Fact Check: ಎಸ್‌ಬಿಐ ರಿವಾರ್ಡ್ ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ ನಿಮ್ಮ ಖಾತೆಗೆ ಹಣ ಬರುತ್ತೆ..?

ವಂಚಕರು ಗ್ರಾಹಕರ ಮೊಬೈಲ್ ಫೋನ್‌ಗಳಿಗೆ ನಕಲಿ ಸಂದೇಶಗಳು ಮತ್ತು ಎಪಿಕೆ ಲಿಂಕ್‌ಗಳನ್ನು ಕಳುಹಿಸುತ್ತಿರುವುದು ಟಿವಿ9 ಕನ್ನಡ ವಾಸ್ತವ ಪರಿಶೀಲನೆಯಿಂದ ಸ್ಪಷ್ಟವಾಗಿದೆ. ಅಂತಹ ಯಾವುದೇ ಸಂದೇಶವನ್ನು ಕಳುಹಿಸಿರುವುದನ್ನು ಎಸ್‌ಬಿಐ ನಿರಾಕರಿಸಿದೆ.

Fact Check: ಎಸ್‌ಬಿಐ ರಿವಾರ್ಡ್ ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ ನಿಮ್ಮ ಖಾತೆಗೆ ಹಣ ಬರುತ್ತೆ..?
ವೈರಲ್​​ ಪೋಸ್ಟ್​
Follow us
ಮಾಲಾಶ್ರೀ ಅಂಚನ್​
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Nov 25, 2024 | 1:36 PM

ಸೈಬರ್ ವಂಚನೆಯು ದೇಶದಲ್ಲಿ ಯಾರಿಗಾದರೂ ಯಾವಾಗ ಬೇಕಾದರೂ ಸಂಭವಿಸಬಹುದು. ಪ್ರತಿದಿನ ಯಾರೋ ಒಬ್ಬರು ಬೇರೆ ಬೇರೆ ರೀತಿಯಲ್ಲಿ ವಂಚನೆಗೊಳಗಾಗುತ್ತಿದ್ದಾರೆ. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅನ್ನು ಉಲ್ಲೇಖಿಸಿ ಸಂದೇಶವೊಂದು ಸಾಮಾಜಿಕ ಮಾಧ್ಯಮ ವೇದಿಕೆ ವಾಟ್ಸ್​ಆ್ಯಪ್​ನಲ್ಲಿ ವೈರಲ್ ಆಗುತ್ತಿದೆ. ಎಸ್‌ಬಿಐ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ಎಸ್‌ಬಿಐ ರಿವಾರ್ಡ್ ಆ್ಯಪ್ ಅನ್ನು ಸ್ಥಾಪಿಸಿ ಎಂದು ಗ್ರಾಹಕರಿಗೆ ವಾಟ್ಸ್​ಆ್ಯಪ್​ನಲ್ಲಿ ಸಂದೇಶವನ್ನು ಕಳುಹಿಸಲಾಗುತ್ತಿದೆ.

ವೈರಲ್ ಸಂದೇಶದಲ್ಲಿ ಏನಿದೆ?:

‘‘ಆತ್ಮೀಯ ಮೌಲ್ಯಯುತ ಗ್ರಾಹಕರೇ, ನಿಮ್ಮ ಎಸ್ ಬಿ ಐ ನೆಟ್‌ಬ್ಯಾಂಕಿಂಗ್ ರಿವಾರ್ಡ್ ಪಾಯಿಂಟ್‌ಗಳು (ರೂ. 9980.00) ಇಂದು ಮುಕ್ತಾಯಗೊಳ್ಳುತ್ತವೆ! ಈಗ ಎಸ್ ಬಿ ಐ ರಿವಾರ್ಡ್ಸ್ ಆ್ಯಪ್ ಅನ್ನು ಇನ್‌ಸ್ಟಾಲ್ ಮಾಡಿ ಮತ್ತು ರಿಡೀಮ್ ಮಾಡಿಕೊಳ್ಳಿ. ನಿಮ್ಮ ಖಾತೆಗೆ ಹಣವನ್ನು ಕ್ರೆಡಿಟ್ ಮಾಡುವ ಮೂಲಕ ನೀವು ಬಹುಮಾನಗಳನ್ನು ಪಡೆಯಿರಿ. ಧನ್ಯವಾದಗಳು ತಂಡ ಎಸ್​ಬಿಐ’’ ಎಂದು ಬರೆಯಲಾಗಿದೆ.

Fact Check:

