ತಿಂಗಳಿಗೆ 2ರಿಂದ 8 ಲಕ್ಷ ರೂ ಗಳಿಸುವ ಸುವರ್ಣಾವಕಾಶ; ಫೇಸ್​ಬುಕ್, ಇನ್ಸ್​ಟಾ, ಯೂಟ್ಯೂಬ್​ಗಳಲ್ಲಿ ಸರ್ಕಾರಿ ಯೋಜನೆ ಪ್ರೊಮೋಟ್ ಮಾಡೋದು ಕೆಲಸ

UP government offer for social media influencers: ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗಳಿಗೆ ಉತ್ತರಪ್ರದೇಶ ಸರ್ಕಾರದಿಂದ ಒಳ್ಳೆಯ ಆಫರ್. ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಮೋಟ್ ಮಾಡುವುದು ಕೆಲಸ. ಇದಕ್ಕೆ ಯೋಗಿ ಸರ್ಕಾರ ತಿಂಗಳಿಗೆ 2ರಿಂದ 8 ಲಕ್ಷ ರೂ ಕೊಡಲು ಸಿದ್ಧವಿದೆ. ಯೋಜನೆ ರೂಪುರೇಖೆ ಸಿದ್ಧವಾಗಿದೆ. ಶೀಘ್ರದಲ್ಲೇ ಜಾರಿಯಾಗಬಹುದು.

ತಿಂಗಳಿಗೆ 2ರಿಂದ 8 ಲಕ್ಷ ರೂ ಗಳಿಸುವ ಸುವರ್ಣಾವಕಾಶ; ಫೇಸ್​ಬುಕ್, ಇನ್ಸ್​ಟಾ, ಯೂಟ್ಯೂಬ್​ಗಳಲ್ಲಿ ಸರ್ಕಾರಿ ಯೋಜನೆ ಪ್ರೊಮೋಟ್ ಮಾಡೋದು ಕೆಲಸ
ಸೋಷಿಯಲ್ ಮೀಡಿಯಾ
Follow us
|

Updated on: Aug 29, 2024 | 11:36 AM

ಲಕ್ನೋ, ಆಗಸ್ಟ್ 29: ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರೊಮೋಟ್ ಮಾಡಿ ತಿಂಗಳಿಗೆ 2ರಿಂದ 8 ಲಕ್ಷ ರೂ ಹಣ ಗಳಿಸುವ ಸುವರ್ಣಾವಕಾಶವನ್ನು ಉತ್ತರಪ್ರದೇಶ ಸರ್ಕಾರ ಕಲ್ಪಿಸಿರುವುದು ತಿಳಿದುಬಂದಿದೆ. ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗಳಿಗೆ ಇದು ಸುಗ್ಗಿ ಕಾಲ ಆಗಬಹುದು. ಸಾಮಾನ್ಯ ಜನರೂ ಕೂಡ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಹಣ ಸಂಪಾದಿಸುವ ಅವಕಾಶ ಇನ್ನಷ್ಟು ಹೆಚ್ಚಿದಂತಾಗಿದೆ. ಫೇಸ್​ಬುಕ್, ಎಕ್ಸ್, ಇನ್ಸ್​ಟಾಗ್ರಾಂ, ಯೂಟ್ಯೂಬ್ ಇತ್ಯಾದಿ ಸೋಷಿಯಲ್ ಮೀಡಿಯಾದಲ್ಲಿ ಜನರು ಯುಪಿ ಸರ್ಕಾರದ ಯೋಜನೆಗಳ ಬಗ್ಗೆ ಪೋಸ್ಟ್ ಹಾಕಿ ಹಣ ಗಳಿಸಬಹುದಾಗಿದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಹೊಸ ಡಿಜಿಟಲ್ ಮೀಡಿಯಾ ನೀತಿಯನ್ನು ರೂಪಿಸಿದ್ದು, ಅದರ ಕರಡು ಸಿದ್ಧವಾಗಿದೆ. ಅದರ ಪ್ರಕಾರ ಸೋಷಿಯಲ್ ಮೀಡಿಯಾ ಪ್ರಭಾವಿಯೊಬ್ಬರು (ಇನ್​ಫ್ಲುಯೆನ್ಸರ್) ಸರ್ಕಾರಿ ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದರೆ ತಿಂಗಳಿಗೆ 8 ಲಕ್ಷ ರೂವರೆಗೂ ಹಣ ಗಳಿಸುವ ಅವಕಾಶ ಮಾಡಿಕೊಡಲಾಗುತ್ತದೆ. ಹಾಗೆಯೇ, ಯಾರಾದರೂ ಕೂಡ ಸ್ಕೀಮ್ ಪ್ರಚಾರದ ನೆವದಲ್ಲಿ ಆಕ್ಷೇಪಾರ್ಹ ಸಂಗತಿಗಳನ್ನು ಆನ್​ಲೈನ್​ನಲ್ಲಿ ಪೋಸ್ಟ್ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದನ್ನೂ ಓದಿ: 18 ವರ್ಷದೊಳಗಿನ ವಯಸ್ಸಿನ ಹೆಣ್ಮಕ್ಕಳಿಗೆ ಅಸಾಂಪ್ರದಾಯಿಕ ಕೆಲಸಗಳಿಗೆ ತರಬೇತಿ: ಸರ್ಕಾರದಿಂದ ಸದ್ಯದಲ್ಲೇ ಹೊಸ ಸ್ಕೀಮ್

