AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India’s Employment: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ದೇಶದಲ್ಲಿ ಹೆಚ್ಚುತ್ತಿದೆ ನೇಮಕಾತಿ; ವರದಿ

ಉದ್ಯೋಗಾವಕಾಶಗಳ ವಿಚಾರದಲ್ಲಿ ಅಕ್ಟೋಬರ್​ನಲ್ಲಿ ಚೇತರಿಕೆ ಕಾಣಿಸಿದೆ. ಇದರೊಂದಿಗೆ ಸತತ ಎಂಟನೇ ತಿಂಗಳು ಬೆಳವಣಿಗೆ ದಾಖಲಾದಂತಾಗಿದೆ ಎಂದು ಹಣಕಾಸು ಸಚಿವಾಲಯದ ವರದಿ ತಿಳಿಸಿದೆ.

India’s Employment: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ದೇಶದಲ್ಲಿ ಹೆಚ್ಚುತ್ತಿದೆ ನೇಮಕಾತಿ; ವರದಿ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Nov 25, 2022 | 11:22 AM

Share

ನವದೆಹಲಿ: ದೇಶದಲ್ಲಿ ಉದ್ಯೋಗದ (Employment) ಪ್ರಮಾಣ ಹೆಚ್ಚುತ್ತಿದ್ದು ವೇಗ ಪಡೆದುಕೊಳ್ಳುತ್ತಿದೆ ಎಂದು ಹಣಕಾಸು (Finance Ministry) ಸಚಿವಾಲಯದ ‘ಅಕ್ಟೋಬರ್ ತಿಂಗಳ ಮಾಸಿಕ ಆರ್ಥಿಕ ಪರಾಮರ್ಶೆ’ ವರದಿಯಲ್ಲಿ ಹೇಳಲಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ನೇಮಕಾತಿಯಲ್ಲಿ ಹೆಚ್ಚಳ ಕಾಣಬಹುದು ಎಂದು ನಿರೀಕ್ಸಿಷಲಾಗಿದೆ. ಕೋವಿಡ್ ಸಾಂಕ್ರಾಮಿಕದ ನಂತರ ತೊಂದರೆಗೆ ಒಳಗಾಗಿದ್ದ ಅನೇಕ ಕ್ಷೇತ್ರಗಳು ಚೇತರಿಸಿಕೊಳ್ಳುತ್ತಿವೆ. ಆರ್ಥಿಕ ಚಟುವಟಿಕೆಗಳು (Economic Activities) ವೇಗ ಪಡೆದುಕೊಳ್ಳುತ್ತಿವೆ. ಇಪಿಎಫ್​ಒ (EPFO) ನೋಂದಣಿಯಲ್ಲಿ ಕಳೆದ ಒಂದು ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ. ನರೇಗಾ ಅಡಿಯಲ್ಲಿ ಕೆಲಸಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳು ಸುಧಾರಿಸಿವೆ. ಇದು ಗ್ರಾಮೀಣ ಆರ್ಥಿಕತೆಯ ಚೇತರಿಕೆಯ ಮುನ್ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.

