AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಮಾರುಕಟ್ಟೆ ನಿಯಂತ್ರಕಗಳು ತಮ್ಮ ಕೆಲಸ ಮಾಡಲಿವೆ; ಅದಾನಿ ಪ್ರಕರಣದ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ಅದಾನಿ ಸಮೂಹದ ವಿರುದ್ಧ ಕೇಳಿ ಬಂದಿರುವ ಅಕ್ರಮದ ಆರೋಪ, ಉನ್ನತ ಮಟ್ಟದ ತನಿಖೆಗೆ ಪ್ರತಿಪಕ್ಷಗಳಿಂದ ಆಗ್ರಹ ವ್ಯಕ್ತವಾಗಿರುವ ಬೆನ್ನಲ್ಲೇ ಹಣಕಾಸು ಸಚಿವರು ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾರೆ.

Adani Row: ಮಾರುಕಟ್ಟೆ ನಿಯಂತ್ರಕಗಳು ತಮ್ಮ ಕೆಲಸ ಮಾಡಲಿವೆ; ಅದಾನಿ ಪ್ರಕರಣದ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ
ನಿರ್ಮಲಾ ಸೀತಾರಾಮನ್
ಗಣಪತಿ ಶರ್ಮಾ
|

Updated on:Feb 06, 2023 | 2:11 PM

Share

ಮುಂಬೈ: ಮಾರುಕಟ್ಟೆ ನಿಯಂತ್ರಕಗಳು ತಮ್ಮ ಕೆಲಸ ಮಾಡಲಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಶನಿವಾರ ಹೇಳಿದ್ದಾರೆ. ಅದಾನಿ ಸಮೂಹದ (Adani Group) ವಿರುದ್ಧ ಕೇಳಿ ಬಂದಿರುವ ಅಕ್ರಮದ ಆರೋಪ, ಉನ್ನತ ಮಟ್ಟದ ತನಿಖೆಗೆ ಪ್ರತಿಪಕ್ಷಗಳಿಂದ ಆಗ್ರಹ ವ್ಯಕ್ತವಾಗಿರುವ ಬೆನ್ನಲ್ಲೇ ಹಣಕಾಸು ಸಚಿವರು ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದಾರೆ. ನಿಯಂತ್ರಕರು ಅವರ ಕೆಲಸ ಮಾಡಲಿದ್ದಾರೆ. ರಿಸರ್ವ್ ಬ್ಯಾಂಕ್ ನಿನ್ನೆಯಷ್ಟೇ ಸ್ಪಷ್ಟನೆ ನೀಡಿದೆ. ಅದಕ್ಕೂ ಮೊದಲು ಹೂಡಿಕೆ ಬಗ್ಗೆ ಎಲ್​ಐಸಿ ವಿವರ ನೀಡಿದೆ. ಹೀಗಾಗಿ ನಿಯಂತ್ರಕರು ಅವರ ಕೆಲಸ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆ ನಿಯಂತ್ರಕಗಳು ಸರ್ಕಾರದ ಸ್ವಾಯತ್ತ ಸಂಸ್ಥೆಗಳಾಗಿವೆ. ಇಂಥ ಸಂದರ್ಭಗಳಲ್ಲಿ ಮಾರುಕಟ್ಟೆಗೆ ಸಂಬಂಧಿಸಿ ಏನು ಕ್ರಮ ಕೈಗೊಳ್ಳಬೇಕು ಎಂಬುದು ಆ ಸಂಸ್ಥೆಗಳಿಗೆ ಬಿಟ್ಟ ವಿಚಾರ. ಸೆಬಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ನಿರ್ಧರಿಸುವ ಅಧಿಕಾರವಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ಎಫ್​ಪಿಒ ಬಗ್ಗೆ ನಿರ್ಮಲಾ ಹೇಳಿದ್ದೇನು?

ಎಫ್​​ಪಿಒಗಳು (Follow-On Public Offer) ಬರುತ್ತವೆ ಹೋಗುತ್ತವೆ ಎಂದ ನಿರ್ಮಲಾ ಸೀತಾರಾಮನ್ ಕಳೆದ ಕೆಲವು ದಿನಗಳಲ್ಲಿ 8 ಶತಕೋಟಿ ಡಾಲರ್ ವಿದೇಶಿ ವಿನಿಯಮ ಮೀಸಲು ಸಂಗ್ರಹವಾಗಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಎಫ್​​ಪಿಒಗಳು ಬರುತ್ತವೆ ಹೋಗುತ್ತವೆ. ಷೇರು ಮಾರುಕಟ್ಟೆಗಳಲ್ಲಿ ಈ ಏರಿಳಿತಗಳು ಸಹಜ. ಆದರೆ, ಕಳೆದ ಕೆಲವೇ ದಿನಗಳಲ್ಲಿ 8 ಶತಕೋಟಿ ಡಾಲರ್ ವಿದೇಶಿ ವಿನಿಯಮ ಮೀಸಲು ಹರಿದುಬಂದಿರುವುದು ಭಾರತದ ಬಗ್ಗೆ ಜಗತ್ತು ಹೊಂದಿರುವ ದೃಷ್ಟಿಕೋನ ಮತ್ತು ನಮ್ಮ ದೇಶದ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಎಷ್ಟು ಎಫ್​​ಪಿಒಗಳನ್ನು ದೇಶದಲ್ಲಿ ಹಿಂಪಡೆಯಲಾಗಿಲ್ಲ? ಇಂಥ ಪ್ರಕರಣಗಳಿಂದ ದೇಶ ಎಷ್ಟು ಬಾರಿ ಸಂಕಷ್ಟ ಅನುಭವಿಸಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Adani Loss: ಒಂದು ವಾರದಲ್ಲಿ ಗೌತಮ್ ಅದಾನಿ ಕಳೆದುಕೊಂಡ ಆಸ್ತಿ ಎಷ್ಟು ಲಕ್ಷಕೋಟಿ ಗೊತ್ತೇ?

ಅದಾನಿ ಸಮೂಹದ ಕಂಪನಿಯಾದ ಅದಾನಿ ಎಂಟರ್​​ಪ್ರೈಸಸ್ ಎಫ್​ಪಿಒ ಮೂಲಕ 20,000 ಕೋಟಿ ರೂ. ಸಂಗ್ರಹದ ಗುರಿಯನ್ನು ಹೊಂದಿತ್ತು. ಜನವರಿ 27ರಿಂದ 31ರ ವರೆಗೆ ಎಫ್​ಪಿಒ ಮಾರಾಟ ನಡೆದಿತ್ತು. ಆದರೆ, ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಸಮೂಹದ ವಿರುದ್ಧ ಮಾಡಿದ ಷೇರು ಮೌಲ್ಯ ತಿರುಚಿದ ಮತ್ತು ಅಕ್ರಮದ ಆರೋಪದಿಂದಾಗಿ ಗೌತಮ್ ಅದಾನಿ ಮಾಲಿಕತ್ವದ ಕಂಪನಿಗಳು ಒಂದು ವಾರದಲ್ಲಿ ಸುಮಾರು ನೂರು ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿ) ಮೌಲ್ಯದ ಸಂಪತ್ತನ್ನು ಕಳೆದುಕೊಂಡಿವೆ. ಹೀಗಾಗಿ ಎಫ್​​ಪಿಒ ರದ್ದುಪಡಿಸಿದ್ದ ಕಂಪನಿ ಹೂಡಿಕೆದಾರರಿಗೆ ಹಣವನ್ನು ಮರಳಿಸುವುದಾಗಿ ತಿಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 4 February 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