Digital Rupee: ಇಂದು ಅಸ್ತಿತ್ವಕ್ಕೆ ಬರಲಿದೆ ಪ್ರಾಯೋಗಿಕ ಡಿಜಿಟಲ್ ರೂಪಾಯಿ

| Updated By: Ganapathi Sharma

Updated on: Nov 01, 2022 | 9:51 AM

ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ, ಡಿಜಿಟಲ್ ರೂಪಾಯಿಯನ್ನು ಇಂದು (ಮಂಗಳವಾರ) ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

Digital Rupee: ಇಂದು ಅಸ್ತಿತ್ವಕ್ಕೆ ಬರಲಿದೆ ಪ್ರಾಯೋಗಿಕ ಡಿಜಿಟಲ್ ರೂಪಾಯಿ
ಆರ್​ಬಿಐ
Follow us on

ಮುಂಬೈ: ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ (Digital Currency), ಡಿಜಿಟಲ್ ರೂಪಾಯಿಯನ್ನು (Digital Rupee) ಇಂದು (ಮಂಗಳವಾರ) ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ತಿಳಿಸಿದೆ. ಸರ್ಕಾರಿ ಸೆಕ್ಯುರಿಟೀಸ್ ವಹಿವಾಟಿಗಾಗಿ ಈ ರೂಪಾಯಿ ಬಳಕೆಯಾಗಲಿದೆ. ಸರ್ಕಾರಿ ಸೆಕ್ಯುರಿಟೀಸ್​ನ ಸೆಕೆಂಡರಿ ಮಾರುಕಟ್ಟೆ ವ್ಯವಹಾರಗಳಿಗಾಗಿ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಳಕೆಯಾಗಲಿದೆ ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ.

ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆಗಾಗಿ 9 ಬ್ಯಾಂಕ್​ಗಳನ್ನು ಆರ್​ಬಿಐ ಗುರುತಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಎಚ್​ಡಿಎಫ್​ಸಿ ಬ್ಯಾಂಕ್​, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಹಾಗೂ ಎಚ್​​ಎಸ್​ಬಿಸಿ ಬ್ಯಾಂಕ್​ಗಳನ್ನು ಪ್ರಾಯೋಗಿಕ ಡಿಜಿಟಲ್ ರೂಪಾಯಿ ವಹಿವಾಟಿಗಾಗಿ ಗುರುತಿಸಲಾಗಿದೆ.

ಇದನ್ನೂ ಓದಿ: Banking Frauds: ಎಚ್ಚರ, ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್ ಇದೆಯೇ ನೋಡಿಕೊಂಡು ವ್ಯವಹರಿಸಿ

ಇದನ್ನೂ ಓದಿ
World Savings Day 2022: ವಿಶ್ವ ಉಳಿತಾಯ ದಿನ; ಮಹತ್ವ, ಇತಿಹಾಸ, ಧ್ಯೇಯದ ಬಗ್ಗೆ ಇಲ್ಲಿದೆ ವಿವರ
ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ
LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?

ಮುಂದಿನ ಒಂದು ತಿಂಗಳ ಒಳಗಾಗಿ ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿಯನ್ನು ಬಿಡುಗಡೆ ಮಾಡುವುದಾಗಿ ಆರ್​ಬಿಐ ತಿಳಿಸಿದೆ. ಆಯ್ದ ಪ್ರದೇಶಗಳಲ್ಲಿ ಸೀಮಿತ ವ್ಯಾಪಾರಿಗಳು ಮತ್ತು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಚಿಲ್ಲರೆ ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರೀಯ ಬ್ಯಾಂಕ್ ತಿಳಿಸಿದೆ.

ಹಣಕಾಸು ಅಕ್ರಮ ಮತ್ತು ಹಣದ ದುರ್ಬಳಕೆಯನ್ನು ತಡೆಗಟ್ಟಲು ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಆರ್​ಬಿಐ ಇತ್ತೀಚೆಗೆ ಹೇಳಿತ್ತು. ಕೆಲವು ಸಮಯದಿಂದ ಡಿಜಿಟಲ್ ಕರೆನ್ಸಿಯ ಸಾಧಕ-ಬಾಧಕಗಳನ್ನು ಅನ್ವೇಷಿಸಲಾಗುತ್ತಿದೆ ಮತ್ತು ಪ್ರಸ್ತುತ ಹಂತ ಹಂತದ ಅನುಷ್ಠಾನದ ಕಾರ್ಯತಂತ್ರದ ಕಡೆಗೆ ಗಮನಹರಿಸಲಾಗುತ್ತಿದೆ. ಹಣಕಾಸಿನ ವ್ಯವಸ್ಥೆಗೆ ಯಾವುದೇ ಅಡ್ಡಿಯಾಗದ ರೀತಿಯಲ್ಲಿ ಡಿಜಿಟಲ್ ರೂಪಾಯಿ ಬಳಕೆ ಮಾಡಲಾಗುವುದು ಮತ್ತು ಇದಕ್ಕೆ ಸಂಬಂಧಿದ ಕಾರ್ಯವ್ಯಾಪ್ತಿಯನ್ನು ಶೀಘ್ರದಲ್ಲೇ ನಿರ್ಧಾರಿಸಲಾಗುವುದು. ಇದೀಗ ಇದನ್ನು ಅನುಷ್ಠಾನಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರ್​ಬಿಐ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Mon, 31 October 22