ ಅಡಿಯಲ್ಲಿ ಬರುವ ವರ್ತಕರಿಗೆ “ಸೆಲ್ ಆನ್ ಅಮೆಜಾನ್” ಅಥವಾ “ರೆಫರಲ್ ಫೀ” ಮೇಲೆ ಶೇ 50ರಷ್ಟು ವಿನಾಯಿತಿ ಘೋಷಿಸಿದೆ. ಇನ್ನು ಈ ಅವಧಿಯಲ್ಲಿ ಯಾವ ವಿಳಾಸಗಳಿಗೆ ಉತ್ಪನ್ನಗಳನ್ನು ಡೆಲಿವರಿ ಮಾಡುವುದಕ್ಕೆ ಸಾಧ್ಯವಾಗದೆ, ಅವುಗಳನ್ನು ಗೋದಾಮಿನಲ್ಲಿ ಇಡಬೇಕಾದಲ್ಲಿ ಸಂಗ್ರಹ ಶುಲ್ಕ ಅಥವಾ ಉತ್ಪನ್ನಗಳನ್ನು ದೀರ್ಘಾವಧಿಗೆ ಇರಿಸಲು ವಿಧಿಸುವ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

“ಈಗಿನ ಪರಿಸ್ಥಿತಿಯಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ಮೇಲೆ ಪರಿಣಾಮ ಆಗುತ್ತದೆ ಎಂದು ನಮಗೆ ಅರ್ಥ ಆಗುತ್ತದೆ. ಕೊರೊನಾ ಬಿಕ್ಕಟ್ಟು ಸೃಷ್ಟಿಸಿರುವ ಆರ್ಥಿಕ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಮಾರಾಟಗಾರರಿಗೆ ನೆರವಾಗುವ ಉದ್ದೇಶ ಇಟ್ಟುಕೊಂಡು ನಾವು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದ್ದೇವೆ,” ಎಂದು ಅಮೆಜಾನ್ ಇಂಡಿಯಾದ ಉಪಾಧ್ಯಕ್ಷ ಮನೀಶ್ ತಿವಾರಿ ಬ್ಲಾಗ್ ಪೋಸ್ಟ್​ನಲ್ಲಿ ಹೇಳಿದ್ದಾರೆ.

