AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಅಕ್ರಮ ಪ್ರಕರಣ: ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ED summons Anil Ambani on August 5th: ಸಾಲ ವಂಚನೆಯ ಆರೋಪಗಳನ್ನು ಎದುರಿಸುತ್ತಿರುವ ಅನಿಲ್ ಅಂಬಾನಿ ಅವರಿಗೆ ಇಡಿ ಸಮನ್ಸ್ ನೀಡಿದೆ. ಮನಿ ಲಾಂಡರಿಂಗ್ ಕಾಯ್ದೆ ಅಡಿ ದೆಹಲಿಯ ಇಡಿ ಕಚೇರಿಯಲ್ಲಿ ಆಗಸ್ಟ್ 5ರಂದು ಅನಿಲ್ ಅಂಬಾನಿಯ ವಿಚಾರಣೆ ನಡೆಯಲಿದೆ. ಅವರ ಹೇಳಿಕೆಗಳನ್ನು ಇಡಿ ಅಧಿಕಾರಿಗಳು ದಾಖಲಿಸಿದ್ದಾರೆ. ಸದ್ಯ ನಡೆಯುತ್ತಿರುವ ವಿಚಾರಣೆಯು ಯೆಸ್ ಬ್ಯಾಂಕ್​ನಿಂದ ಅಂಬಾನಿ ಕಂಪನಿಗೆ ನೀಡಲಾದ 3,000 ಕೋಟಿ ರೂ ಸಾಲಕ್ಕೆ ಸಂಬಂಧಿಸಿದ್ದು.

ಹಣಕಾಸು ಅಕ್ರಮ ಪ್ರಕರಣ: ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್
ಅನಿಲ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 01, 2025 | 12:08 PM

Share

ನವದೆಹಲಿ, ಆಗಸ್ಟ್ 1: ಸಾಲ ವಂಚನೆ ಪ್ರಕರಣ ಸಂಬಂಧ ವಿವಿಧ ಆರೋಪಗಳನ್ನು ಎದುರಿಸುತ್ತಿರುವ ಉದ್ಯಮಿ ಅನಿಲ್ ಅಂಬಾನಿ (Anil Ambani) ಅವರಿಗೆ ಜಾರಿ ನಿರ್ದೇಶನಾಲಯವು ಶುಕ್ರವಾರ ಸಮನ್ಸ್ ನೀಡಿದೆ. ದೆಹಲಿಯಲ್ಲಿರುವ ಇಡಿ ಮುಖ್ಯ ಕಚೇರಿಗೆ ಆಗಸ್ಟ್ 5, ಗುರುವಾರ ಹಾಜರಾಗಬೇಕೆಂದು ಅಂಬಾನಿಗೆ ತಿಳಿಸಲಾಗಿದೆ. ಇಲ್ಲಿಯೇ ಈ ಪ್ರಕರಣ ದಾಖಲಾಗಿದ್ದು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್​ಎ) ಅಡಿ ಇಡಿ ಅಧಿಕಾರಿಗಳು ಅನಿಲ್ ಅಂಬಾನಿಯ ಹೇಳಿಕೆಯನ್ನು ದಾಖಲಿಸಲಿದ್ದಾರೆ.

ಇದೇ ವೇಳೆ, ಈ ಪ್ರಕರಣ ಸಂಬಂಧ ನಕಲಿ ಬ್ಯಾಂಕ್ ಗ್ಯಾರಂಟಿಯ ಜಾಲ ಭೇದಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭುವನೇಶ್ವರ್ ಮತ್ತು ಕೋಲ್ಕತಾದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಾಲ ವಂಚನೆ ಆರೋಪ; ಅನಿಲ್ ಅಂಬಾನಿಯ ಹಲವು ಕಂಪನಿಗಳ ಮೇಲೆ ಇಡಿ ರೇಡ್

ಏನಿದು ಅನಿಲ್ ಅಂಬಾನಿ ವಿರುದ್ಧದ ಪ್ರಕರಣ?

