AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Micron: ಶೀಘ್ರದಲ್ಲಿ ಬರಲಿದೆ ಮೊತ್ತಮೊದಲ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್; ಮೈಕ್ರೋನ್​ನಿಂದ ಸಿದ್ಧವಾಗುತ್ತಿದೆ ಫ್ಯಾಕ್ಟರಿ

Semiconductor Unit in Gujarat: ಎಲೆಕ್ಟ್ರಾನಿಕ್ ಉತ್ಪನ್ನಗಳ ಪ್ರಮುಖ ಭಾಗವಾಗಿರುವ ಸೆಮಿಕಂಡಕ್ಟರ್ ಚಿಪ್​ಗಳನ್ನು ಅಮೆರಿಕದ ಮೈಕ್ರೋನ್ ಭಾರತದಲ್ಲಿ ತಯಾರಿಸಲಿದೆ. ಇನ್ನು 18 ತಿಂಗಳಲ್ಲಿ ಭಾರತದಲ್ಲಿ ಮೊದಲ ಸೆಮಿಕಂಡಕ್ಟರ್ ಚಿಪ್ ಸಿದ್ಧಗೊಳ್ಳಲಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

Micron: ಶೀಘ್ರದಲ್ಲಿ ಬರಲಿದೆ ಮೊತ್ತಮೊದಲ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್; ಮೈಕ್ರೋನ್​ನಿಂದ ಸಿದ್ಧವಾಗುತ್ತಿದೆ ಫ್ಯಾಕ್ಟರಿ
ಸೆಮಿಕಂಡಕ್ಟರ್ ಚಿಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 26, 2023 | 3:14 PM

Share

ನವದೆಹಲಿ: ಅಮೆರಿಕದ ಮೈಕ್ರೋನ್ ಟೆಕ್ನಾಲಜಿ (Micron Technology) ಸಂಸ್ಥೆ ಗುಜರಾತ್​ನಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪಿಸಲಿದೆ. ಈ ವಿಚಾರವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಜೂನ್ 26, ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಚಿವರು ನೀಡಿದ ಮಾಹಿತಿ ಪ್ರಕಾರ ಘಟಕ ಆದಷ್ಟೂ ಶೀಘ್ರದಲ್ಲಿ ಆರಂಭವಾಗಲಿದ್ದು ಒಂದೂವರೆ ವರ್ಷದಲ್ಲಿ ಮೊದಲ ಚಿಪ್ (Semiconductor chip) ತಯಾರಾಗಲಿದೆಯಂತೆ. ಇದು ಮೊದಲ ಮೇಡ್ ಇನ್ ಇಂಡಿಯಾ ಚಿಪ್ ಆಗಲಿದೆ. ಮೈಕ್ರೋನ್ ಘಟಕವು ಭಾರತದಲ್ಲಿ ಸೆಮಿಕಂಡಕ್ಟರ್ ಇಕೋಸಿಸ್ಟಂ ರೂಪುಗೊಳ್ಳಲು ಸಹಾಯಕವಾಗಲಿದೆ.

ಸೆಮಿಕಂಡಕ್ಟರ್ ಯಾಕೆ ಮುಖ್ಯ?

ಐಟಿ ಸರ್ವಿಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಭಾರತ ಐಟಿ ಕಾಂಪೊನೆಂಟ್​ಗಳ ತಯಾರಿಕೆಯಲ್ಲಿ ಬಹಳ ಹಿಂದುಳಿದಿದೆ. ಐಫೋನ್​ಗಳನ್ನು ಭಾರತದಲ್ಲಿ ಅಸೆಂಬಲ್ ಮಾಡಲಾಗುತ್ತಿದೆಯಾದರೂ ಅದರ ಬಿಡಿಭಾಗಗಳು ಬೇರೆ ಬೇರೆ ದೇಶಗಳಲ್ಲಿ ತಯಾರಾಗುತ್ತವೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ತಯಾರಿಸಲಾಗುತ್ತದಾದರೂ ಹೆಚ್ಚಿನ ಬಿಡಿಭಾಗಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಹೀಗಾಗಿ, ಪಕ್ಕಾ ಭಾರತೀಯ ನಿರ್ಮಾಣದ ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದನೆ ಕಷ್ಟಕಷ್ಟ ಎನ್ನುವಂಥ ಸ್ಥಿತಿ ಇದೆ. ಭಾರತವನ್ನು ವಿಶ್ವ ಫ್ಯಾಕ್ಟರಿಯಾಗಿ ಮಾಡಲು ಹೊರಟಿರುವ ಸರ್ಕಾರಕ್ಕೆ ಇದು ಬಹುದೊಡ್ಡ ಸವಾಲು ಹೌದು. ಈ ನಿಟ್ಟಿನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕ ಬಹಳ ಗಮನಾರ್ಹ ಎನಿಸಿದೆ.

