AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳಿಗೆ ಭಾರೀ ನಷ್ಟ; ಕೇಂದ್ರವೇ ಭರಿಸಲಿ: 8 ರಾಜ್ಯಗಳಿಂದ ಒತ್ತಾಯಕ್ಕೆ ನಿರ್ಧಾರ

Krishna Byre Gowda leads meeting of Finance Ministers from 8 states: ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿರುವಂತೆ ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳಿಗೆ ತೆರಿಗೆ ಆದಾಯ ಕುಂಠಿತವಾಗುತ್ತದೆ ಎಂದು 8 ರಾಜ್ಯಗಳು ಆತಂಕಪಟ್ಟಿವೆ. ರಾಜ್ಯಗಳಿಗೆ ಆಗಬಹುದಾದ ಆದಾಯ ನಷ್ಟವನ್ನು ಕೇಂದ್ರ ಭರಿಸಬೇಕು ಎಂದು ಈ ರಾಜ್ಯಗಳು ಒತ್ತಾಯಿಸಿವೆ. ಕೃಷ್ಣಬೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಸೇರಿದಂತೆ ಎಂಟು ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳಿಗೆ ಭಾರೀ ನಷ್ಟ; ಕೇಂದ್ರವೇ ಭರಿಸಲಿ: 8 ರಾಜ್ಯಗಳಿಂದ ಒತ್ತಾಯಕ್ಕೆ ನಿರ್ಧಾರ
ಜಿಎಸ್​ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 29, 2025 | 3:23 PM

Share

ನವದೆಹಲಿ, ಆಗಸ್ಟ್ 29: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜಿಎಸ್​ಟಿ (GST) ಸ್ಲ್ಯಾಬ್​ಗಳ ಇಳಿಕೆ ಸೇರಿದಂತೆ ಸುಧಾರಣಾ ಕ್ರಮಗಳಿಂದ ರಾಜ್ಯ ಸರ್ಕಾರಗಳಿಗೆ ಆದಾಯ ಕುಸಿತ ಆಗಬಹುದು ಎಂದು ಎಂಟು ರಾಜ್ಯಗಳು ಆತಂಕ ವ್ಯಕ್ತಪಡಿಸಿವೆ. ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ನೇತೃತ್ವದಲ್ಲಿ ಇಂದು ಶುಕ್ರವಾರ ನಡೆದ ಸಭೆಯಲ್ಲಿ ಎಂಟು ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಈ ವೇಳೆ, ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳ ಆದಾಯ ಕುಂಠಿತಗೊಳ್ಳಬಹುದು ಎಂದು ಎಲ್ಲರೂ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಗಳಿಗೆ ಆಗಬಹುದಾದ ನಷ್ಟವನ್ನು ಕೇಂದ್ರವು ಭರಿಸಬೇಕೆಂದು ಇವು ಒತ್ತಾಯಿಸಿವೆ.

ದೇಶದಲ್ಲಿ ವಿಪಕ್ಷಗಳು ಆಡಳಿತದಲ್ಲಿರುವ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಹಿಮಾಚಲಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಹಣಕಾಸು ಸಚಿವರು ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚೆಗಳಾಗಿವೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಆದ ತೀರ್ಮಾನವನ್ನು ಸೆಪ್ಟೆಂಬರ್ 3 ಮತ್ತು 4ರಂದು ನಡೆಯುವ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪ ಮಾಡಲು ನಿರ್ಧರಿಸಲಾಯಿತು.

ಇದನ್ನೂ ಓದಿ: ಬೆಂಗಳೂರಿನ ಉದ್ಯಮಗಳ ಮೇಲೂ ಅಮೆರಿಕದ ಹೆಚ್ಚುವರಿ ತೆರಿಗೆ ಹೊರೆ: ಉದ್ಯೋಗ ಕಡಿತದ ಆತಂಕ

ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳಿಗೆ 2 ಲಕ್ಷ ಕೋಟಿ ರೂ ನಷ್ಟ?