ನೇಮಕಾತಿಯಲ್ಲಿ ಸತತ ಎಂಟನೇ ತಿಂಗಳು ಚೇತರಿಕೆ

ಉದ್ಯೋಗಾವಕಾಶಗಳ ವಿಚಾರದಲ್ಲಿ ಅಕ್ಟೋಬರ್​ನಲ್ಲಿ ಚೇತರಿಕೆ ಕಾಣಿಸಿದೆ. ಇದರೊಂದಿಗೆ ಸತತ ಎಂಟನೇ ತಿಂಗಳು ಬೆಳವಣಿಗೆ ದಾಖಲಾದಂತಾಗಿದೆ. ದೇಶದ ಉತ್ಪಾದನಾ ವಲಯಗಳಲ್ಲಿ ಸತತ ಎಂಟನೇ ತಿಂಗಳು ನೇಮಕಾತಿಯಲ್ಲಿ ಚೆತರಿಕೆ ಕಂಡುಬಂದಿರುವುದು ಉತ್ಪಾದನೆ ಹೆಚ್ಚಳದ ಸುಳಿವು ನೀಡಿದೆ. ಪರಿಣಾಮವಾಗಿ ಉತ್ಪಾದನೆ, ಮಾರಾಟ ಪ್ರಮಾಣ ಹೆಚ್ಚಲಿದೆ. ಸೆಪ್ಟೆಂಬರ್​ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಉದ್ಯೋಗದಲ್ಲಿ ಶೇಕಡಾ 46ರಷ್ಟು ಹೆಚ್ಚಾಗಿರುವುದು ಇಪಿಎಫ್​ಒ ದಾಖಲೆಗಳಿಂದ ತಿಳಿದುಬಂದಿದೆ ಎಂದು ಸಚಿವಾಲಯ ಹೇಳಿದೆ.

ಐಟಿ, ಶಿಕ್ಷಣ ಕ್ಷೇತ್ರದ್ದೇ ಸಿಂಹಪಾಲು

ಜಾಗತಿಕ ಮಟ್ಟದಲ್ಲಿ ಟೆಕ್ ಕ್ಷೇತ್ರದ ದೊಡ್ಡ ದೊಡ್ಡ ಕಂಪನಿಗಳು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ಉದ್ಯೋಗಾವಕಾಶ ಚೇತರಿಕೆಯಾಗುತ್ತಿದೆ. ನೇಮಕಾತಿ ವಿಚಾರದಲ್ಲಿ ಐಟಿ ಮತ್ತು ಶಿಕ್ಷಣ ಕ್ಷೇತ್ರಗಳು ಮುನ್ನಡೆ ಕಾಯ್ದುಕೊಂಡಿವೆ. ಇದು ಉದ್ಯೋಗಾವಕಾಶದಲ್ಲಿ ಇನ್ನಷ್ಟು ಹೆಚ್ಚಳ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ ಎಂದು ವರದಿ ತಿಳಿಸಿದೆ.

ಕುಸಿದ ನಿರುದ್ಯೋಗ ಪ್ರಮಾಣ; ಸಮೀಕ್ಷಾ ವರದಿ

ದೇಶದ ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ನಡೆಸಿರುವ 16ನೇ ‘ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ’ ವರದಿಯಿಂದ ತಿಳಿದುಬಂದಿದೆ. ನಗರ ಪ್ರದೇಶಗಳಲ್ಲಿ 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರಲ್ಲಿ ನಿರುದ್ಯೋಗ ಪ್ರಮಾಣ ಶೇಕಡಾ 7.2ಕ್ಕೆ ಇಳಿಕೆಯಾಗಿರುವುದನ್ನು ಸಮೀಕ್ಷಾ ವರದಿ ಬಹಿರಂಗಪಡಿಸಿದೆ. ಕಳೆದ ವರ್ಷ ಇದು ಶೇಕಡಾ 9.8ರಷ್ಟಿತ್ತು.

ಜಾಗತಿಕ ಹಣಕಾಸಿನ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕತೆ ಮಧ್ಯಮ ವೇಗದಲ್ಲಿ ಬೆಳವಣಿಗೆ ಹೊಂದಲಿದೆ. ಇದಕ್ಕೆ ಸ್ಥೂಲ ಆರ್ಥಿಕತೆಯಲ್ಲಿನ ಸ್ಥಿರತೆ ಪೂರಕವಾಗಲಿದೆ. ದೇಶದ ಹಣದುಬ್ಬರ ಪ್ರಮಾಣವೂ ತಗ್ಗಲಿದೆ. ಜಾಗತಿಕವಾಗಿ ಹಣಕಾಸು ಪರಿಸ್ಥಿತಿ ಬಿಕ್ಕಟ್ಟು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿರಲಿದೆ. ಸ್ಥೂಲ ಆರ್ಥಿಕತೆಯ ಸ್ಥಿರತೆ ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜ ನೀಡಲಿದೆ ಎಂದೂ ಹಣಕಾಸು ಸಚಿವಾಲಯ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