Elon Musk: ಟ್ವಿಟರ್ ನನಗೆ ತುಂಬಾ ಇಷ್ಟ, ಇದಕ್ಕೆ ಎಷ್ಟು?: 2017 ರಲ್ಲಿ ಎಲಾನ್ ಮಸ್ಕ್ ಮಾಡಿದ ಟ್ವೀಟ್ ವೈರಲ್

Twitter: ಏ.14ರಂದು ಎಲಾನ್‌ ಮಸ್ಕ್‌ ಅವರು ಟ್ವಿಟರ್‌ ಖರೀದಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ಪೂರ್ತಿ ಷೇರು ಖರೀದಿಸಿ, ಕಂಪನಿಯನ್ನೇ ತನ್ನದಾಗಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಆದರೆ, ಇದಕ್ಕೂ ಮುನ್ನ 2017 ರಲ್ಲಿ ಎಲಾನ್ ಮಾಡಿರುವ ಟ್ವೀಟ್ ಒಂದು ಈಗ ವೈರಲ್ ಆಗುತ್ತಿದೆ.

Elon Musk: ಟ್ವಿಟರ್ ನನಗೆ ತುಂಬಾ ಇಷ್ಟ, ಇದಕ್ಕೆ ಎಷ್ಟು?: 2017 ರಲ್ಲಿ ಎಲಾನ್ ಮಸ್ಕ್ ಮಾಡಿದ ಟ್ವೀಟ್ ವೈರಲ್
Elon Musk Twitter
Edited By:

Updated on: Apr 26, 2022 | 11:13 AM

ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಹಾಗೂ ಅಮೆರಿಕದ ಟೆಸ್ಲಾ (Tesla) ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್ (Elon Musk) ಅವರು ಜನಪ್ರಿಯ ಮೈಕ್ರೋಬ್ಲಾಗಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ (Twitter) ಸಂಸ್ಥೆಯನ್ನು ಖರೀದಿಸಿದ್ದಾರೆ. 44 ಬಿಲಿಯನ್ ಡಾಲರ್ (ಸುಮಾರು ₹3.36 ಲಕ್ಷ ಕೋಟಿ)ಗೆ ಮಸ್ಕ್ ಅವರು ಟ್ವಿಟರ್ ಕಂಪನಿಯ ಪೂರ್ತಿ ಷೇರು ತನ್ನದಾಗಿಸಿಕೊಂಡಿದ್ದಾರೆ. ಪ್ರತಿ ಷೇರಿಗೆ 54.20 ಡಾಲರ್​ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಿಕೊಂಡಿದ್ದಾರೆ. ಮಸ್ಕ್‌ ಖರೀದಿ ಪ್ರಸ್ತಾಪಕ್ಕೆ ಟ್ವಿಟ್ಟರ್‌ ಆಡಳಿತ ಮಂಡಳಿ ಒಪ್ಪಿದೆ. ವ್ಯಾಪಾರಕ್ಕೆ ಅಂತಿಮ ಮುದ್ರೆ ಕೂಡ ಬಿದ್ದಿದೆ. ಏ.14ರಂದು ಎಲಾನ್‌ ಮಸ್ಕ್‌ ಅವರು ಟ್ವಿಟರ್‌ ಖರೀದಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ಪೂರ್ತಿ ಷೇರು ಖರೀದಿಸಿ, ಕಂಪನಿಯನ್ನೇ ತನ್ನದಾಗಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಆದರೆ, ಇದಕ್ಕೂ ಮುನ್ನ 2017 ರಲ್ಲಿ ಎಲಾನ್ ಮಾಡಿರುವ ಟ್ವೀಟ್ ಒಂದು ಈಗ ವೈರಲ್ ಆಗುತ್ತಿದೆ.

