AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Economy Collapse: ಆರ್ಥಿಕ ಪತನದತ್ತ ಆಫ್ಘನ್; ಕಾಬೂಲ್ ರಸ್ತೆ ಬದಿಗಳಲ್ಲಿ ಆಹಾರಕ್ಕಾಗಿ ಪೀಠೋಪಕರಣ ಬದಲಿ

ಸದ್ಯದ ಪರಿಸ್ಥಿತಿಯಲ್ಲಿ ಅಫ್ಘಾನಿಸ್ತಾನದ ಆರ್ಥಿಕ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಅಷ್ಟೇ ಅಲ್ಲ, ಆರ್ಥಿಕ ಮಹಾಕುಸಿತದತ್ತ ಸಾಗುತ್ತಿದೆ. ಆ ಬಗ್ಗೆ ವಿವರಗಳನ್ನು ಒಳಗೊಂಡ ಲೇಖನ ಇಲ್ಲಿದೆ.

Afghanistan Economy Collapse: ಆರ್ಥಿಕ ಪತನದತ್ತ ಆಫ್ಘನ್; ಕಾಬೂಲ್ ರಸ್ತೆ ಬದಿಗಳಲ್ಲಿ ಆಹಾರಕ್ಕಾಗಿ ಪೀಠೋಪಕರಣ ಬದಲಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 27, 2021 | 12:14 PM

