AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್

Ashwini Vaishnaw at India AI Impact Summit: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎ ವೈಷ್ಣವ್, ಭಾರತದಲ್ಲಿ ಎಐ ಪ್ರಗತಿಯ ಹಾದಿಯನ್ನು ಬಿಚ್ಚಿಟ್ಟಿದ್ದಾರೆ. ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಕನಿಷ್ಠ 50 ಡೀಪ್ ಟೆಕ್ ಸಂಸ್ಥೆಗಳ ಉದಯವಾಗುತ್ತದೆ ಎಂದಿದ್ದಾರೆ.

ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 17, 2026 | 6:29 PM

Share

ನವದೆಹಲಿ, ಫೆಬ್ರುವರಿ 17: ‘ಕ್ರಿಯೇಟ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ 50ಕ್ಕೂ ಹೆಚ್ಚು ಡೀಪ್-ಟೆಕ್ ಕಂಪನಿಗಳು ತಲೆ ಎತ್ತುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಭಾಗವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಎಐ ಆವಿಷ್ಕಾರಗಳಿಗೆ ಪೂರಕವಾಗಿ ಭಾರತದ ಸೆಮಿಕಂಡಕ್ಟರ್ ಮಿಷನ್ನ ಹಾದಿ ಸಾಗುತ್ತದೆ ಎಂದಿದ್ದಾರೆ. ಹಾಗೆಯೇ, ಮಿಷನ್​ನ ಮುಂದಿನ ಹಂತದಲ್ಲಿ ಚಿಪ್ ಡಿಸೈನ್ ಮೇಲೆ ಪ್ರಧಾನ ಗಮನ ಇರುತ್ತದೆ ಎಂದು ವಿವರಿಸಿದ್ದಾರೆ.

ಇದೇ ವೇಳೆ, ಭಾರತದಲ್ಲಿ 38,000 ಜಿಪಿಯುಗಳಿದ್ದು, ಈಗ ಮತ್ತಷ್ಟು 20,000 ಜಿಪಿಯುಗಳು ಸೇರ್ಪಡೆಯಾಗಲಿವೆ. ಇದರಿಂದ ದೇಶದ ಎಐ ಕಂಪ್ಯೂಟ್ ಇನ್​ಫ್ರಾಸ್ಟ್ರಕ್ಚರ್ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

ಕೌಶಲ್ಯ ಮರುಪೂರಣಕ್ಕೆ ಕ್ರಮ

‘ಭಾರತದ ಐಟಿ ಸೆಕ್ಟರ್ ನಮ್ಮ ಪಾಲಿಗೆ ಮಹತ್ವದ ಆಸ್ತಿ ಎನಿಸಿದೆ. ಯಾವುದೇ ತಂತ್ರಜ್ಞಾನ ಪರಿವರ್ತನೆಯ ಸಂದರ್ಭದಲ್ಲಿ ಉದ್ಯಮ, ಶೈಕ್ಷಣಿಕ ಮತ್ತು ಸರ್ಕಾರದ ನಡುವೆ ಸಹಭಾಗಿತ್ವ ಸಾಧಿಸುವುದು ಅಗತ್ಯ. ಈಗಿರುವ ಕೆಲಸಗಾರರಿಗೆ ಕೌಶಲ್ಯ ಮರುಪೂರಣ, ಕೌಶಲ್ಯ ಅಭಿವೃದ್ಧಿ, ಹೊಸ ಪ್ರತಿಭೆಗಳ ಬೆಳವಣಿಗೆ, ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಭವಿಷ್ಯದ ತಲೆಮಾರುಗಳನ್ನು ಸಜ್ಜುಗೊಳಿಸುವುದು, ಈ ಮೂರು ಕ್ಷೇತ್ರಗಳಲ್ಲಿ ಉದ್ಯಮ ಮತ್ತು ಶಿಕ್ಷಣ ವಲಯದ ಜೊತೆ ಸಹಭಾಗಿತ್ವ ಮಾಡಿಕೊಳ್ಳುತ್ತಿದ್ದೇವೆ’ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಐದನೇ ಕೈಗಾರಿಕಾ ಕ್ರಾಂತಿ ಇದು…

ಎಐ ಅಳವಡಿಕೆಯ ಕಾರ್ಯವನ್ನು ಅಶ್ವಿನಿ ವೈಷ್ಣವ್ ಅವರು ಐದನೇ ಕೈಗಾರಿಕಾ ಕ್ರಾಂತಿ ಎಂದು ಬಣ್ಣಿಸಿದ್ದಾರೆ. ‘ಎಲ್ಲಾ ಸೆಕ್ಟರ್​ನಲ್ಲೂ ಎಐ ಅಳವಡಿಕೆ ಆಗುತ್ತಿದೆ. ಇದು ಐದನೇ ಕೈಗಾರಿಕಾ ಕ್ರಾಂತಿಯ ದ್ಯೋತಕವಾಗಿದೆ. ಆರ್ಥಿಕತೆ ಮತ್ತು ಸಮಾಜದ ಪ್ರತಿಯೊಂದು ಅಂಶದ ಮೇಲೂ ಇದರ ಪ್ರಭಾವ ಇರುತ್ತದೆ. ಎಐನಿಂದ ಪರಿವರ್ತನಾತ್ಮಕ ಪರಿಹಾರಗಳನ್ನು ಕಾಣುತ್ತಿದ್ದೇವೆ. ಹೆಲ್ತ್​ಕೇರ್ ಸೇವೆಗಳು ಎಐನಿಂದ ಅಗ್ಗದ ಬೆಲೆಗೆ ಸಿಗುವಂತಾಗುತ್ತದೆ. ಶಿಕ್ಷಣದಲ್ಲಿ ಎಐ ಅಳವಡಿಕೆಯಿಂದ ಪ್ರತೀ ವಿದ್ಯಾರ್ಥಿಯ ಅಗತ್ಯಕ್ಕೆ ತಕ್ಕಂತೆ ಕಲಿಕೆ ಕೊಡಬಹುದು’ ಎಂದು ಎಐನ ಬಹು ಉಪಯುಕ್ತತೆಯ ಸಾಧ್ಯತೆಗಳನ್ನು ಸಚಿವರು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್

ವಿದ್ಯುತ್ ತಯಾರಿಕೆಯ ಸಾಮರ್ಥ್ಯ

ಎಐ ಅಭಿವೃದ್ಧಿಗೆ ಬೇಕಾದ ಇನ್​ಫ್ರಾಸ್ಟ್ರಕ್ಚರ್ ಅಗತ್ಯಗಳಲ್ಲಿ ವಿದ್ಯುತ್ ಪೂರೈಕೆಯೂ ಒಂದು. ಭಾರತದಲ್ಲಿ ವಿದ್ಯುತ್ ತಯಾರಿಕೆಗೆ ರಿನಿವಬಲ್ ಎನರ್ಜಿ ಬಳಕೆ ದಿನೇ ದಿನೇ ಹೆಚ್ಚುತ್ತಿದೆ. ಈ ವಿಚಾರವನ್ನು ಸಚಿವ ಎ ವೈಷ್ಣವ್ ಪ್ರಸ್ತಅಪಿಸಿದ್ದಾರೆ. ಭಾರತದಲ್ಲಿ ಶೇ. 51ರಷ್ಟು ವಿದ್ಯುತ್ ಉತ್ಪಾದನೆಯು ನವೀಕರಣ ಶಕ್ತಿ ಮೂಲಗಳಿಂದ ಬರುತ್ತಿರುವುದನ್ನು ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