ನಿಮ್ಮ ಬಳಿ ಆಧಾರ್ ಇದ್ರೆ ಸಾಕು ಇ-ಪ್ಯಾನ್ ಕಾರ್ಡ್ ಪಡೆಯೋದು ಸುಲಭ

ಇ-ಪ್ಯಾನ್ ಕಾರ್ಡ್ ಇದು ಪ್ಯಾನ್ ಕಾರ್ಡ್‌ನ ಡಿಜಿಟಲ್ ರೂಪವಾಗಿದೆ. ಈ ಕಾರ್ಡ್‌ ಭೌತಿಕ ಕಾರ್ಡ್‌ನಷ್ಟೇ ಕಾನೂನು ಮಾನ್ಯತೆ ಹೊಂದಿದೆ. ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಆಧಾರ್ ಕಾರ್ಡ್ ಬಳಸಿ ಕುಳಿತಲ್ಲಿಂದಲೇ ಹೊಸ ಇ-ಪ್ಯಾನ್ ಕಾರ್ಡ್ ಪಡೆಯಬಹುದು. ಆದರೆ ನೀವು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ ಇ-ಪ್ಯಾನ್‌ ಕಾರ್ಡ್‌ ಪಡೆಯಲಾಗದು. ಈ ಕುರಿತಾದ ಸ್ಟೋರಿ ಇಲ್ಲಿದೆ.

ನಿಮ್ಮ ಬಳಿ ಆಧಾರ್ ಇದ್ರೆ ಸಾಕು ಇ-ಪ್ಯಾನ್ ಕಾರ್ಡ್ ಪಡೆಯೋದು ಸುಲಭ
ಸಾಂದರ್ಭಿಕ ಚಿತ್ರ
Image Credit source: Getty Images

Updated on: Aug 11, 2026 | 6:58 PM

ಮುಖ್ಯಾಂಶಗಳು

  • ಪ್ಯಾನ್‌ ಕಾರ್ಡ್ ಭಾರತೀಯ ಆದಾಯ ತೆರಿಗೆ ಇಲಾಖೆ ನೀಡುವ ಪ್ರಮುಖ ದಾಖಲೆಯಲ್ಲಿ ಒಂದು
  • ಆದಾಯ ತೆರಿಗೆ ಇಲಾಖೆಯೂ ಇ-ಪ್ಯಾನ್ ಸೌಲಭ್ಯವನ್ನು ಒದಗಿಸುತ್ತಿದೆ
  • ನೀವು ಮನೆಯಿಂದಲೇ ತ್ವರಿತವಾಗಿ ಇ-ಪ್ಯಾನ್‌ಗೆ ಅರ್ಜಿ ಸಲ್ಲಿಸಬಹುದು.

ಪ್ಯಾನ್‌ ಕಾರ್ಡ್ (Pan Card) ಭಾರತೀಯ ಆದಾಯ ತೆರಿಗೆ ಇಲಾಖೆ ನೀಡುವ ಪ್ರಮುಖ ದಾಖಲೆಯಾಗಿದೆ. ತೆರಿಗೆ ಪಾವತಿ ಮತ್ತು ಬ್ಯಾಂಕ್ ಖಾತೆ ತೆರೆಯಲು ಸೇರಿದಂತೆ ಪ್ರಮುಖ ಹಣಕಾಸಿನ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಬೇಕೇ ಬೇಕು. ಆದಾಯ ತೆರಿಗೆ ಇಲಾಖೆಯೂ ಇ-ಪ್ಯಾನ್ ಸೌಲಭ್ಯವನ್ನು ಒದಗಿಸುತ್ತಿದೆ. ಆಧಾರ್ ಕಾರ್ಡ್ ಇದ್ದರೆ ನೀವು ಮನೆಯಿಂದಲೇ ತ್ವರಿತವಾಗಿ ಇ-ಪ್ಯಾನ್‌ಗೆ ಅರ್ಜಿ ಸಲ್ಲಿಸಬಹುದು.

ಇ-ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಷ್ಯ ತಿಳಿದಿರಲಿ

  • ನಿಮ್ಮ ಆಧಾರ್ ಸಂಖ್ಯೆ ಮಾನ್ಯವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಮೊದಲು ಪರಿಶೀಲಿಸಿಕೊಳ್ಳಿ.
  •  ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಆಗಿರಲೇ ಬೇಕು.
  • ನಿಮ್ಮ ಹೆಸರಿನಲ್ಲಿ ಇಲ್ಲಿಯವರೆಗೆ ಪ್ಯಾನ್ ಕಾರ್ಡ್ ಇರಬಾರದು.

ಇ-ಪ್ಯಾನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಆ ಬಳಿಕ ಇ-ಪ್ಯಾನ್ ಆಯ್ಕೆಯನ್ನು ಆರಿಸಿ.

ಹಂತ 3: ಹೊಸ ಇ-ಪ್ಯಾನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 4: ಇಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ.

ಹಂತ 5: ನಿಮ್ಮ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಆ ಒಟಿಪಿ ಇಲ್ಲಿ ನಮೂದಿಸಿ.

ಹಂತ 6: ನಿಮ್ಮ ಆಧಾರ್ ವಿವರಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ. ಎಲ್ಲವೂ ಸರಿಯಾಗಿದ್ದರೆ, ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಹಂತ 7: ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಸ್ವೀಕೃತಿ ಸಂಖ್ಯೆಯನ್ನು ನೀಡಲಾಗುತ್ತದೆ.

ಹಂತ 8: ನಿಮ್ಮ ಅರ್ಜಿಯನ್ನು ಟ್ರ್ಯಾಕ್ ಮಾಡಲು ಸ್ವೀಕೃತಿ ಸಂಖ್ಯೆಯನ್ನು ಉಳಿಸಿ.

ಹಂತ 9: ಇ-ಪ್ಯಾನ್ ಜನರೇಟ್ ಆದ ಬಳಿಕ ಅದನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: ಪಿಪಿಎಫ್​ನಲ್ಲಿ ತಿಂಗಳಿಗೆ 5,000 ರೂ ಹೂಡಿಕೆ ಮಾಡಿದರೆ ಮೆಚ್ಯೂರಿಟಿಗೆ ಎಷ್ಟು ಸಿಗುತ್ತದೆ? ಕೋಟಿ ರೂ ಕಾರ್ಪಸ್ ನಿರ್ಮಿಸಲು ಎಷ್ಟು ವರ್ಷ ಬೇಕು?

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಇ-ಪ್ಯಾನ್ ಎಂದರೇನು?

ಉತ್ತರ: ಇ-ಪ್ಯಾನ್ ಕಾರ್ಡ್ ಪ್ಯಾನ್ ಕಾರ್ಡ್‌ನ ಡಿಜಿಟಲ್ ರೂಪವಾಗಿದೆ. ಇದು ಭೌತಿಕ ಕಾರ್ಡ್‌ನಷ್ಟೇ ಕಾನೂನು ಮಾನ್ಯತೆ ಹೊಂದಿದೆ.

ಪ್ರಶ್ನೆ: ಪ್ಯಾನ್ ಕಾರ್ಡ್ ಹೊಂದಿದ್ರೂ ಇ-ಪ್ಯಾನ್ ಕಾರ್ಡ್ ಪಡೆಯಬಹುದೇ?

ಉತ್ತರ: ಪ್ಯಾನ್ ಕಾರ್ಡ್ ಹೊಂದಿದ್ದರೆ ಇ-ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಾರದು.

ಪ್ರಶ್ನೆ: ಇ-ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ಉತ್ತರ: ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಇ-ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us