AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

Finance Minister Nirmala Sitharaman speaks after RBI central committee meeting: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಜನವರಿ ತಿಂಗಳಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದವು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆ ಪರಿ ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣ ಬಿಚ್ಚಿಟ್ಟಿದ್ದಾರೆ. ಆರ್​ಬಿಐನ ಸೆಂಟ್ರಲ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ನಿರ್ಮಲಾ ಅವರು, ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.

ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 23, 2026 | 3:01 PM

Share

ನವದೆಹಲಿ, ಫೆಬ್ರುವರಿ 23: ಕಳೆದ ಕೆಲ ತಿಂಗಳಲ್ಲಿ, ಅದರಲ್ಲೂ ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ರಾಕೆಟ್​ನಂತೆ ಆಗಸಕ್ಕೆ ಚಿಮ್ಮಿದ್ದು ಜನಸಾಮಾನ್ಯರಿಗೆ ಆತಂಕ ಮೂಡಿಸಿತ್ತು. ಜಾಗತಿಕವಾಗಿ ಚಿನ್ನಕ್ಕೆ ಬಹಳ ಬೇಡಿಕೆ ಬಂದಿದ್ದರಿಂದ ಈ ಅತಿಯಾದ ಬೆಲೆ ಏರಿಕೆ ಆಗಿತ್ತು. ಚಿನ್ನ ಮತ್ತು ಬೆಳ್ಳಿಗೆ ಈ ಪರಿ ಬೇಡಿಕೆ ಬರಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರಣ ಬಿಚ್ಚಿಟ್ಟಿದ್ದಾರೆ. ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳು, ಚಿನ್ನದ ಆಮದು, ಹಣದುಬ್ಬರ ಇತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಚಿನ್ನ ಬೆಳ್ಳಿ ಬೆಲೆ ಹೆಚ್ಚಲು ಇದು ಕಾರಣ…

ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ.

ಇದನ್ನೂ ಓದಿ: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್​ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ನಿರ್ಮಲಾ ಸೀತಾರಾಮನ್ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್​ಬಿಐ ನಿಗಾ ವಹಿಸಿದೆ ಎನ್ನುತ್ತಾರೆ ಅವರು.

ಅಮೆರಿಕದ ಟ್ಯಾರಿಫ್ ದರ ಬದಲಾವಣೆಯ ಪರಿಣಾಮ ಏನು?

ಸುಪ್ರೀಂಕೋರ್ಟ್ ತೀರ್ಪು ಪರಿಣಾಮವಾಗಿ ಅಮೆರಿಕ ಸರ್ಕಾರವು ಟ್ಯಾರಿಫ್ ಅನ್ನು ಶೇ. 10ಕ್ಕೆ ಇಳಿಸಿ, ನಂತರ ಶೇ. 15ಕ್ಕೆ ಹೆಚ್ಚಿಸಿದ ಕ್ರಮವು ಭಾರತದ ಮೇಲೆ ಏನು ಪರಿಣಾಮ ಬೀರುತ್ತದೆ? ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಇತ್ತೀಚಿನ ಟ್ಯಾರಿಫ್ ಬದಲಾವಣೆಯಿಂದ ಭಾರತದ ಮೇಲೆ ಬೀರಬಹುದಾದ ಪರಿಣಾಮಗಳನ್ನು ಈಗಲೇ ಅವಲೋಕಿಸಲು ಆಗುವುದಿಲ್ಲ. ವಾಣಿಜ್ಯ ಸಚಿವಾಲಯವು ಇದರ ಬಗ್ಗೆ ನಿಗಾ ಇರಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

‘ಭಾರತದ ಆರ್ಥಿಕತೆಯ ಮೇಲೆ ಏನು ಪರಿಣಾಮ ಆಗುತ್ತೆ ಎಂದು ಇಷ್ಟು ಬೇಗ ಪ್ರತಿಕ್ರಿಯಿಸಲು ಆಗುವುದಿಲ್ಲ. ವಾಣಿಜ್ಯ ಸಚಿವಾಲಯವು ಪರಿಸ್ಥಿತಿಯನ್ನು ಪರಾಮರ್ಶಿಸುತ್ತಿದೆ. ಮುಂದಿನ ಸಂಧಾನಗಳಿಗೆ ಅಮೆರಿಕಕ್ಕೆ ತೆರಳಿದಾಗ ನಿಯೋಗವು ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!