ಕೇಂದ್ರ ಸರ್ಕಾರವು ಈಗಿರುವ ಶೇ. 5, ಶೇ. 12, ಶೇ. 18 ಮತ್ತು ಶೇ. 28ರ ಜಿಎಸ್​ಟಿ ಸ್ಲ್ಯಾಬ್​ಗಳ ಬದಲು ಶೇ. 5 ಮತ್ತು ಶೇ. 18 ಈ ಎರಡು ಸ್ಲ್ಯಾಬ್​ಗಳನ್ನಷ್ಟೇ ಇಟ್ಟುಕೊಳ್ಳಲು ನಿರ್ಧರಿಸಿದೆ. ಶೇ. 12 ಮತ್ತು ಶೇ. 28ರ ಸ್ಲ್ಯಾಬ್​ಗಳು ಇರುವುದಿಲ್ಲ. ಶೇ. 12ರ ಸ್ಲ್ಯಾಬ್​ನಲ್ಲಿದ್ದ ಸರಕುಗಳಿಗೆ ಜಿಎಸ್​ಟಿಯನ್ನು ಶೇ. 5ಕ್ಕೆ ಇಳಿಸಲಾಗುತ್ತದೆ. ಶೇ. 28ರ ದರವನ್ನು ಶೇ. 18ಕ್ಕೆ ಇಳಿಸಲು ಸರ್ಕಾರ ಪ್ರಸ್ತಾಪಿಸಿದೆ.

ಈ ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯ ಸರ್ಕಾರಗಳಿಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ರೂನಷ್ಟು ಆದಾಯನಷ್ಟ ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ರಾಜ್ಯಗಳಿಗೆ ಆಗಲಿರುವ ಈ ಸಂಭಾವ್ಯ ಆದಾಯ ನಷ್ಟವನ್ನು ಕೇಂದ್ರ ಸರ್ಕಾರ ಐದು ವರ್ಷಗಳವರೆಗೆ ಭರಿಸಬೇಕು ಎಂದು ಒತ್ತಾಯಿಸಲು ಇಂದಿನ ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಇನ್ಷೂರೆನ್ಸ್ ಕ್ಷೇತ್ರಕ್ಕೆ ಜಿಎಸ್​ಟಿ ವಿನಾಯಿತಿಯ ಧಮಾಕ; ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾಪ

ರಾಜ್ಯಗಳಿಗೆ ಆದಾಯ ನಷ್ಟವಾದರೆ ಜನರಿಗೆ ಕಷ್ಟ

ಜಿಎಸ್​ಟಿ ದರ ಇಳಿಕೆಯಿಂದ ರಾಜ್ಯಗಳ ಆದಾಯಕ್ಕೆ ಶೇ. 15ರಿಂದ 20ರಷ್ಟು ನಷ್ಟ ಆಗಬಹುದು. ರಾಜ್ಯಗಳಿಗೆ ಇಷ್ಟು ದೊಡ್ಡ ನಷ್ಟವಾದರೆ ಸರ್ಕಾರದ ಹಣಕಾಸು ಸ್ಥಿರತೆಗೆ ಧಕ್ಕೆಯಾಗುತ್ತದೆ. ಜಿಎಸ್​ಟಿ ಇಳಿಕೆಯು ರಾಜ್ಯಗಳ ಆದಾಯವನ್ನು ಕಡಿಮೆಗೊಳಿಸಬಾರದು. ಇದರಿಂದ ರಾಜ್ಯಗಳಲ್ಲಿ ಜನಕಲ್ಯಾಣ ಯೋಜನೆಗಳು ಹಾಗೂ ಮೂಲಭೂತ ಸೌಕರ್ಯ ಯೋಜನೆಗಳಿಗೆ ಬಂಡವಾಳ ಕೊರತೆ ಆಗುತ್ತದೆ ಎಂದು ಇಂದಿನ ಸಭೆಯಲ್ಲಿ ಎಂಟು ರಾಜ್ಯಗಳ ಹಣಕಾಸು ಸಚಿವರು ಆತಂಕ ತೋಡಿಕೊಂಡಿದ್ದಾರೆ.

ಸೆಪ್ಟೆಂಬರ್ 3 ಮತ್ತು 4ಕ್ಕೆ ಜಿಎಸ್​ಟಿ ಕೌನ್ಸಿಲ್ ಸಭೆ ನಡೆಯಲಿದ್ದು, ಈ ಎಂಟು ರಾಜ್ಯಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಆ ಸಭೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್