ಎಕ್ಸ್ (ಮಾಜಿ ಟ್ವಿಟ್ಟರ್), ಫೇಸ್​ಬುಕ್, ಇನ್ಸ್​ಟಾಗ್ರಾಮ್ ಮತ್ತು ಯೂಟ್ಯೂಬ್​ಗಳಲ್ಲಿನ ಇನ್​ಫ್ಲುಯನ್ಸರ್​ಗಳ ಖಾತೆಗಳನ್ನು ಸಬ್​ಸ್ಕ್ರೈಬರ್ಸ್ ಮತ್ತು ಫಾಲೋಯರ್ಸ್ ಆಧಾರದ ಮೇಲೆ ನಾಲ್ಕು ಕೆಟಗರಿಗಳಾಗಿ ವರ್ಗೀಕರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಹಣ ಪಾವತಿ ಮಾಡಲಾಗುತ್ತದೆ ಎಂಬುದು ತಿಳಿದುಬಂದಿದೆ.

ಯಾವುದೇ ಸರ್ಕಾರವಾದರೂ ಬಹಳಷ್ಟು ಜನೋಪಯೋಗಿ ಯೋಜನೆಗಳನ್ನು ನಡೆಸುತ್ತಿರುತ್ತದೆ. ಎಷ್ಟೋ ಸಂದರ್ಭದಲ್ಲಿ ಅದರ ಮಾಹಿತಿಯು ಉದ್ದೇಶಿತ ವ್ಯಕ್ತಿಗಳಿಗೆ ಗೊತ್ತೇ ಆಗುವುದಿಲ್ಲ. ಸರ್ಕಾರದಿಂದ ಇಂತಹದ್ದೊಂದು ಸ್ಕೀಮ್ ಇದೆ ಎನ್ನುವ ಮಾಹಿತಿ ಹೆಚ್ಚಿನ ಜನರಿಗೆ ತಿಳಿಯದೇ ಹೋದರೆ ಆ ಯೋಜನೆಯ ಉದ್ದೇಶವೇ ಈಡೇರುವುದಿಲ್ಲ. ಎಷ್ಟೋ ಸಂದರ್ಭದಲ್ಲಿ ಬಜೆಟ್​ನಲ್ಲಿ ನೀಡಲಾದ ಅನುದಾನ ಸರಿಯಾಗಿ ಬಳಕೆಯಾಗದೇ ಹಾಗೇ ಉಳಿದುಬಿಡುವುದುಂಟು. ಆ ಸ್ಕೀಮ್ ಉದ್ದೇಶಿತ ಫಲಾನುಭವಿಗಳಿಗೆ ಸರಿಯಾಗಿ ತಲುಪದೇ ಇರುವುದು ಅದಕ್ಕೆ ಕಾರಣ.

ಇದನ್ನೂ ಓದಿ: ಈ ಮೂರು ಸಮಯದಲ್ಲಿ ಹಣ ಖರ್ಚು ಮಾಡಬೇಡಿ, ಯಾಕೆ ಗೊತ್ತಾ!?

ಈ ಕಾರಣಕ್ಕೆ ಉತ್ತರಪ್ರದೇಶ ಸರ್ಕಾರ ತನ್ನ ಯೋಜನೆಗಳನ್ನು ಪ್ರಚುರಪಡಿಸಲು ಸೋಷಿಯಲ್ ಮೀಡಿಯಾ ಹಾಗೂ ಇನ್​ಫ್ಲುಯೆನ್ಸರ್​ಗಳನ್ನು ಬಳಸಿಕೊಳ್ಳಲು ನಿರ್ಧರಿಸಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!