Share

ಅಫ್ಘಾನಿಸ್ತಾನದ ಆರ್ಥಿಕತೆ ಬಹುತೇಕ ಪತನದತ್ತ ಸಾಗಿದೆ. ಹಳ್ಳಿಗಾಡುಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯೇ ಇಲ್ಲದಂತಾಗಿದೆ. ನೂರಾರು ಮೈಲಿ ದೂರಕ್ಕೆ ಒಂದರಂತೆ ಇರುವ ಬ್ಯಾಂಕ್​ನಲ್ಲಿ ಸಿಕ್ಕಾಪಟ್ಟೆ ಜನಜಂಗುಳಿ. ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿದ್ದು, ನಿರ್ದಿಷ್ಟ ಅವಧಿಗೆ ಚಿಕಿತ್ಸೆ ಪಡೆಯುತ್ತಿರುವವರ ಪಾಡಂತೂ ಶತ್ರುಗಳಿಗೂ ಬೇಡ ಎಂಬಂತಾಗಿದೆ. ಏಕೆಂದರೆ, ಹೀಗೆ ನೂರಾರು ಮೈಲಿ ಆಚೆಗೆ ಒಂದರಂತೆ ಇರುವ ಬ್ಯಾಂಕ್​ಗಳಲ್ಲಿ ಕೂಡ ಎಲ್ಲ ಗ್ರಾಹಕರಿಗೂ ನಗದು ಸಿಗುತ್ತಾ ಇಲ್ಲ. ತಮ್ಮ ಮಗಳ ಚಿಕಿತ್ಸೆಗಾಗಿ ಹಣ ಹೊಂದಿಸಲು ಹೆಣಗಾಡುತ್ತಿರುವ 56 ವರ್ಷದ ರಸೂಲ್​ ಅವರ ಮಾತುಗಳಲ್ಲೇ ಹೇಳುವುದಾದರೆ, “ನನ್ನದೇ ಹಣ ಖಾತೆಯಲ್ಲಿ ಇದೆ. ಆದರೆ ಹಣ ಸಿಗದೆ ನಾನೀಗ ಏನು ಮಾಡಲಿ,” ಎನ್ನುತ್ತಾರೆ. ಆಗಸ್ಟ್ 15ರಂದು ತಾಲಿಬಾನ್​ ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತನ್ನ ಕೈಗೆ ತೆಗೆದುಕೊಂಡಾಗಿಂದ ಅಲ್ಲಿನ ಆರ್ಥಿಕತೆ ಬಹುತೇಕ ಕುಸಿದುಹೋಗಿದೆ. ಜಗತ್ತಿನಲ್ಲೇ ಅತ್ಯಂತ ಭೀಕರ ಮಾನವೀಯ ಬಿಕ್ಕಟ್ಟು ತಲೆದೋರಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಇದ್ದ ಮಿಲಿಯನ್​ಗಟ್ಟಲೆ ಡಾಲರ್ ಅನುದಾನ ಮಾಯವಾಗಿದೆ. ಸರ್ಕಾರಕ್ಕೆ ಸೇರಿದ ಬಿಲಿಯನ್​ಗಟ್ಟಲೆ ಡಾಲರ್ ಆಸ್ತಿಗೆ ತಡೆ ಬಿದ್ದಿದೆ. ಇನ್ನು ಆರ್ಥಿಕ ನಿರ್ಬಂಧದ ಕಾರಣಕ್ಕೆ ಹಾಗತಿಕ ಮಟ್ಟದ ಬ್ಯಾಂಕಿಂಗ್​ ವ್ಯವಸ್ಥೆಯ ನೆರವು ಈಗಿನ ಸರ್ಕಾರಕ್ಕೆ ಸಿಗುತ್ತಿಲ್ಲ. ಬ್ಯಾಂಕ್​, ಉದ್ಯಮಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ದು, ಆಹಾರ ಮತ್ತು ತೈಲ ಬೆಲೆಗಳು ತಾರಾಮಾರಾ ಏರಿಕೆ ಆಗಿವೆ. ಈ ವರ್ಷದ ಅಂತ್ಯದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿ 32 ಲಕ್ಷ ಮಕ್ಕಳು ಗಂಭೀರ ಸ್ವರೂಪದ ಅಪೌಷ್ಟಿಕತೆಯಿಂದ ನರಳುವಂತಾಗಬಹುದು, ಆ ಪೈಕಿ 10 ಲಕ್ಷ ಮಕ್ಕಳು ತಾಪಮಾನ ಇಳಿಕೆಯಿಂದ ಸಾವಿಗೀಡಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಆಹಾರಕ್ಕೆ ಬದಲಾಗಿ ಪೀಠೋಪಕರಣಗಳ ವಿನಿಮಯ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಎಂಥ ಪರಿಸ್ಥಿತಿ ಅಂದರೆ, ಹತಾಶ ಕುಟುಂಬಗಳು ರಸ್ತೆ ಪಕ್ಕದಲ್ಲಿ ತಮ್ಮ ಮನೆಯ ಪೀಠೋಪಕರಣಗಳನ್ನು ಆಹಾರಕ್ಕೆ ಬದಲಿಯಾಗಿ ನೀಡುತ್ತಿದ್ದಾರೆ. ಇತರ ಪ್ರಮುಖ ನಗರಗಳಲ್ಲಿ ಸರ್ಕಾರದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಔಷಧಗಳನ್ನು ಖರೀದಿ ಮಾಡುವುದಕ್ಕೆ ಹಣ ಇಲ್ಲ. ಅಷ್ಟೇ ಅಲ್ಲ, ವೈದ್ಯರು, ನರ್ಸ್​ಗಳಿಗೆ ಹಣ ಪಾವತಿಸುವುದಕ್ಕೂ ಆಗುತ್ತಿಲ್ಲ. ವೈದ್ಯಕೀಯ ಸಿಬ್ಬಂದಿ ಪೈಕಿ ಕೆಲವರು ಈಗಾಗಲೇ ಕೆಲಸ ಬಿಟ್ಟಿದ್ದಾರೆ. ಆರ್ಥಿಕ ನಿರಾಶ್ರಿತರು ಇರಾನ್, ಪಾಕಿಸ್ತಾನದ ಗಡಿಯ ಕಡೆಗೆ ಸಾಗುತ್ತಕೇ ಇದ್ದಾರೆ. ಅಂತರರಾಷ್ಟ್ರೀಯ ಸಮುದಾಯಗಳಿಗೆ ಅಫ್ಘಾನಿಸ್ತಾನದ ಜನರ ಬಗ್ಗೆ ಅಪಾರ ಕಾಳಜಿ ಇರುವುದು ಹೌದು. ಆದರೆ ಹಣವನ್ನು ತಾಲಿಬಾನ್​ಗಳ ಕೈಗೆ ಇಡುವುದು ಹೇಗೆ ಎಂಬುದು ಆತಂಕಕ್ಕೆ ಕಾರಣವಾಗಿದೆ.

ಅಫ್ಘಾನಿಸ್ತಾನ ಮತ್ತು ನೆರೆಯ ದೇಶಗಳಲ್ಲಿ ಇರುವ ಆಫ್ಘನ್ ನಿರಾಶ್ರಿತರಿಗೆ 129 ಕೋಟಿ ಅಮೆರಿಕನ್ ಡಾಲರ್ ಒದಗಿಸುವುದಾಗಿ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟವು ಭರವಸೆ ನೀಡಿವೆ. ಈ ನೆರವಿನಿಂದ ತುಂಮ ದೊಡ್ಡ ಮಟ್ಟದ ಅನುಕೂಲ ಏನೂ ಆಗಲ್ಲ ಎನ್ನುತ್ತಾರೆ ಆರ್ಥಿಕತಜ್ಞರು ಮತ್ತು ಎನ್​ಜಿಒಗಳು. “ಒಂದು ವೇಳೆ ಇಲ್ಲಿನ ವ್ಯವಸ್ಥೆಯನ್ನು ಮುಂದಿನ ಕೆಲ ತಿಂಗಳಲ್ಲಿ ಕಳೆದುಕೊಂಡು ಬಿಟ್ಟರೆ, ದೇಶಕ್ಕೆ ಅಗತ್ಯ ಇರುವುದನ್ನು ಪೂರೈಕೆ ಮಾಡುವುದಕ್ಕೆ ಬೇಕಾದದ್ದನ್ನು ಪುನರ್​ನಿರ್ಮಿಸುವುದು ಕಷ್ಟ. ಹಿಂತಿರುಗುವುದಕ್ಕೆ ಸಾಧ್ಯವಿಲ್ಲದ ಮಟ್ಟಿಗೆ ವೇಗವಾಗಿ ಕುಸಿತದತ್ತ ನಾವು ಸಾಗುತ್ತಿದ್ದೇವೆ. ಯಾವುದೇ ಮಾನವೀಯ ಬಿಕ್ಕಟ್ಟು ಮಾನವೀಯ ಬೆಂಬಲಿದಿಂದ ಮಾತ್ರ ನಿರ್ವಹಿಸುವುದಕ್ಕೆ ಸಾಧ್ಯ,” ಎನ್ನುತ್ತಾರೆ ಯುಎನ್​ಡಿಪಿ ಪ್ರತಿನಿಧಿ ಅಬ್ದಲ್ಲಾ ಅಲ್​ ದರ್ದಾರಿ.