8.5 ಲಕ್ಷಕ್ಕೂ ಹೆಚ್ಚು ಮಾರಾಟಗಾರರು ಅಮೆಜಾನ್​ ಇಂಡಿಯಾವು ತನ್ನ ಪ್ಲಾಟ್​ಫಾರ್ಮ್​ನಲ್ಲಿ 8.5 ಲಕ್ಷಕ್ಕೂ ಹೆಚ್ಚು ಮಾರಾಟಗಾರರನ್ನು ಹೊಂದಿದೆ. 30 ದಿನಗಳ ಅವಧಿಗೆ ಮಾರಾಟಗಾರರು ಫೈಲ್ ಮಾಡುವ ವಿವಿಧ ಬಗೆಯ ರೀಎಂಬರ್ಸ್​ಮೆಂಟ್​ಗಳಿಗೆ ತಾತ್ಕಾಲಿಕವಾಗಿ ಕ್ಲೇಮ್ ವಿಂಡೋಗಳ ವಿನಾಯಿತಿ ನೀಡಲಾಗಿದೆ. ಕೊರೊನಾ ಕಾರಣಕ್ಕೆ ಒಂದು ವೇಳೆ ಉತ್ಪನ್ನಗಳನ್ನು ತಲುಪಿಸಲು ಸಾಧ್ಯವಾಗದಿದ್ದಲ್ಲಿ ಮಾರಾಟಗಾರರ ಪರ್ಫಾರ್ಮೆನ್ಸ್ ಮಾನದಂಡದ ಮೇಲೆ ನೆಗೆಟಿವ್ ಪರಿಣಾಮ ಆಗಿ, ಅದರ ಮುಂದುವರಿದ ಭಾಗವಾಗಿ ಮಾರಾಟಗಾರರ ಖಾತೆಯ ಮೇಲೆ ನಿರ್ಬಂಧಗಳನ್ನು ಹಾಕುವ ಸಾಧ್ಯತೆ ಇತ್ತು. ಇದೀಗ ಹಾಗೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಅವಧಿಯಲ್ಲಿ ನಮ್ಮ ಮಾರಾಟಗಾರರಿಗೆ ನೆರವಾಗುವ ಉದ್ದೇಶಕ್ಕೆ ತಡವಾಗಿ ಉತ್ಪನ್ನಗಳನ್ನು ತಲುಪಿಸುವ ದರ, ಆರ್ಡರ್ ಕ್ಯಾನ್ಸಲೇಷನ್, ರಿಟರ್ನ್ಸ್​ಗೆ ಸಂಬಂಧಿಸಿದಂತೆ ಇರುವ ನಮ್ಮ ನೀತಿಯ ಬಗ್ಗೆ ಕೂಡ ಕೆಲಸ ಮಾಡುತ್ತಿದ್ದೇವೆ ಎಂದು ಬ್ಲಾಗ್​ನಲ್ಲಿ ಹೇಳಲಾಗಿದೆ. ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಹೆಲ್ತ್​ಕೇರ್ ಮೂಲಸೌಕರ್ಯದ ಮೇಲೆ ಭಾರೀ ಒತ್ತಡ ಬಿದ್ದಿದೆ. ಹಲವು ರಾಜ್ಯಗಳಲ್ಲಿ ಕರ್ಫ್ಯೂ, ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಅದರಿಂದ ಉದ್ಯಮಗಳ ಮೇಲೆ ಪರಿಣಾಮ ಆಗುತ್ತಿದೆ.

ಇ-ಕಾಮರ್ಸ್ ಕಂಪೆನಿಗಳು ಕಾರ್ಯ ನಿರ್ವಹಿಸುವುದಕ್ಕೆ ಅವಕಾಶ ಹಲವು ರಾಜ್ಯಗಳು ಇ-ಕಾಮರ್ಸ್ ಕಂಪೆನಿಗಳು ಕಾರ್ಯ ನಿರ್ವಹಿಸುವುದಕ್ಕೆ ಅವಕಾಶ ಮಾಡಿಕೊಟ್ಟಿವೆ. ಆದರೆ ಅದು ದಿನಸಿ, ಔಷಧದಂಥ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ವರದಿ 2020ರ ವರದಿ ನೀಡಿರುವ ಅಮೆಜಾನ್ ಇಂಡಿಯಾ, 10ಲಕ್ಷಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ಜತೆಗೆ ಕೆಲಸ ಮಾಡುತ್ತಿರುವುದಾಗಿ ಹೇಳಿದೆ. ಅದರಲ್ಲಿ ಮಾರಾಟಗಾರರು, ಡೆಲಿವರಿ ಮತ್ತು ಸಾಗಣೆ ಸಹಭಾಗಿಗಳು, ಮಳಿಗೆಗಳು, ಸಂಸ್ಥೆಗಳು, ಡೆವಲಪರ್​ಗಳು, ಕಂಟೆಂಟ್​ ಸೃಷ್ಟಿಕರ್ತರು ಮತ್ತು ಲೇಖಕರು ಒಳಗೊಂಡಿದ್ದಾರೆ.

ಇದನ್ನೂ ಓದಿ: Amazon Clearance Sale: ಅಮೆಜಾನ್​ನಲ್ಲಿ ಸ್ಮಾರ್ಟ್​ ಟಿವಿಗಳ ಮೇಲೆ ಶೇಕಡಾ 50ರ ತನಕ ರಿಯಾಯಿತಿ, ಏಸಿಗಳಿಗೆ ಶೇ 40 ಡಿಸ್ಕೌಂಟ್

(E commerce company Amazon India announced various measures to help small business amidst corona second wave in India)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್