AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಶ್ಚಾತ್ಯ ದೇಶಗಳ ಆರ್ಥಿಕ ಹಿಂಜರಿತ ಭಾರತಕ್ಕೆ ಹೂಡಿಕೆದಾರರನ್ನು ಸೆಳೆಯಲು ಅವಕಾಶ; ನಿರ್ಮಲಾ ಸೀತಾರಾಮನ್

ನಿಯಮಗಳನ್ನು ಸಡಿಲಿಸುವ ಮೂಲಕ ವಿದೇಶಿ ಹೂಡಿಕೆಗೆ ಸರ್ಕಾರ ಹೆಚ್ಚಿನ ಅವಕಾಶ ಕಲ್ಪಿಸಿದೆ. ಹೀಗಾಗಿ ಉದ್ದಿಮೆಗಳು ಪಾಶ್ಚಾತ್ಯ ದೇಶಗಳ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ ಸನ್ನದ್ಧವಾಗಿರಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪಾಶ್ಚಾತ್ಯ ದೇಶಗಳ ಆರ್ಥಿಕ ಹಿಂಜರಿತ ಭಾರತಕ್ಕೆ ಹೂಡಿಕೆದಾರರನ್ನು ಸೆಳೆಯಲು ಅವಕಾಶ; ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)Image Credit source: PTI
TV9 Web
| Updated By: Ganapathi Sharma|

Updated on:Dec 17, 2022 | 10:49 AM

Share

ನವದೆಹಲಿ: ಪಾಶ್ಚಾತ್ಯ ದೇಶಗಳ ಸಂಭಾವ್ಯ ಆರ್ಥಿಕ ಹಿಂಜರಿತವು ಭಾರತಕ್ಕೆ ಹೂಡಿಕೆದಾರರನ್ನು ಸೆಳೆಯಲು ಅವಕಾಶವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಭಾರತವು ಉತ್ಪಾದನೆ ಮತ್ತು ಸೇವಾ ಕ್ಷೇತ್ರದ ಹೊಸ ಅವಕಾಶಗಳತ್ತ ಗಮನಹರಿಸಬೇಕಿದೆ. ಪಾಶ್ಚಿಮಾತ್ಯ ದೇಶಗಳ ಆರ್ಥಿಕ ಹಿಂಜರಿತವನ್ನು ಅವಕಾಶವನ್ನಾಗಿ ಮಾಡಿಕೊಂಡು ದೇಶದಲ್ಲಿ ಹೂಡಿಕೆ ಮಾಡುವಂತೆ ಕಂಪನಿಗಳನ್ನು ಸೆಳೆಯಬೇಕು ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಫೆಡರೇಷನ್ ಆಫ್​ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ (FICCI) 95ನೇ ವಾರ್ಷಿಕ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ. ದೇಶದ ಐಟಿ ಆಧಾರಿತ ಸೇವಾ ವಲಯ ಈಗಾಗಲೇ ದೊಡ್ಡ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.

ದೇಶದ ಅಮೃತ ಕಾಲದ ಸಂದರ್ಭದಲ್ಲಿ ಕೊಡುಗೆಯನ್ನು ಹೆಚ್ಚಿಸುವಂತೆ ಉದ್ದಿಮೆಗಳಿಗೆ ಅವರು ಕರೆ ನೀಡಿದ್ದಾರೆ. ಭಾರತದ ಅಮೃತ ಕಾಲವು ನಿಮ್ಮನ್ನು (ಉದ್ದಿಮೆಗಳನ್ನು ಉದ್ದೇಶಿಸಿ) ಕಾಯುತ್ತಿದೆ. ಇದನ್ನು ಚೆನ್ನಾಗಿ ಬಳಸಿಕೊಳ್ಳಿ ಮತ್ತು ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯ ಕೊಡುಗೆ ನೀಡಿ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಉದ್ಯಮ ಮತ್ತು ತಂತ್ರಜ್ಞಾನ ಸಮನ್ವಯ ಸಾಧಿಸಬೇಕು ಎಂದೂ ಅವರು ಹೇಳಿದ್ದಾರೆ. ಶುದ್ಧ ಇಂಧನದತ್ತ ಪರಿವರ್ತನೆ ಹೊಂದಲು ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

ಇದನ್ನೂ ಓದಿ: Petrol Price: ಪೆಟ್ರೋಲ್ ದರ ಭಾರತದಲ್ಲೇ ಅತಿ ಕಡಿಮೆ; ಹರದೀಪ್ ಸಿಂಗ್ ಪುರಿ

ಸ್ಟಾರ್ಟಪ್​​ಗಳು ನಡೆಸುವ ಅನ್ವೇಷಣೆಗಳ ಬಗ್ಗೆ, ಅವುಗಳು ತೋರುವ ಉತ್ಸಾಹ ಮತ್ತು ಸಾಮರ್ಥ್ಯದ ಬಗ್ಗೆ ಉದ್ದಿಮೆಗಳು ಗಮನಹರಿಸಬೇಕಿದೆ. ಸ್ಟಾರ್ಟಪ್​ಗಳೂ ಕೂಡ ತಾಂತ್ರಿಕ ಆವಿಷ್ಕಾರಕ್ಕೆ ಸಂಬಂಧಿಸಿ ಮೇಲ್ಪಂಕ್ತಿ ಹಾಕಿಕೊಡಬೇಕಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ವಿದೇಶಿ ಹೂಡಿಕೆಗೆ ಪ್ರೋತ್ಸಾಹ

ನಿಯಮಗಳನ್ನು ಸಡಿಲಿಸುವ ಮೂಲಕ ವಿದೇಶಿ ಹೂಡಿಕೆಗೆ ಸರ್ಕಾರ ಹೆಚ್ಚಿನ ಅವಕಾಶ ಕಲ್ಪಿಸಿದೆ. ಹೀಗಾಗಿ ಉದ್ದಿಮೆಗಳು ಪಾಶ್ಚಾತ್ಯ ದೇಶಗಳ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ ಸನ್ನದ್ಧವಾಗಿರಬೇಕು. ಹೂಡಿಕೆ ಸೆಳೆಯಲು ಸೂಕ್ತ ಕಾರ್ಯತಂತ್ರ ರೂಪಿಸಬೇಕು ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಉತ್ಪಾದಕರನ್ನು ಭಾರತದತ್ತ ಸೆಳೆಯಲು ಕ್ರಮ ಕೈಗೊಳ್ಳಬೇಕು. ಅವರ ಪ್ರಧಾನ ಕಚೇರಿ ಬೇರೆ ದೇಶಗಳಲ್ಲಿದ್ದರೂ ಇಲ್ಲಿನ ಮಾರುಕಟ್ಟೆಯನ್ನು ಗುರಿಯಾಗಿಟ್ಟುಕೊಂಡು ಇಲ್ಲಿ ಉತ್ಪಾದನೆಗೆ ಮುಂದಾಗುವಂತೆ ಮಾಡಬೇಕು ಎಂದು ಉದ್ದಿಮೆಗಳನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Fri, 16 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!