2017 ರಲ್ಲಿ ಎಲಾನ್ ಮಸ್ಕ್ ‘ಐ ಲವ್ ಟ್ವಿಟರ್’ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಬಿಸಿನೆಸ್ ಇನ್ಸೈಡರ್ ಸಂಪಾದಕ ಡೇವ್ ಸ್ಮಿತ್ ಅವರು ‘ಹಾಗಾದರೆ ನೀವಿದನ್ನು ಖರೀದಿಸಿ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ಎಲಾನ್ ಮಸ್ಕ್ ‘ಇದಕ್ಕೆ ಎಷ್ಟು’ ಎಂದು ಕೇಳಿದ್ದರು. ಸದ್ಯ ಈ ಟ್ವೀಟ್​ನ ಸ್ಕ್ರೀನ್ ಶಾಟ್ ಅನ್ನು ಡೇವ್ ಸ್ಮಿತ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ‘ಈ ಮಾತುಗಳು ನನ್ನನ್ನು ಕಾಡುತ್ತಲೇ ಇದೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್​ಗಳು ವೈರಲ್ ಕೂಡ ಆಗುತ್ತಿದೆ.

 

ಎಲಾನ್ ಮಸ್ಕ್ ಅವರು ಟ್ವಿಟರ್‌ನಲ್ಲಿ ಶೇ 9.2ರಷ್ಟು ಷೇರು ಪಾಲು ಹೊಂದಿದ್ದರು. ನಂತರದಲ್ಲಿ ಪ್ರತಿ ಷೇರಿಗೆ 54.20 ಡಾಲರ್‌(₹4149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು. ಟ್ವಿಟರ್ ಖರೀದಿ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸುವುದರೊಂದಿಗೆ, ಕಂಪನಿ ಪೂರ್ತಿಯಾಗಿ ಎಲಾನ್ ಮಸ್ಕ್ ಪಾಲಾಗಿದೆ. 2013ರಿಂದ ಟ್ವಿಟರ್ ಸಾರ್ವಜನಿಕ ಷೇರು ಮೂಲಕ ಹೂಡಿಕೆ ಕಂಪನಿಯಾಗಿ ಬದಲಾಗಿತ್ತು. ಆದರೆ ಈಗ ಪೂರ್ತಿ ಷೇರು ಮಾರಾಟವಾಗಿ, ಎಲಾನ್ ಮಸ್ಕ್ ತೆಕ್ಕೆಗೆ ಬಂದಿರುವುದರಿಂದ, ಮುಂದೆ ಖಾಸಗಿ ಕಂಪನಿಯಾಗಿ ಮುಂದುವರಿಯಲಿದೆ.

ಈ ಬಗ್ಗೆ ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದು ಸಂತಸ ಹಂಚಿಕೊಂಡಿದ್ದಾರೆ. ಟ್ವಿಟರ್ ಖರೀದಿಯನ್ನು ‘Yessss’ ಎಂದು ಸಂಭ್ರಮಿಸಿದ್ದಾರೆ. ವಾಕ್ ಸ್ವಾತಂತ್ರ್ಯವು ಕಾರ್ಯರೂಪದಲ್ಲಿರುವ ಯಾವುದೇ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಟ್ವಿಟರ್ ಎನ್ನುವ ಡಿಜಿಟಲ್ ಜಗಲಿಯಲ್ಲಿ ಮನುಷ್ಯತ್ವದ ಭವಿಷ್ಯದ ಬಗ್ಗೆ ಚರ್ಚೆಯಾಗುತ್ತದೆ. ಟ್ವಿಟರ್​ನ ಆಲ್ಗೊರಿದಂಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಷ್ಟೇ ಅಲ್ಲದೆ, ಎಲ್ಲರನ್ನೂ ತಲುಪುವಂತೆ ಮಾಡಬೇಕಿದೆ. ಟ್ವಿಟರ್​ಗೆ ಅಗಾಧವಾಗಿ ಬೆಳೆಯುವ ಸಾಮರ್ಥ್ಯವಿದೆ. ಅದನ್ನು ಸಾಧ್ಯವಾಗಿಸಲು ಕಂಪನಿಯೊಂದಿಗೆ, ಬಳಕೆದಾರರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

Parag Agarwal: ಟ್ವಿಟ್ಟರ್ ಸಿಇಒ ಪರಾಗ್ ಅಗರ್​ವಾಲ್​ರನ್ನು ಕೆಲಸದಿಂದ ತೆಗೆದಲ್ಲಿ 300 ಕೋಟಿ ರೂ.ಗೂ ಹೆಚ್ಚು ಪರಿಹಾರ