2017ರಿಂದ 2019ರ ಅವಧಿಯಲ್ಲಿ ಅನಿಲ್ ಅಂಬಾನಿ ಅವರ ರಿಲಾಯನ್ಸ್ ಗ್ರೂಪ್​ಗೆ ಸೇರಿದ ವಿವಿಧ ಕಂಪನಿಗಳಿಗೆ ಯೆಸ್ ಬ್ಯಾಂಕ್ 3,000 ಕೋಟಿ ರೂ ಸಾಲ ಕೊಟ್ಟಿತ್ತು. ಈ ಸಾಲದ ಹಣವನ್ನು ನಿಗದಿತ ಉದ್ದೇಶಕ್ಕೆ ಬಳಸದೆ ಅಕ್ರಮವಾಗಿ ಬೇರೆಡೆ ವರ್ಗಾವಣೆ ಮಾಡಲಾಗಿದೆ ಎನ್ನುವುದು ಸದ್ಯಕ್ಕೆ ಕೇಳಿ ಬಂದಿರುವ ಆರೋಪ. ವಿವಿಧ ಶೆಲ್ ಕಂಪನಿಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ.

ಯೆಸ್ ಬ್ಯಾಂಕ್ ಕೂಡ ಸಾಲ ಅನುಮೋದನೆ ಮಾಡಲು ಸರಿಯಾದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ. ಹಣಕಾಸು ಪರಿಸ್ಥಿತಿ ಉತ್ತಮ ಇಲ್ಲದ ಕಂಪನಿಗಳಿಗೆ ಸಾಲ ಅನುಮೋದನೆ ಮಾಡಿದೆ. ಸಾಲ ನೀಡುವ ಮುನ್ನ ಕಂಪನಿಗಳನ್ನು ಸರಿಯಾಗಿ ವಿಚಾರಿಸುವ ಪ್ರಯತ್ನ ಆಗಿಲ್ಲದಿರುವುದು ಇತ್ಯಾದಿ ಹಲವು ನಿರ್ಲಕ್ಷ್ಯತೆ ಕಂಡು ಬಂದಿರುವುದನ್ನು ಇಡಿ ಪತ್ತೆ ಮಾಡಿದೆ.

ಇದನ್ನೂ ಓದಿ: ಫೀನಿಕ್ಸ್ ಮೋಡ್​​ನಲ್ಲಿದ್ದ ಅನಿಲ್ ಅಂಬಾನಿಗೆ ಕಂಟಕ? ಎಸ್​​ಬಿಐನಿಂದ ಸಾಲ ವಂಚನೆ ಆರೋಪ

ಯೆಸ್ ಬ್ಯಾಂಕ್ ಮಾತ್ರವಲ್ಲ ಇನ್ನೂ ಹಲವು ಬ್ಯಾಂಕುಗಳು ಅನಿಲ್ ಅಂಬಾನಿ ಅವರ ವಿವಿಧ ಕಂಪನಿಗಳಿಗೆ ಸಾಲ ಕೊಟ್ಟಿವೆ. ಕಳೆದ ಒಂದು ವರ್ಷದಿಂದ ತನಿಖಾ ಸಂಸ್ಥೆಗಳು ಅಂಬಾನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ರೇಡ್ ಮಾಡುತ್ತಲೇ ಇವೆ. ಕೆಲ ಮಹತ್ವದ ಸಾಕ್ಷ್ಯಾಧಾರಗಳು ಅಥವಾ ಸುಳಿವು ಸಿಕ್ಕಿರಬಹುದು. ವರದಿಗಳ ಪ್ರಕಾರ, ಅನಿಲ್ ಅಂಬಾನಿ ಅವರು 20,000-30,000 ರೂನಷ್ಟು ಹಣವನ್ನು ವಿದೇಶಗಳಿಗೆ ರವಾನಿಸಿರಬಹುದು ಎಂಬುದು ಇಡಿ ಗಮನಕ್ಕೆ ಬಂದಿದೆ ಎಂದು ಹೆಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