ಫೆಮಾ ನಿಯಮ ಉಲ್ಲಂಘನೆ ಆರೋಪ: ಬೈಜುಸ್​ಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ

ED Show Cause Notice to BYJU's: ಫೆಮಾ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ ಮಾಡಿದೆ ಎಂದು ಸಿಎನ್​ಬಿಸಿ ಟಿವಿ18 ವಾಹಿನಿಯಲ್ಲಿ ವರದಿಯಾಗಿದೆ. ಇದು 9,000 ಕೋಟಿ ರೂ ಮೊತ್ತದ ಅಕ್ರಮ ಎಂದು ಹೇಳಲಾಗುತ್ತಿದೆ. ಇಡಿ ನಡೆಸಿದ ತನಿಖೆ ವೇಳೆ, ಬೈಜೂಸ್ ಸಂಸ್ಥೆ ಫೆಮಾ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಹೀಗಾಗಿ, ಸಂಸ್ಥೆಗೆ ಶೋಕಾಸ್ ನೋಟೀಸ್ ಜಾರಿ ಮಾಡಿರುವುದು ತಿಳಿದುಬಂದಿದೆ. ಆದರೆ, ಇಡಿಯಿಂದ ನೋಟೀಸ್ ಬಂದಿರುವ ಸುದ್ದಿಯನ್ನು ಬೈಜುಸ್ ಸಂಸ್ಥೆ ತಳ್ಳಿಹಾಕಿದೆ.

ಫೆಮಾ ನಿಯಮ ಉಲ್ಲಂಘನೆ ಆರೋಪ: ಬೈಜುಸ್​ಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ ಜಾರಿ
ಜಾರಿ ನಿರ್ದೇಶನಾಲಯ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 22, 2023 | 1:59 PM

ನವದೆಹಲಿ, ನವೆಂಬರ್ 22: ವಿದೇಶ ವಿನಿಮಯ ನಿರ್ವಹಣೆ ಕಾಯ್ದೆ (FEMA- Foreign Exchange Management Act) ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟೀಸ್ (Show Cause notice) ಜಾರಿ ಮಾಡಿದೆ ಎಂದು ಸಿಎನ್​ಬಿಸಿ ಟಿವಿ18 ವಾಹಿನಿಯಲ್ಲಿ ವರದಿಯಾಗಿದೆ. ಇದು 9,000 ಕೋಟಿ ರೂ ಮೊತ್ತದ ಅಕ್ರಮ ಎಂದು ಹೇಳಲಾಗುತ್ತಿದೆ. ಇಡಿ ನಡೆಸಿದ ತನಿಖೆ ವೇಳೆ, ಬೈಜೂಸ್ ಸಂಸ್ಥೆ ಫೆಮಾ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಹೀಗಾಗಿ, ಸಂಸ್ಥೆಗೆ ಶೋಕಾಸ್ ನೋಟೀಸ್ ಜಾರಿ ಮಾಡಿರುವುದು ತಿಳಿದುಬಂದಿದೆ.

ಫೆಮಾ ನಿಯಮ ಉಲ್ಲಂಘನೆ ಆಗಿರುವ ಆರೋಪ ಮತ್ತು ಇಡಿಯಿಂದ ನೋಟೀಸ್ ಬಂದಿರುವ ಸುದ್ದಿಯನ್ನು ಬೈಜುಸ್ ಸಂಸ್ಥೆ ತಳ್ಳಿಹಾಕಿದೆ. ನಿನ್ನೆ ಮಂಗಳವಾರ (ನ. 21) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಮಾಧ್ಯಮಗಳಲ್ಲಿ ಬರುತ್ತಿರುವ ಈ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಹೇಳಿದೆ.

‘ಜಾರಿ ನಿರ್ದೇಶನಾಲಯ ಇಲಾಖೆಯಿಂದ ತನಗೆ ನೋಟೀಸ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಬೈಜುಸ್ ಖಡಾಖಂಡಿತವಾಗಿ ನಿರಾಕರಿಸುತ್ತದೆ. ಇಡಿಯಿಂದ ಯಾವುದೇ ಅಂತಹ ನೋಟೀಸ್ ಬಂದಿಲ್ಲ,’ ಎಂದು ಬೈಜುಸ್ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ರೇಮಂಡ್​​​​ ಮುಖ್ಯಸ್ಥ ಗೌತಮ್ ಸಿಂಘಾನಿಯಾ ವಿಚ್ಛೇದನ, ಪತ್ನಿ ನವಾಜ್ ವಿಧಿಸಿದ ಷರತ್ತೇನು?

ಮಾಧ್ಯಮಗಳಲ್ಲಿ ಬಂದ ವರದಿ ಪ್ರಕಾರ ಹಲವರಿಗೆ ಈ ನೋಟಿಸ್ ಜಾರಿಯಾಗಿದೆ. ಬೈಜುಸ್​ನ ಸಂಸ್ಥಾಪಕರು ಮತ್ತು ಥಿಂಕ್ ಅಂಡ್ ಲರ್ನ್ ಪ್ರೈ ಲಿ ಸಂಸ್ಥೆಯ ಸಂಸ್ಥಾಪಕರೂ ಆದ ಬೈಜು ರವೀಂದ್ರನ್ ಅವರಿಗೂ ಇಡಿ ನೋಟೀಸ್ ಕೊಟ್ಟಿರುವುದು ಗೊತ್ತಾಗಿದೆ.

ಏನಿದು ಬೈಜುಸ್ ವಿರುದ್ಧದ ಆರೋಪ?

ಬೈಜುಸ್​ನ ಮಾತೃ ಸಂಸ್ಥೆ ಥಿಂಕ್ ಅಂಡ್ ಲರ್ನ್ ಪ್ರೈ ಲಿ ಅಕ್ರಮವಾಗಿ ವಿದೇಶಗಳಿಗೆ ಹಣ ರವಾನೆ ಮಾಡಿ ಹೂಡಿಕೆ ಮಾಡಿದೆ. ವಿದೇಶಕ್ಕೆ ಹಣ ಕಳುಹಿಸುವುದಕ್ಕೆ ಬದಲಾಗಿ ಆಮದು ಮಾಡಿಕೊಂಡಿದ್ದಕ್ಕೆ ಬೈಜುಸ್ ಬಳಿ ಯಾವುದೇ ದಾಖಲೆ ಇಲ್ಲ. ಇದರಲ್ಲಿ ಫೆಮಾ ನಿಯಮಗಳ ಉಲ್ಲಂಘನೆಯಾಗಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೈತಪ್ಪಿದೆ ಎಂಬುದು ಇಡಿ ಆರೋಪ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Wed, 22 November 23

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