ಬಜೆಟ್​ನ ಶೇ 75ರಷ್ಟು ವಿದೇಶದ ಹಣ ಈ ಹಿಂದಿನ ಸರ್ಕಾರದ ಅಧಿಯಲ್ಲಿ ದೇಶದ ಜಿಡಿಪಿಯ ಶೇ 45ರಷ್ಟು ವಿದೇಶೀ ನೆರವಿನಿಂದ ಬರುತ್ತಿತ್ತು. ಅದು ಸರ್ಕಾರದ ಬಜೆಟ್​ನ ಶೇ 75ರಷ್ಟು ಆಗುತ್ತಿತ್ತು. ಅದರಲ್ಲೇ ಆರೋಗ್ಯ, ಶೈಕ್ಷಣಿಕ ಸೇವೆಯೂ ಒಳಗೊಂಡಿತ್ತು. ಆದರೆ ಯಾವಾಗ ತಾಲಿಬಾನ್ ಆಡಳಿತ ಬಂತೋ ಅಮೆರಿಕದಲ್ಲಿನ ಬೈಡನ್ ಆಡಳಿತವು ಅಫ್ಘಾನಿಸ್ತಾನದ ವಿದೇಶೀ ಮೀಸಲು ಮೊತ್ತವಾದ 950 ಕೋಟಿ ಡಾಲರ್ ಸ್ಥಗಿತಗೊಳಿಸಿತು. ಅಫ್ಘಾನಿಸ್ತಾನದ ಕೇಂದ್ರ ಬ್ಯಾಂಕ್ ಅವಲಂಬಿತ ಆಗಿದ್ದ ಯುಎಸ್​ ಡಾಲರ್​ ಒಳಗೊಂಡ ರವಾನೆಯನ್ನು ನಿಲ್ಲಿಸಿತು. ಐತಿಹಾಸಿಕವಾಗಿಯೇ ಯಾವುದೇ ದೇಶ ಇಷ್ಟು ವೇಗವಾಗಿ ಇಷ್ಟು ದೊಡ್ಡ ಪ್ರಮಾಣದ ಆರ್ಥಿಕ ಪತನ ಕಂಡಿರಲಿಲ್ಲ ಎನ್ನುತ್ತಾರೆ ಆರ್ಥಿಕ ತಜ್ಞರು. ಅಂತರರಾಷ್ಟ್ರೀ ಹಣಕಾಸು ನಿಧಿಯಿಂದ ಕಳೆದ ತಿಂಗಳು ಎಚ್ಚರಿಸಿದಂತೆ, ಈ ವರ್ಷ ಶೇ 30ರಷ್ಟು ಆರ್ಥಿಕತೆ ಕುಸಿಯಬಹುದು.

