Petrol Diesel Price on February 04: ಕಚ್ಚಾತೈಲ ಬೆಲೆ ಕುಸಿತ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಸರ್ಕಾರಿ ತೈಲ ಕಂಪನಿಗಳು ಫೆಬ್ರವರಿ 04ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ ಎಷ್ಟಿದೆ ಎಂಬುದನ್ನು ತಿಳಿಯೋಣ. ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ವಹಿವಾಟು ಶುಕ್ರವಾರ ಇಳಿಕೆಯೊಂದಿಗೆ ಕೊನೆಗೊಂಡಿತ್ತು. ಬ್ರೆಂಟ್ ಕಚ್ಚಾ ತೈಲವು ಎರಡು ಮತ್ತು ಕಾಲು ಪ್ರತಿಶತದಷ್ಟು ಕುಸಿದಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 77.30 ಡಾಲರ್ಗೆ ಕೊನೆಗೊಂಡಿತ್ತು. ಆದರೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದು, ಒಡಿಶಾ, ಕರ್ನಾಟಕ ಮತ್ತು ಗೋವಾದಲ್ಲಿ ಬೆಲೆ ಇಳಿಕೆಯಾಗಿದೆ.
ದೇಶದ ನಾಲ್ಕು ಮಹಾನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.
ಮತ್ತಷ್ಟು ಓದಿ: Petrol Diesel Price on February 02: ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಈ ನಗರಗಳಲ್ಲಿಯೂ ಹೊಸ ಬೆಲೆಗಳು ಬಿಡುಗಡೆ – ನೋಯ್ಡಾದಲ್ಲಿ ಪೆಟ್ರೋಲ್ ರೂ 96.65 ಮತ್ತು ಡೀಸೆಲ್ ಲೀಟರ್‌ಗೆ ರೂ 89.82 ಆಗಿದೆ. -ಬೆಂಗಳೂರು ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. – ಗಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.58 ರೂ ಮತ್ತು ಡೀಸೆಲ್ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ ಮತ್ತು ಡೀಸೆಲ್ ರೂ 89.66 ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದುಪ್ಪಟ್ಟು ಆಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