ಇದನ್ನೂ ಓದಿInfosys: ಡೆನ್ಮಾರ್ಕ್ ದೇಶದ ಬ್ಯಾಂಕ್​ಗೆ ಐಟಿ ಸೇವೆಯ ಗುತ್ತಿಗೆ ಇನ್ಫೋಸಿಸ್ ಪಾಲು; ಇನ್ಫೋಸಿಸ್ ಸುಪರ್ದಿಗೆ ಬರಲಿದೆ ಬೆಂಗಳೂರಿನ ಡ್ಯಾನ್​ಸ್ಕ್ ಸೆಂಟರ್

ಎಲೆಕ್ಟ್ರಾನಿಕ್ ವಸ್ತುಗಳಲ್ಲಿ ಸೆಮಿಕಂಡಕ್ಟರ್ ಬಹಳ ಮುಖ್ಯ. ಮೊಬೈಲ್, ಲ್ಯಾಪ್​ಟಾಪ್, ಸರ್ವರ್, ಕ್ಯಾಮೆರಾ ಇತ್ಯಾದಿ ಉತ್ಪನ್ನಗಳಲ್ಲಿ ಸೆಮಿಕಂಡಕ್ಟರ್ ಚಿಪ್ ಬಳಸಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳು, ರೈಲು, ಕಾರು, ಟೆಲಿಕಾಂ ಉಪಕರಣ ಇತ್ಯಾದಿಗೂ ಸೆಮಿಕಂಡಕ್ಟರ್ ಬೇಕು. ಇಷ್ಟು ಮಹತ್ವ ಇರುವ ಸೆಮಿಕಂಡಕ್ಟರ್​ನ ಉತ್ಪಾದನೆಯಲ್ಲಿ ಮೈಕ್ರಾನ್ ವಿಶ್ವದ ಐದನೇ ಅತಿದೊಡ್ಡ ಸಂಸ್ಥೆ ಎನಿಸಿದೆ. ಹೀಗಾಗಿ, ಗುಜರಾತ್​ನಲ್ಲಿ ಮೈಕ್ರೋನ್ ಸೆಮಿಕಂಡಕ್ಟರ್ ಘಟಕ ಬಹಳ ಮಹತ್ವ ಎನಿಸುತ್ತದೆ.

ಕಳೆದ ನಾಲ್ಕು ದಶಕಗಳಿಂದಲೂ ಭಾರತದಲ್ಲಿ ಸೆಮಿಕಂಡಕ್ಟರ್ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಪ್ರಯತ್ನಗಳಾಗುತ್ತಿವೆ. ಇದೀಗ ಮೈಕ್ರೋನ್ ಘಟಕ ಸ್ಥಾಪನೆಯಿಂದ ಪುಷ್ಟಿ ಸಿಕ್ಕಂತಾಗಿದೆ. ಮೈಕ್ರೋನ್ ಘಟಕದಿಂದ 5,000 ದಷ್ಟು ನೇರ ಉದ್ಯೋಗಸೃಷ್ಟಿಯಾಗಬಹುದು. ಹಾಗೆಯೇ, 500 ಉತ್ಕೃಷ್ಟ ಎಂಜಿನಿಯರಿಂಗ್ ಹುದ್ದೆಗಳಿಗೂ ಅವಕಾಶ ಸಿಗುವ ನಿರೀಕ್ಷೆ ಇದೆ. ಇನ್ನು, ಸೆಮಿಕಂಡಕ್ಟರ್ ಫ್ಯಾಕ್ಟರಿಯಿಂದಾಗಿ ಭಾರತದಲ್ಲಿ ಹಲವು ಸ್ಟಾರ್ಟಪ್​ಗಳ ಹುಟ್ಟಿಗೂ ಕಾರಣವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!