ವೈರಲ್ ಸಂದೇಶವನ್ನು ತನಿಖೆ ಮಾಡಲು ಟಿವಿ9 ಕನ್ನಡ ಮೊದಲು ಎಸ್ ಬಿ ಐಯ ಎಕ್ಸ್ ಹ್ಯಾಂಡಲ್‌ಗೆ ಭೇಟಿ ನೀಡಿತು. ಎಸ್‌ಬಿಐನ ಎಕ್ಸ್ ಹ್ಯಾಂಡಲ್‌ನಲ್ಲಿ ವೈರಲ್ ಸಂದೇಶಕ್ಕೆ ಸಂಬಂಧಿಸಿದ ಟ್ವೀಟ್ ಅನ್ನು ನಾವು ಕಂಡುಕೊಂಡಿದ್ದೇವೆ. ಅದರಲ್ಲಿ ಈ ರೀತಿ ಬರೆಯಲಾಗಿದೆ – ‘‘ಎಸ್‌ಬಿಐ ಗ್ರಾಹಕರ ಗಮನಕ್ಕೆ: ವಂಚಕರ ಬಗ್ಗೆ ಎಚ್ಚರದಿಂದಿರಿ. ಎಸ್‌ಬಿಐ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ವಂಚಕರು ಎಸ್ ಎಮ್ ಎಸ್ ಅಥವಾ ವಾಟ್ಸ್​ಆ್ಯಪ್​ನಲ್ಲಿ ಸಂದೇಶಗಳು ಮತ್ತು APK ಗಳನ್ನು ಕಳುಹಿಸುತ್ತಿದ್ದಾರೆ ಎಂದು ನಮ್ಮ ಗಮನಕ್ಕೆ ಬಂದಿದೆ. ಎಸ್‌ಬಿಐ ಎಂದಿಗೂ ಅಂತಹ ಸಂದೇಶಗಳು ಮತ್ತು APK ಗಳನ್ನು ಎಸ್ ಎಮ್ ಎಸ್ ಅಥವಾ ವಾಟ್ಸ್​ಆ್ಯಪ್ ಮೂಲಕ ಹಂಚಿಕೊಳ್ಳುವುದಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಮತ್ತು ಅಪರಿಚಿತ ಫೈಲ್‌ಗಳನ್ನು ಡೌನ್‌ಲೋಡ್ ಮಾಡಬೇಡಿ. ಸುರಕ್ಷಿತವಾಗಿರಿ’’ ಎಂದು ಹೇಳಿಕೊಂಡಿದೆ.

ಹೀಗಾಗಿ ವಂಚಕರು ಗ್ರಾಹಕರ ಮೊಬೈಲ್ ಫೋನ್‌ಗಳಿಗೆ ನಕಲಿ ಸಂದೇಶಗಳು ಮತ್ತು ಎಪಿಕೆ ಲಿಂಕ್‌ಗಳನ್ನು ಕಳುಹಿಸುತ್ತಿರುವುದು ಟಿವಿ9 ಕನ್ನಡ ವಾಸ್ತವ ಪರಿಶೀಲನೆಯಿಂದ ಸ್ಪಷ್ಟವಾಗಿದೆ. ಅಂತಹ ಯಾವುದೇ ಸಂದೇಶವನ್ನು ಕಳುಹಿಸಿರುವುದನ್ನು ಎಸ್‌ಬಿಐ ನಿರಾಕರಿಸಿದೆ. ಆದ್ದರಿಂದ, ನಿಮಗೆ ಆ ರೀತಿಯ ಯಾವುದೇ ಲಿಂಕ್ ಬಂದರೆ ಅಅನ್ನು ಕ್ಲಿಕ್ ಮಾಡಬೇಡಿ ಮತ್ತು ವಂಚಕರ ಬಗ್ಗೆ ಎಚ್ಚರದಿಂದಿರಿ.

ಇಂತಹ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡುವ ಮೂಲಕ, ನಿಮ್ಮ ಫೋನ್ ಮಾಲ್‌ವೇರ್ ಅಥವಾ ವೈರಸ್‌ಗೆ ಗುರಿಯಾಗಬಹುದು. ಇದರಿಂದಾಗಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಬ್ಯಾಂಕ್ ಖಾತೆ ವಿವರಗಳು, ಪಾಸ್‌ವರ್ಡ್‌ಗಳು ಇತ್ಯಾದಿಗಳನ್ನು ಕದಿಯಬಹುದು.

ಇಂತಹ ತಪ್ಪು ಮಾಡಬೇಡಿ:

ಅಪರಿಚಿತ ಲಿಂಕ್‌ಗಳು ಅಥವಾ ಫೈಲ್‌ಗಳನ್ನು ಡೌನ್‌ಲೋಡ್ ಮಾಡಬೇಡಿ: ನೀವು ಯಾವುದೇ ಅನುಮಾನಾಸ್ಪದ ಸಂದೇಶ ಅಥವಾ ಲಿಂಕ್ ಅನ್ನು ಸ್ವೀಕರಿಸಿದರೆ, ಅದರ ಮೇಲೆ ಕ್ಲಿಕ್ ಮಾಡಬೇಡಿ ಅಥವಾ ಯಾವುದೇ APK ಫೈಲ್ ಅನ್ನು ಡೌನ್‌ಲೋಡ್ ಮಾಡಬೇಡಿ.

ನಕಲಿ ಸಂದೇಶಗಳನ್ನು ವರದಿ ಮಾಡಿ: ಅಂತಹ ಯಾವುದೇ ಸಂದೇಶಗಳು ನಿಮಗೆ ಬಂದರೆ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡಿ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಿ.

ಸೈಬರ್ ಭದ್ರತೆಗೆ ಗಮನ ಕೊಡಿ: ವಿಶ್ವಾಸಾರ್ಹ ಮೂಲಗಳಿಂದ ಮಾತ್ರ ನಿಮ್ಮ ಫೋನ್ ಮತ್ತು ಇತರ ಸಾಧನಗಳಿಗೆ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Mon, 25 November 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