ವೈದ್ಯರೂ, ಶಿಕ್ಷಕರೂ ಸೇರಿ ಸರ್ಕಾರಿ ನೌಕರರಿಗೆ ವೇತನ ಆಗಿಲ್ಲ ವೈದ್ಯರನ್ನೂ ಒಳಗೊಂಡಂತೆ ಶಿಕ್ಷಕರು ಮತ್ತಿತರ ಸರ್ಕಾರಿ ನೌಕರರಿಗೆ ತಿಂಗಳುಗಳಿಂದ ವೇತನ ಬಂದಿಲ್ಲ. ಯುಎನ್​ಡಿಪಿ ಅಂದಾಜು ಮಾಡುವಂತೆ, ಮುಂದಿ ವರ್ಷದ ಮಧ್ಯ ಭಾಗದ ಹೊತ್ತಿಗೆ ಆಫ್ಘನ್ ಜನಸಂಖ್ಯೆಯ ಶೇ 97ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗಿರುತ್ತಾರೆ. ಇನ್ನು ಈಗಾಗಲೇ ಅಂದಿನದು ಅಂದಿಗೆ ಎಂದು ಬದುಕುತ್ತಿರುವವರ ಸ್ಥಿತಿ ಮತ್ತೂ ಭೀಕರವಾಗುತ್ತದೆ. ಅಂದಹಾಗೆ ತಾಲಿಬಾನ್​ನಿಂದ ಅಫ್ಘಾನಿಸ್ತಾನ್​ ತೆಕ್ಕೆಗೆ ತೆಗೆದುಕೊಳ್ಳುವ ಮುಂಚೆಯೇ ಆರ್ಥಿಕತೆ ತೆವಳುತ್ತಿತ್ತು. ನಿಧಾನ ಪ್ರಗತಿ, ಭ್ರಷ್ಟಾಚಾರ, ತೀವ್ರ ಬಡತನ ಹಾಗೂ ಗಂಭೀರ ಸ್ವರೂಪದ ಬರದಿಂದ ದೇಶ ನರಳುತ್ತಿತ್ತು.

ಅಫ್ಘಾನಿಸ್ತಾನವು ಮೂಲಭೂತ ಆಹಾರಗಳು, ಇಂಧನ ಮತ್ತು ಉತ್ಪಾದನೆ ಸರಕುಗಳಿಗಾಗಿ ಆಮದುಗಳ ಮೇಲೆ ದೀರ್ಘಕಾಲದಿಂದ ಅವಲಂಬಿತವಾಗಿದೆ. ಇದು ಅಲ್ಲಿನ ಜೀವಸೆಲೆಯಾಗಿದ್ದು, ಈ ಬೇಸಿಗೆಯಲ್ಲಿ ತಾಲಿಬಾನ್‌ನ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ನೆರೆಯ ದೇಶಗಳು ತಮ್ಮ ಗಡಿಗಳನ್ನು ಮುಚ್ಚಿದ ನಂತರ ವ್ಯಾಪಾರದ ಅಡೆತಡೆಗಳು ಔಷಧದಂತಹ ಮುಖ್ಯ ಸರಕುಗಳ ಕೊರತೆ ಉಂಟುಮಾಡಿದೆ. ಆದರೆ ಹಣಕಾಸಿನ ಸೇವೆಗಳ ಕುಸಿತವು ಅಮೆರಿಕನ್ ಡಾಲರ್‌ಗಳು ಮತ್ತು ಆಮದುಗಳಿಗಾಗಿ ಬ್ಯಾಂಕ್ ಸಾಲಗಳನ್ನು ಅವಲಂಬಿಸಿರುವ ವ್ಯಾಪಾರಿಗಳ ಕತ್ತು ಹಿಸುಕಿದೆ.

ಸಂಪೂರ್ಣ ಕರೆನ್ಸಿ ಕುಸಿತವನ್ನು ತಪ್ಪಿಸಲು ಬ್ಯಾಂಕ್ ಹಿಂಪಡೆಯುವಿಕೆಯನ್ನು ತಾಲಿಬಾನ್ ಮೊದಲು 200 ಡಾಲರ್​ಗೆ ಮತ್ತು ನಂತರ 400 ಡಾಲರ್​ ವಾರಕ್ಕೆ ಸೀಮಿತಗೊಳಿಸಿತು ಮತ್ತು ಚೀನಾ, ಪಾಕಿಸ್ತಾನ, ಕತಾರ್ ಮತ್ತು ಟರ್ಕಿಗೆ ತನ್ನ ಬಜೆಟ್ ಕೊರತೆಯನ್ನು ತುಂಬಲು ಮನವಿ ಮಾಡಿದೆ. ಅದು ಬಿಲಿಯನ್ ಡಾಲರ್‌ಗಳಷ್ಟು ದೊಡ್ಡದಾಗಿದೆ. ಇಲ್ಲಿಯವರೆಗೆ, ಪಾಶ್ಚಿಮಾತ್ಯ ರಾಷ್ಟ್ರಗಳ ದಾನಿಗಳು ಹಿಂದಿನ ಸರ್ಕಾರಕ್ಕೆ ಒದಗಿಸಿದ ಹಣಕಾಸಿನ ಬೆಂಬಲವನ್ನು ನೀಡಿಲ್ಲ.

ಇದನ್ನೂ ಓದಿ: ಮಾನವ ಕಳ್ಳಸಾಗಣೆದಾರರ ನೆರವಿನಿಂದ ಅಫ್ಘಾನಿಸ್ತಾನ ತೊರೆಯುತ್ತಿರುವ ಜನ; ಗಡಿಗಳಿಂದ ಪರಾರಿ

Published On - 12:13 pm, Sat, 27 November 21

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